ಚಿಕ್ಕಮಗಳೂರು: 2008ರ ಬಿಜೆಪಿ (BJP) ಸರ್ಕಾರದ ಆಡಳಿತದ ಅವಧಿಯಲ್ಲೂ ಬಾಂಬ್ ಬ್ಲಾಸ್ಟ್ ಆಗಿದೆ. ಆಗ ಬೆಂಗಳೂರು ಏನಾಗಿತ್ತು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಪ್ರಶ್ನಿಸಿದ್ದಾರೆ.
ನಗರದ ಐಡಿಎಸ್‍ಜಿ ಕಾಲೇಜ್ ಆವರಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ (Congress) ಸರ್ಕಾರ ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡ್ತೀವಿ ಎಂದಿತ್ತು. ಈಗ ಬಾಂಬ್ ಬೆಂಗಳೂರು ಆಗಿದೆ ಎಂದ ಬಿಜೆಪಿಗರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ವೇಳೆ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಯ್ತು. ಬೆಂಗಳೂರಿನಲ್ಲಿ ಮಲ್ಲೇಶ್ವರಂನ ಬಿಜೆಪಿ ಕಚೇರಿ ಬಳಿಯೇ ಬಾಂಬ್ ಬ್ಲಾಸ್ಟ್ ಆಯ್ತು. ಆಗ ಯಾರು ಅಧಿಕಾರದಲ್ಲಿದ್ದರು. ಆಗ ಬೆಂಗಳೂರು ಏನಾಗಿತ್ತು ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ಬರೆದು ದೇಶದ ಮಾನ ಕಳೀಬೇಡಿ – ಮಹಿಳಾ ಆಯೋಗದ ಮುಖ್ಯಸ್ಥೆ ತೀವ್ರ ಆಕ್ಷೇಪ
2008 ರಿಂದ 4 ಬಾರಿ ಬಾಂಬ್ ಬ್ಲಾಸ್ಟ್ ಆಗಿದ್ದಕ್ಕೆ ಏನೆಂದು ಕರೆಯಬೇಕು? ಇದು ಎನ್‍ಐಎ ಅವರ ವೈಫಲ್ಯವಲ್ಲವೆ? ನಾನು ಬಾಂಬ್ ಸ್ಫೋಟವನ್ನು ಖಂಡಿಸುತ್ತೇನೆ. ಬಿಜೆಪಿಯವರು ಇದರಲ್ಲಿ ರಾಜಕೀಯ ಮಾಡಬಾರದು ಎಂದಿದ್ದಾರೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe) ಪ್ರಕರಣವನ್ನು ಅಗತ್ಯ ಬಿದ್ದರೆ ಎನ್‍ಐಎ ಗೆ ವಹಿಸುವ ಬಗ್ಗೆ ಚಿಂತನೆ ನಡೆಸುತ್ತೇವೆ. ಪ್ರಕರಣವನ್ನು ಈಗ ಸಿಸಿಬಿಗೆ ವಹಿಸಲಾಗಿದೆ. ತನಿಖೆ ನಡೆಯುತ್ತಿದ್ದು, ಆರೋಪಿ ಇನ್ನೂ ಸಿಕ್ಕಿಲ್ಲ. ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಇದೊಂದು ಸಿಲ್ಲಿ ಘಟನೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಾಂಬ್ ಸ್ಫೋಟ ಪ್ರಕರಣ ಸಿಲ್ಲಿ ಘಟನೆಯಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ.
ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೊಳ್ಳದೇ ಇದ್ದಿದ್ದರೆ ಅಧಿಕಾರಕ್ಕೆ ಬರಲು ಶ್ರಮಿಸಿದ ಕಾರ್ಯಕರ್ತರು ಏನು ಮಾಡಬೇಕು? ಕರ್ನಾಟಕದ ಬಜೆಟ್ 3.70 ಕೋಟಿ ರೂ. ಆಗಿದೆ. ಅದಕ್ಕೆ 2 ಕೋಟಿ ರೂ. ವೆಚ್ಚವಾಗಬಹುದು. ಲೋಕಸಭೆಗೆ ತಯಾರಿ ನಡೆದಿದ್ದು, ಸಿದ್ಧತೆ ಇನ್ನಷ್ಟು ತೀವ್ರಗೊಳಿಸುವುದು. ನಮಗೆ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ. ಇದನ್ನೂ ಓದಿ: ಸೋಮವಾರ ಕಲಬುರಗಿಗೆ ಅಶೋಕ್ – ಹತ್ಯೆಗೊಳಗಾದ ಬಿಜೆಪಿ ಮುಖಂಡರ ಕುಟುಂಬ ಸದಸ್ಯರ ಭೇಟಿ