ಬೆಂಗಳೂರು: ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದ ಪರೇಶ್ ಮೇಸ್ತಾ (Paresh Mestha) ನನ್ನು ಹತ್ಯೆ ಮಾಡಿಲ್ಲ. ಅದು ಆಕಸ್ಮಿಕವಾಗಿ ನಡೆದ ಸಾವು ಎಂದು ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ಈ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.
Advertisement
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಹೊನ್ನಾವರದ ಪರೇಶ್ ಮೇಸ್ತಾನದ್ದು ಹತ್ಯೆ ಅಲ್ಲ, ಆಕಸ್ಮಿಕ ಸಾವು ಎಂಬ ಕೇಂದ್ರೀಯ ತನಿಖಾ ದಳ (CBI)ನ ವಿಚಾರಣಾ ವರದಿ ರಾಜ್ಯ ಸರ್ಕಾರ (State Government) ಮುಖಕ್ಕೆ ಬಡಿದ ತಪರಾಕಿ. ಬಿಜೆಪಿ (BJP) ಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು.
Advertisement
Advertisement
ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತಾನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದು ಬರೆದುಕೊಳ್ಳುವ ಮೂಲಕ ಸಿದ್ಯರಾಮಯ್ಯ (Siddaramaiah) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಪರೇಶ್ ಮೇಸ್ತಾ ಹತ್ಯೆಯಲ್ಲ, ಅದು ಆಕಸ್ಮಿಕ ಸಾವು – ಸಿಬಿಐ ವರದಿ ಸಲ್ಲಿಕೆ
Advertisement
ಏನಿದು ಘಟನೆ..? 2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಹೊನ್ನಾವರದ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಡಿಸೆಂಬರ್ 8ರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶಟ್ಟಿ ಕೆರೆಯಲ್ಲಿ ಶವವಾಗಿ ಪರೇಶ್ ಮೇಸ್ತಾ ಪತ್ತೆಯಾಗಿದ್ದ. ಆತನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದರು. ಅಷ್ಟೇ ಅಲ್ಲದೇ ಈತನನ್ನು ಹಿಂದೂ ಸಂಘಟನೆಗಳು ಹಿಂದೂ ಕಾರ್ಯಕರ್ತ (Hindu Activist) ಎಂದು ಬಿಂಬಿಸಿದ್ದರಿಂದ ಕೊಮು ಸಂಘರ್ಷಕ್ಕೆ ಕಾರಣವಾಗಿತ್ತು.
ಹೊನ್ನಾವರ ರಣರಂಗವಾಗುತ್ತಿದ್ದಂತೆ ಎಚ್ಚೆತ್ತ ಅಂದಿನ ಸಿದ್ದರಾಮಯ್ಯ ಸರ್ಕಾರ ಪರೇಶ್ ಮೇಸ್ತಾ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ನಂತರ ಘಟನೆಗೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಲಾಗಿತ್ತು. ನಾಲ್ಕೂವರೆ ವರ್ಷದ ನಂತರ ಸಿಬಿಐನಿಂದ ವರದಿ ಸಲ್ಲಿಸಿದೆ.