-ಉತ್ತರ ಕೊಡಿ ಮೋದಿ ಎಂದು ಕೇಳಿದ ಮಾಜಿ ಸಿಎಂ
ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ. ಪ್ರತಿ ಟ್ವೀಟ್ ಕೊನೆಗೆ ಉತ್ತರ ಕೊಡಿ ಮೋದಿ ಎಂದು ಹ್ಯಾಶ್ ಟ್ಯಾಗ್ ಬಳಸಿ ಪ್ರಶ್ನಿಸಿದ್ದಾರೆ.
ಪ್ರಧಾನಿ @narendramodi ಅವರೇ,
ರಾಜ್ಯದ ಜನ ನೆರೆನೀರಲ್ಲಿ ಮುಳುಗಿದ್ದಾಗ ಕನಿಷ್ಠ ಸಾಂತ್ವನ ನೀಡಲು ನೀವು ಬರಲಿಲ್ಲ,
ತುಟಿ ಅನುಕಂಪಕ್ಕಾದರೂ ನಿಮ್ಮಿಂದ ನಾಲ್ಕಕ್ಷರ ಸಮಾಧಾನದ ಮಾತು ಹೊರಡಲಿಲ್ಲ.
ಈಗ ರೈತರ ಕಲ್ಯಾಣದ ಡೋಂಗಿ ಕಾರ್ಯಕ್ರಮಗಳ ಪ್ರಚಾರಕ್ಕೆ ನಮ್ಮ ಅಮಾಯಕ ಜನ ನೆನಪಾಗುತ್ತಿದ್ದಾರಾ?#ಉತ್ತರಕೊಡಿಮೋದಿ
— Siddaramaiah (@siddaramaiah) January 2, 2020
Advertisement
ಸಿದ್ದರಾಮಯ್ಯ ಟ್ವೀಟ್:
ಕಾವೇರಿ ನೀರು ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ರಿ, ಈಗ ಮಹದಾಯಿ ಯೋಜನೆಯನ್ನು ತಡೆದು ದ್ರೊಹ ಮಾಡುತ್ತಿದ್ದೀರಿ, ಚುನಾವಣಾ ಕಾಲದಲ್ಲಿ ನಿಮ್ಮ ಜಲಸಂಪನ್ಮೂಲ ಸಚಿವ ಹೇಳಿದ್ದೇನು? ಈಗ ಮಾಡಿದ್ದೇನು? ಕರ್ನಾಟಕದ ಜನರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ, ಅಸೂಯೆ? ಕೇಂದ್ರ- ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ರಾಜ್ಯದ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಭಾಷಣ ಮಾಡಿದ್ರಿ, ಅಮಾಯಕ ಜನ ನಿಮ್ಮ ಮಾತು ನಂಬಿ 25 ಸ್ಥಾನ ಗೆಲ್ಲಿಸಿಕೊಟ್ಟರು. ನಮ್ಮ ಭಾಗ್ಯದ ಬಾಗಿಲು ತೆಗೆಯಲಿಲ್ಲ, ಕರ್ನಾಟಕದ ಪಾಲಿಗೆ ನಿಮ್ಮ ಕಚೇರಿ ಬಾಗಿಲು ಮುಚ್ಚಿದ್ದೀರಿ, ಯಾಕೆ?
Advertisement
ನೆರೆಹಾವಳಿಗೆ ಪರಿಹಾರ ಕೊಡಲಿಲ್ಲ,
ಜಿಎಸ್ ಟಿ ನಷ್ಟಕ್ಕೆ ಪರಿಹಾರ ತುಂಬಿಕೊಡಲಿಲ್ಲ,
ಕೇಂದ್ರ ಅನುದಾನದಲ್ಲಿ ನಮಗೆ ನೀಡಬೇಕಾದ ನ್ಯಾಯಬದ್ಧ ಪಾಲೂ ಕೊಡಲಿಲ್ಲ
ಈಗ ಯಾವ ಮುಖಹೊತ್ತು ರಾಜ್ಯಕ್ಕೆ ಬರ್ತಿದ್ದೀರಿ @narenedramodi ಅವರೇ?#ಉತ್ತರಕೊಡಿಮೋದಿ
— Siddaramaiah (@siddaramaiah) January 2, 2020
Advertisement
ಆಪರೇಷನ್ ಕಮಲ ಮಾಡಿ ಹಿಂದಿನ ಬಾಗಿಲಿನಿಂದ ಸರ್ಕಾರ ರಚಿಸುತ್ತೀರಿ, ನೈತಿಕ ರಾಜಕಾರಣದ ಬಗ್ಗೆ ಭಾಷಣ ಮಾಡ್ತೀರಿ. ರಾಜಕೀಯ ವಿರೋಧಿಗಳ ಮೇಲೆ ಐಟಿ, ಇಡಿ, ಸಿಬಿಐ ಛೂ ಬಿಡ್ತೀರಿ, ಗಣಿಕಳ್ಳರು, ಭೂಕಳ್ಳರನ್ನು ನಿಮ್ಮ ಪಕ್ಷಕ್ಕೆ ಕರೆದು ಮುದ್ದಾಡ್ತೀರಿ. ಇದೇನಾ ನಿಮ್ಮ ”ಸ್ವಚ್ಚ ಭಾರತ್” ?
