ಮೊಟ್ಟೆಯ ವಿಭಿನ್ನ ಬಳಕೆ: ಕಾಂಗ್ರೆಸ್-ದಾಸೋಹ, ಬಿಜೆಪಿ-ಜನದ್ರೋಹ – ʼಕೈʼ ಟೀಕೆ

Public TV
2 Min Read
egg web 1

ಬೆಂಗಳೂರು: ‘ಮೊಟ್ಟೆ’ಯನ್ನು ಎರಡು ಸರ್ಕಾರಗಳು ವಿಭಿನ್ನವಾಗಿ ಬಳಸಿಕೊಳ್ಳುತ್ತಿವೆ ಕಾಂಗ್ರೆಸ್ ಸರ್ಕಾರವಿದ್ದಾಗ ಮೊಟ್ಟೆ ದಾಸೋಹಕ್ಕೆ ಬಳಕೆಯಾಗಿತ್ತು. ಇದೀಗ ಬಿಜೆಪಿ ಸರ್ಕಾರದಲ್ಲಿ ಮೊಟ್ಟೆ ಜನದ್ರೋಹಕ್ಕಾಗಿ ಬಳಕೆಯಾಗುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.

EGG 1 1

ಟ್ವೀಟ್‍ನಲ್ಲಿ ಏನಿದೆ:
‘ಮೊಟ್ಟೆ’ಯನ್ನು ಎರಡು ಸರ್ಕಾರಗಳು ವಿಭಿನ್ನವಾಗಿ ಬಳಸಿಕೊಳ್ಳುತ್ತವೆ. ಕಾಂಗ್ರೆಸ್ ಸರ್ಕಾರ, ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆ, ಶಾಲೆ ಮಕ್ಕಳ ಬಿಸಿಯೂಟದಲ್ಲಿ ಮೊಟ್ಟೆ ವಿತರಣೆ ಮಾಡಿತ್ತು. ಬಿಜೆಪಿ ಸರ್ಕಾರ, ಮೊಟ್ಟೆ ಖರೀದಿ ಟೆಂಡರ್‌ನಲ್ಲಿ ಕಮಿಷನ್ ಲೂಟಿ, ವಿಪಕ್ಷ ನಾಯಕರ ಮೇಲೆ ಮೊಟ್ಟೆ ದಾಳಿ ಕಾಂಗ್ರೆಸ್ – ದಾಸೋಹ, ಬಿಜೆಪಿ – ಜನದ್ರೋಹ. ಇದನ್ನೂ ಓದಿ: ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್ಸಿಗರೇ – ಅಪ್ಪಚ್ಚು ರಂಜನ್

ಬಿಜೆಪಿ ಗೂಂಡಾಪಡೆಯನ್ನು ಪೋಷಿಸುತ್ತಿರುವ ಬೊಮ್ಮಾಯಿ ಅವರೇ ಸಿದ್ದರಾಮಯ್ಯನವರ ಕಾರಿಗೆ ಮೊಟ್ಟೆ ಎಸೆದದ್ದನ್ನು ತಾವು ಎಂಜಾಯ್ ಮಾಡುತ್ತಿರಬಹುದು. ಆದರೆ ಅದೇ ಗೂಂಡಾಪಡೆ ನಳಿನ್ ಕುಮಾರ್ ಕಟೀಲ್ ಅವರ ಕಾರ್ ಉರುಳಿಸಲು ಹೊರಟಿತ್ತು. ಮುಂದಿನ ಸರದಿ ನಿಮ್ಮದಿರಬಹುದು. ಹಾವಿಗೆ ಹಾಲೆರೆಯುತ್ತಿದ್ದೀರಿ, ಅದು ವಿಷವಲ್ಲದೆ ಅಮೃತ ಕಕ್ಕುವುದಿಲ್ಲ. ನೆನಪಿರಲಿ.

ಸಿದ್ದರಾಮಯ್ಯ ಅವರ ಮೇಲೆ ನಿನ್ನೆಯಷ್ಟೇ ಅಲ್ಲ, ಇಂದೂ ಸಹ ಚಿಕ್ಕಮಗಳೂರಿನಲ್ಲಿ ದಾಳಿಗೆ ಯತ್ನಿಸಲಾಗಿದೆ. ಸರ್ಕಾರ ಏಕೆ ಎಚ್ಚೆತ್ತುಕೊಳ್ಳಲಿಲ್ಲ? ರಕ್ಷಣಾ ಕ್ರಮವನ್ನು ಏಕೆ ಬಿಗಿಗೊಳಿಸಲಿಲ್ಲ? ಸರ್ಕಾರ ಅನಾಹುತಗಳು ಸಂಭವಿಸಲಿ ಎಂದು ಬಯಸುತ್ತಿದೆಯೇ? ಕೊಡಗಿನಲ್ಲಾದ ಘಟನೆಯನ್ನು ಚಿಕ್ಕಮಗಳೂರಿನಲ್ಲೂ ಜರುಗಲು ಬಿಟ್ಟಿದ್ದೇಕೆ ಗೃಹಸಚಿವರೇ? ಸಿದ್ದರಾಮಯ್ಯ ಅವರು ಸಾಗುವ ದಾರಿಯಲ್ಲಿ ಹಾಗೂ ಅವರ ಆಗಮಿಸುವ ಸ್ಥಳದಲ್ಲೇ ಬಿಜೆಪಿ ಗೂಂಡಾಗಳು ಜಾಮಾಯಿಸಿದ್ದರೂ, ಮುನ್ಸೂಚನೆ ಇದ್ದರೂ ಪೊಲೀಸರು ಅವರನ್ನು ವಶಕ್ಕೆ ಪಡೆಯದೆ ಅವರ ರಕ್ಷಣೆಗೇ ನಿಂತಿದ್ದರು. ಗೂಂಡಾಗಳಿಗೆ ರಕ್ಷಣೆ ನೀಡುವುದು ಸರ್ಕಾರದ ನಿರ್ದೇಶನವಾಗಿತ್ತೇ? ಕರ್ತವ್ಯಲೋಪವೆಸಗಿದ ಕೊಡಗು ಜಿಲ್ಲಾ SPಯನ್ನು ಕೂಡಲೇ ಅಮಾನತುಗೊಳಿಸಿ. ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಇದನ್ನೂ ಓದಿ: ಸಾವರ್ಕರ್, ಗೃಹ ಸಚಿವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಕಾಂಗ್ರೆಸ್

ಗೂಂಡಾಪಡೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಎರಡೆರಡು ಬಾರಿ ಮೊಟ್ಟೆ ಎಸೆಯಲು ಪೊಲೀಸರು ಅವಕಾಶ ಕೊಡುತ್ತಾರೆ ಎಂದರೆ ಇದು ಸರ್ಕಾರಿ ಪ್ರಾಯೋಜಿತ ದಾಳಿಯಲ್ಲವೇ? ಗುಪ್ತಚರ ಇಲಾಖೆ ICUನಲ್ಲಿದೆ, ಸರ್ಕಾರ ಸತ್ತಿದೆ ಎಂದು ಕಿಡಿಕಾರಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *