ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಶೂಟಿಂಗ್‌ಗೆ ತಾತ್ಕಾಲಿಕ ಬ್ರೇಕ್‌

Public TV
1 Min Read
Siddaramaiah MUDA Scam Leader Ramaiah cinema shooting halted 1

ಕೊಪ್ಪಳ: ಮುಡಾ ಹಗರಣ (MUDA Scam) ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ (Siddaramaiah) ಜೀವನಾಧಾರಿತ ಸಿನಿಮಾದ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಖ್ಯಾತ ತಮಿಳು ನಟ ವಿಜಯ ಸೇತುಪತಿ (Vijay Sethupathi) ನಟನೆಯ ಲೀಡರ್ ರಾಮಯ್ಯ (Leader Ramaiah) ಸಿನಿಮಾವನ್ನು ಬೆಂಗಳೂರು ಮೂಲದ ನಿರ್ದೇಶಕ ಸತ್ಯರತ್ನಂ, ಗಂಗಾವತಿ ಮೂಲದ ಹಯ್ಯಾತ್ ಫಿರ್ ನಿರ್ಮಾಣ ಮಾಡುತ್ತಿದ್ದಾರೆ.

Siddaramaiah MUDA Scam Leader Ramaiah cinema shooting halted 2

ಸದ್ಯ ಮೈಸೂರು (Mysuru) ಭಾಗದಲ್ಲಿ ಸಿಎಂ ಬಾಲ್ಯ ಹಾಗೂ ಶಿಕ್ಷಣ ಸೇರಿ ಹಲವು ಸನ್ನಿವೇಶಗಳ ಶೂಟಿಂಗ್‌ ಪೂರ್ಣವಾಗಿತ್ತು. ಇದನ್ನೂ ಓದಿ: ಈ ಮೈಸೂರು ದಸರಾದ ಗಜಪಡೆ – ಅಭಿಮನ್ಯು & ಟೀಂ ಬಗ್ಗೆ ಇಲ್ಲಿದೆ ಫುಲ್‌ ಡಿಟೇಲ್ಸ್‌

ಮೂಡಾ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆ ಎರಡನೆ ಭಾಗದ ಸನ್ನಿವೇಶಗಳ ಚಿತ್ರಿಕರಣಕ್ಕೆ ಚಿತ್ರ ತಂಡ ಬ್ರೇಕ್‌ ಹಾಕಿ ರಾಜಕೀಯ ಬೆಳವಣಿಗೆಗಳನ್ನು ಗಮನಿಸುತ್ತಿದೆ.

 

Share This Article