ಹುಬ್ಬಳ್ಳಿ: ಸತ್ತಿರುವ ವಿಚಾರಕ್ಕೆ ಹೋರಾಟ ಮಾಡಿದ್ದು ಸಣ್ಣ ವಿಚಾರನಾ? ಎಂದು ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದರು.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನ್ಯಾಯಬೇಕೆಂದು ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಈ ನಡುವೆ ಬಿಜೆಪಿ ರಾಜ್ಯಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು, ಸಣ್ಣ ವಿಚಾರ ಇಟ್ಟುಕೊಂಡು ಕಾಂಗ್ರೆಸ್ ಹೋರಾಟ ಮಾಡುತ್ತಿದೆ ಎಂದು ವಿರೋಧ ವ್ಯಕ್ತಪಡಿಸಿದ್ದರು. ಈ ಹೇಳಿಕೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಸತ್ತಿರುವ ವಿಚಾರಕ್ಕೆ ಹೋರಾಟ ಮಾಡಿದ್ದು ಸಣ್ಣ ವಿಚಾರನಾ? ಶಿವಮೊಗ್ಗದಲ್ಲಿ ಹರ್ಷನ ಶವ ಇಟ್ಟುಕೊಂಡು ನಿಷೇಧಾಜ್ಞೆ ಇದ್ದಾಗಲು ಶವಯಾತ್ರೆ ಮಾಡಿದ್ರು. ಬೆಳ್ತಂಗಡಿಯಲ್ಲಿ ದಿನೇಶ್ ಸತ್ತಾಗ ಅವನಿಗೆ ಯಾಕೆ ಪಾದಯಾತ್ರೆ ಮಾಡಲಿಲ್ಲ. ನರಗುಂದ ಮುಸ್ಲಿಂ ವ್ಯಕ್ತಿ ಸತ್ತಾಗ ಯಾಕೆ ಪಾದಯಾತ್ರೆ ಮಾಡಲಿಲ್ಲ ಎಂದು ಪ್ರಶ್ನೆಗಳನ್ನು ಸುರಿಸಿದರು. ಇದನ್ನೂ ಓದಿ: ಸಂತೋಷ್ ಪಾಟೀಲ್ ಕುಟುಂಬಕ್ಕೆ 5 ಲಕ್ಷ ರೂ. ನೀಡುವ ಭರವಸೆ ಕೊಟ್ಟ ಕಾಂಗ್ರೆಸ್ ಶಾಸಕ
Advertisement
Advertisement
ಮಾತೆತ್ತಿದ್ದರೆ ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಅಂತಾರೆ. ಹರ್ಷನಿಗೆ 25 ಲಕ್ಷ ಕೊಟ್ರು. ಆದ್ರೆ ದಿನೇಶ್‍ಗೆ ಯಾಕೆ ಕೊಡಲಿಲ್ಲ. ಬಿಜೆಪಿ ಅವರು ದ್ವೇಷದ ರಾಜಕಾರಣ ಮಾಡಲು ಶುರುಮಾಡಿದ್ದಾರೆ. ಜನರ ಮಧ್ಯ ಬೆಂಕಿ ಹಚ್ಚಲು ಶುರು ಮಾಡಿದ್ದಾರೆ. ಬೆಲೆ ಏರಿಕೆ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದರು.
Advertisement
ಹುಬ್ಬಳಿಯಲ್ಲಿ ಗಲಾಟೆ ಹಿಂದೆ ಕಾಂಗ್ರೆಸ್ ಪಿತೂರಿ ಇದೆ ಎಂದು ಬಿಜೆಪಿ ಟ್ವೀಟ್ ವಿಚಾರವಾಗಿ ಮಾತನಾಡಿದ ಅವರು, ಹುಬ್ಬಳಿಯಲ್ಲಿ ಪೋಸ್ಟ್ ಮಾಡಿದವನು ಯಾರು? ಆತ ಈಗ ಅರೆಸ್ಟ್ ಆಗಿದ್ದಾನೆ. ಆತ ಭಜರಂಗದಳದ ಕಾರ್ಯಕರ್ತ. ಆ ಗಲಾಟೆಯನ್ನು ಮೊದಲು ಹುಟ್ಟಾಕಿದ್ದು ಯಾರು? ಆ ಮೇಲೆ ಗಲಾಟೆಯಾಗಿದೆ. ಗಲಾಟೆ ಹುಟ್ಟಕ್ಕಿದ್ದು ಭಜರಂಗದಳವನು. ಬಿಜೆಪಿ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ- ಸಮಾಜ ಘಾತುಕ ಕೆಲಸ ಮಾಡಿಲ್ಲ: ಅಲ್ತಾಫ್
Advertisement
ಗಲಾಟೆ ಮಾಡಿದವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲ್ಲಿ, ಶಿಕ್ಷೆ ಕೊಡಲಿ. ಆದ್ರೆ ಅವರ ತಪ್ಪುಗಳನ್ನು ಮುಚ್ಚಿಕೊಳ್ಳಲು ಬಿಜೆಪಿ ಸುಳ್ಳು ಹೇಳುತ್ತಿದ್ದಾರೆ. ಅವರ ಭ್ರಷ್ಟಾಚಾರ ಹಾಗೂ ತಪ್ಪುಗಳನ್ನು ಮುಚ್ವಿಕೊಳ್ಳಲು ಕಾಂಗ್ರೆಸ್ ಮೇಲೆ ಹೇಳುತ್ತಾರೆ. ಈಶ್ವರಪ್ಪ, ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಟ್ರು. ಅವರಿಬ್ಬರು ನಮ್ಮ ಪಕ್ಷದವರ? ಇವುಗಳನ್ನ ಮುಚ್ಚಿಕೊಳ್ಳಲು ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದರು.