ಮೈಸೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ (HD Devegowda) ಎಷ್ಟು ಸೈಟು ಹೋಗಿದೆ ಗೊತ್ತಿದ್ಯಾ? ಪುಟ್ಟಯ್ಯ ಸಿಐಟಿಬಿ ಅಧ್ಯಕ್ಷರಾಗಿದ್ದಾಗ ದೇವೇಗೌಡರ ಕುಟುಂಬಕ್ಕೆ ಎಷ್ಟು ಸೈಟು ಬರೆಸಿಕೊಂಡಿದ್ದಾರೆ ಪಟ್ಟಿ ಕೊಡ್ಲಾ? ಕುಮಾರಸ್ವಾಮಿ ಅವರೂ ಸಹ 40 ವರ್ಷಗಳ ಹಿಂದೆ ಮುಡಾ ಸೈಟ್ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಆರೋಪಿಸಿದರು.
Advertisement
ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ (MUDA Scam) ವಿಚಾರಕ್ಕೆ ಪ್ರತಿಕ್ರಿಯಿಸಿದರು. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಎಷ್ಟು ಸೈಟು ಹೋಗಿದೆ ಗೊತ್ತಿದ್ಯಾ? ಎಂದು ಪ್ರಶ್ನಿಸಿದ ಸಿಎಂ, ಪುಟ್ಟಯ್ಯ ಸಿಐಟಿಬಿ ಅಧ್ಯಕ್ಷರಾಗಿದ್ದಾಗ ದೇವೇಗೌಡರ ಕುಟುಂಬಕ್ಕೆ (HD Devegowda’s Family) ಎಷ್ಟು ಸೈಟು ಬರೆಸಿಕೊಂಡಿದ್ದಾರೇ ಪಟ್ಟಿ ಕೊಡ್ಲಾ? ಕುಮಾರಸ್ವಾಮಿ (HD Kumaraswamy) 40 ವರ್ಷದ ಹಿಂದೆ ಮುಡಾ ಸೈಟು ಪಡೆದಿದ್ದಾರೆ. ಅದರ ಸ್ವಾಧೀನ ಪತ್ರವೂ ಪಡೆದುಕೊಂಡಿದ್ದಾರೆ. ಈಗ ಇಲ್ಲ ಎಂದು ಸುಳ್ಳು ಹೇಳಿದರೇ ಹೇಗೆ? ನಾನು ಸ್ವಾಧೀನ ಪತ್ರ ಪಡೆದಿಲ್ಲ ಎಂದು ಕುಮಾರಸ್ವಾಮಿ ಹೇಳುತ್ತಿರುವುದು ಸುಳ್ಳು. ಇವರೆಲ್ಲಾ ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: Delhi Coaching Centre Flooded: ಐಎಎಸ್ ಆಕಾಂಕ್ಷಿಗಳ ಸಾವು ಪ್ರಕರಣ – ಲೋಕಸಭೆಯಲ್ಲಿ ಚರ್ಚೆ
Advertisement
Advertisement
ಬಿಜೆಪಿ ಬ್ಲ್ಯಾಕ್ ಮೇಲ್ ತಂತ್ರ ಮಾಡುತ್ತಿದೆ, ಇಲ್ಲದ ಹಗರಣವನ್ನ ಸೃಷ್ಟಿ ಮಾಡುತ್ತಿದೆ. ಅವರಿಗೆ ಯಾವು ಐಡಿಯಾಲಾಜಿ ಇಲ್ಲ, ಯಾವತ್ತೂ ನ್ಯಾಯಪರವಾಗಿಲ್ಲ. ಮುಡಾ ಹಗರಣವನ್ನ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇನೆ. ಇದಕ್ಕಿಂತ ಇನ್ನೇನು ಬೇಕು ಹೇಳಿ? ನ್ಯಾಯಾಂಗ ತನಿಖೆಯನ್ನ ಕೇಂದ್ರ ಸಚಿವರು ಅನುಮಾನದಿಂದ ನೋಡಿದರೇ ಅದರಲ್ಲಿ ಅರ್ಥ ಇದ್ಯಾ? ಇವರ ಅವಧಿಯಲ್ಲಿ ಎಷ್ಟು ಭ್ರಷ್ಟಾಚಾರ ನಡೆದಿದೆ ಗೊತ್ತಾ? ಒಂದು ಪ್ರಕರಣವನ್ನಾದರೂ ನ್ಯಾಯಾಂಗ ತನಿಖೆ ಮಾಡಿಸಿದ್ದಾರಾ? ಕೋವಿಡ್ ಸಮಯದಲ್ಲಿ 4,000 ಕೋಟಿ ನುಂಗಿದರು. ಅದನ್ನ ತನಿಖೆ ಮಾಡಿದ್ರಾ? ನಾನು ಬಂದ ಮೇಲೆ ಏಳೆಂಟು ಹಗರಣ ಸಿಬಿಐಗೆ ಕೊಟ್ಟಿದ್ದೇನೆ. ಇವರ ಅವಧಿಯಲ್ಲಿ ಒಂದಾದ್ರು ಸಿಬಿಐಗೆ ಕೊಟ್ಟಿದ್ದಾರಾ ಅಂತ ಪ್ರಶ್ನೆ ಮಾಡಿದರು. ಇದನ್ನೂ ಓದಿ: Valmiki Corporation Scam | ಹೈದರಾಬಾದ್‌ನಲ್ಲೇ ಬೀಡುಬಿಟ್ಟ ಎಸ್‌ಐಟಿ – ಒಟ್ಟು 16 ಕೆಜಿ ಚಿನ್ನ ಜಪ್ತಿ
Advertisement
ಕೇಂದ್ರೀಯ ತನಿಖಾ ದಳವನ್ನ ಚೋರ್ ಬಚಾವ್ ಸಂಸ್ಥೆ ಎನ್ನುತ್ತಿದ್ದ ಬಿಜೆಪಿ ಈಗ ಸಿಬಿಐ, ಸಿಬಿಐ ಎಂದು ಬಾಯಿ ಬಡಿಯುತ್ತಿದೆ. ಮುಡಾ ಹಗರಣ ಅರೊಪದ ವಿಚಾರದಲ್ಲಿ ನನಗೆ ಯಾವ ಬೇಸರವೂ ಆಗಿಲ್ಲ. ತಪ್ಪೇ ಮಾಡಿಲ್ಲ ಅಂದ್ಮೇಲೆ ಬೇಸರ ಏಕೆ ಆಗುತ್ತದೆ? 40 ವರ್ಷದ ರಾಜಕಾರಣದಲ್ಲಿ ನನ್ನ ಮೇಲೆ ಇಂತಹ ಆರೋಪ ಪ್ರಕರಣ ಬಹಳ ನಡೆದವು. ಇದನ್ನ ರಾಜಕೀಯವಾಗಿಯೇ ಎದುರಿಸುತ್ತೇನೆ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಕೇಂದ್ರದಿಂದ ಅನ್ಯಾಯ, ದೇಶ ವಿಭಜನೆ ಕೂಗು ಮತ್ತೊಮ್ಮೆ ಏಳಬಹುದು: ಡಿಕೆ ಸುರೇಶ್