Advertisement
ಕೇಂದ್ರ- ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ರಾಜ್ಯದ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಭಾಷಣ ಮಾಡಿದ್ರಿ,
ಅಮಾಯಕ ಜನ ನಿಮ್ಮ ಮಾತು ನಂಬಿ 25 ಸ್ಥಾನ ಗೆಲ್ಲಿಸಿಕೊಟ್ಟರು.
ನಮ್ಮ ಭಾಗ್ಯದ ಬಾಗಿಲು ತೆಗೆಯಲಿಲ್ಲ,
ಕರ್ನಾಟಕದ ಪಾಲಿಗೆ ನಿಮ್ಮ ಕಚೇರಿ ಬಾಗಿಲು ಮುಚ್ಚಿದ್ದೀರಿ, ಯಾಕೆ?#ಉತ್ತರಕೊಡಿಮೋದಿ
— Siddaramaiah (@siddaramaiah) January 2, 2020
ನೆರೆಹಾವಳಿಗೆ ಪರಿಹಾರ ಕೊಡಲಿಲ್ಲ, ಜಿಎಸ್ ಟಿ ನಷ್ಟಕ್ಕೆ ಪರಿಹಾರ ತುಂಬಿಕೊಡಲಿಲ್ಲ, ಕೇಂದ್ರ ಅನುದಾನದಲ್ಲಿ ನಮಗೆ ನೀಡಬೇಕಾದ ನ್ಯಾಯಬದ್ಧ ಪಾಲೂ ಕೊಡಲಿಲ್ಲ. ಈಗ ಯಾವ ಮುಖಹೊತ್ತು ರಾಜ್ಯಕ್ಕೆ ಬರ್ತಿದ್ದೀರಿ ಪ್ರಧಾನಿ ಮೋದಿ ಅವರೇ? ರಾಜ್ಯದ ಜನ ನೆರೆನೀರಲ್ಲಿ ಮುಳುಗಿದ್ದಾಗ ಕನಿಷ್ಠ ಸಾಂತ್ವನ ನೀಡಲು ನೀವು ಬರಲಿಲ್ಲ. ತುಟಿ ಅನುಕಂಪಕ್ಕಾದರೂ ನಿಮ್ಮಿಂದ ನಾಲ್ಕಕ್ಷರ ಸಮಾಧಾನದ ಮಾತು ಹೊರಡಲಿಲ್ಲ. ಈಗ ರೈತರ ಕಲ್ಯಾಣದ ಡೋಂಗಿ ಕಾರ್ಯಕ್ರಮಗಳ ಪ್ರಚಾರಕ್ಕೆ ನಮ್ಮ ಅಮಾಯಕ ಜನ ನೆನಪಾಗುತ್ತಿದ್ದಾರಾ? #ಉತ್ತರಕೊಡಿಮೋದಿ
ಕಾವೇರಿ ನೀರು ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ರಿ,
ಈಗ ಮಹದಾಯಿ ಯೋಜನೆಯನ್ನು ತಡೆದು ದ್ರೊಹ ಮಾಡುತ್ತಿದ್ದೀರಿ, ಚುನಾವಣಾ ಕಾಲದಲ್ಲಿ ನಿಮ್ಮ ಜಲಸಂಪನ್ಮೂಲ ಸಚಿವ ಹೇಳಿದ್ದೇನು? ಈಗ ಮಾಡಿದ್ದೇನು?
ಕರ್ನಾಟಕದ ಜನರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ, ಅಸೂಯೆ?#ಉತ್ತರಕೊಡಿಮೋದಿ
— Siddaramaiah (@siddaramaiah) January 2, 2020