ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಸಚಿವ ಜಿ.ಟಿ.ದೇವೇಗೌಡ ಕೊಟ್ಟಿರುವ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ.
ಮೈತ್ರಿ ವಿಚಾರದಲ್ಲಿ ಒಂದು ಕಡೆ ತಪ್ಪಾಗಿಲ್ಲ. ಎರಡು ಕಡೆ ಪಕ್ಷದಿಂದಲೂ ತಪ್ಪಾಗಿದೆ. ಆಯಾ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕಿತ್ತು ಎಂದು ಸಚಿವ ಜಿ.ಟಿ. ದೇವೇಗೌಡ ಬುಧವಾರ ಸ್ಫೋಟಕ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆ ಸದ್ಯ ಮೈತ್ರಿ ಸರ್ಕಾರದಲ್ಲಿ ಭಾರಿ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಜಿಟಿಡಿ ಹೇಳಿಕೆಗೆ ತಿರುಗೇಟು ನೀಡಿದ್ದರು. ಆದ್ರೆ ಈಗ ಸಿದ್ದರಾಮಯ್ಯ ಅವರು ಈ ಬಗ್ಗೆ ಪ್ರತಿಕ್ರಿಯಿಸಿ ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲ ಇಲ್ಲ ಎಂದು ಟ್ವೀಟ್ ಮಾಡಿ ಟ್ವಿಟ್ಟರ್ ನಲ್ಲಿ ಟಾಂಗ್ ಕೊಟ್ಟಿದ್ದಾರೆ.
Advertisement
ಸಚಿವ ಜಿ.ಟಿ.ದೇವೇಗೌಡರ ಹೇಳಿಕೆ ನನ್ನಲ್ಲಿಯೂ ಅಚ್ಚರಿ ಮೂಡಿಸಿದೆ. ದೇವೇಗೌಡರ ಮಾತುಗಳು ಸುಳ್ಳಾಗಲಿ ಎಂದು ಆಶಿಸುತ್ತೇನೆ,
ಮೇ ೨೩ರ ಫಲಿತಾಂಶದಲ್ಲಿ ಈ ಹೇಳಿಕೆಯ ಸತ್ಯಾಸತ್ಯತೆ ಗೊತ್ತಾಗಲಿದೆ. ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲ ಇಲ್ಲ. ಕಾದು ನೋಡೋಣ.@INCKarnataka
— Siddaramaiah (@siddaramaiah) May 2, 2019
Advertisement
ಟ್ವೀಟ್‍ನಲ್ಲಿ ಏನಿದೆ?
ಸಚಿವ ಜಿ.ಟಿ.ದೇವೇಗೌಡರ ಹೇಳಿಕೆ ನನ್ನಲ್ಲಿಯೂ ಅಚ್ಚರಿ ಮೂಡಿಸಿದೆ. ದೇವೇಗೌಡರ ಮಾತುಗಳು ಸುಳ್ಳಾಗಲಿ ಎಂದು ಆಶಿಸುತ್ತೇನೆ, ಮೇ 23ರ ಫಲಿತಾಂಶದಲ್ಲಿ ಈ ಹೇಳಿಕೆಯ ಸತ್ಯಾಸತ್ಯತೆ ಗೊತ್ತಾಗಲಿದೆ. ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲ ಇಲ್ಲ. ಕಾದು ನೋಡೋಣ ಎಂದು ಬರೆದು ಕರ್ನಾಟಕ ಕಾಂಗ್ರೆಸ್‍ಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.
Advertisement
Advertisement
ಜಿಟಿಡಿ ಹೇಳಿದ್ದೇನು?
ಮೈತ್ರಿ ವಿಚಾರದಲ್ಲಿ ಒಂದು ಕಡೆ ತಪ್ಪಾಗಿಲ್ಲ. ಎರಡು ಕಡೆ ಪಕ್ಷದಿಂದಲೂ ತಪ್ಪಾಗಿದೆ. ಆಯಾ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕಿತ್ತು. ಆದರೆ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ ಎಂಬ ತೀರ್ಮಾನವೇ ಬಹಳ ದಿನ ನಡೆಯಿತು. ಹೀಗಾಗಿ ಮೈತ್ರಿ ಮಾಡಿಕೊಳ್ಳವ ತೀರ್ಮಾನದಲ್ಲಿ ಬಹಳ ತಡವಾಯಿತು. ತಡವಾಗಿ ಮೈತ್ರಿ ಮಾಡಿಕೊಂಡ ಕಾರಣ ಪಕ್ಷದ ಕಾರ್ಯಕರ್ತರ ನಡುವಿನ ಜಿದ್ದಾಜಿದ್ದು ಸರಿ ಮಾಡಲು ಯಾರಿಂದಲೂ ಆಗಲಿಲ್ಲ ಎಂದು ಜಿಟಿ ದೇವೇಗೌಡರು ಹೇಳಿದ್ದರು.
ಲೋಕಸಭಾ ಚುನಾವಣೆಯ ಮುನ್ನವೇ ನಮ್ಮ ನಾಯಕರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದರೆ ಈ ರೀತಿ ತಪ್ಪು ಆಗುತ್ತಿರಲಿಲ್ಲ. ಜೊತೆಗೆ ಹೆಚ್ಚು ಅನುಕೂಲವಾಗುತಿತ್ತು. ಆದರೂ ಕೆಲವು ಕಡೆ ಚೆನ್ನಾಗಿ ಮಾಡಿದ್ದಾರೆ. ನಮ್ಮ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಉದ್ಭೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ರೀತಿಯಲ್ಲೇ ಹಳೆಯ ಜಿದ್ದಿನಂತೆ ಕಾರ್ಯಕರ್ತರು ಕೆಲಸ ಮಾಡಿದ್ದಾರೆ ಎಂದಿದ್ದರು.