ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೀಡಿರುವ ಹೇಳಿಕೆಯು ಅವರ ಅಂತರಾಳದಿಂದ ಬಂದಿರುವ ಮಾತಲ್ಲ. ಬದಲಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ ಅಂತಾ ಅದರರ್ಥ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಎಸ್‍ವೈಗೆ ತಿರುಗೇಟು ನೀಡಿದರು.
ಕಾಂಗ್ರೆಸ್ ತಿರುಕನ ಕನಸು ಕಾಣ್ತಿದೆ ಎಂಬ ಯಡಿಯೂರಪ್ಪ ಹೇಳಿಕೆಗೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಯಾವ ಪಕ್ಷದವರು, ಅವರು ಬಿಜೆಪಿ ಅವರಾಗಿ ಕಾಂಗ್ರೆಸ್ ಪರವಾಗಿ ಮಾತನಾಡುತ್ತಾರೆ, ಅವರು ಕಾಂಗ್ರೆಸ್ ವಿರುದ್ಧವೇ ಮಾತನಾಡಬೇಕಲ್ಲವಾ ಎಂದು ವ್ಯಂಗ್ಯವಾಡಿದರು.
Advertisement
Advertisement
ಕಾಂಗ್ರೆಸ್ ನಾಯಕರು ಬಿಜೆಪಿಯನ್ನು ನೋಡಿ ಶಿಸ್ತು ಕಲಿಯಲಿ ಎಂಬ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ಎರಡೂವರೆ ಸಾವಿರ ಕೋಟಿ ಕೊಟ್ರೆ ಸಿಎಂ ಮಾಡ್ತಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದರು. ಅಷ್ಟೇ ಅಲ್ಲದೇ ಯಡಿಯೂರಪ್ಪ ಮನೆಯಲ್ಲಿ ಭ್ರಷ್ಟಾಚಾರ ನಡೀತಿದೆ ಎಂದು ಹೇಳಿದ್ದರು. ಇದೇ ಆ ಪಕ್ಷದ ಶಿಸ್ತಾ ಹಾಗಾದರೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: BSY ಮಾಸ್ ಲೀಡರ್, ಆದ್ರೆ ಟಿಕೆಟ್ ಫೈನಲ್ ಮಾಡೋದು ಪಾರ್ಲಿಮೆಂಟರಿ ಬೋರ್ಡ್: ಸಿ.ಟಿ.ರವಿ
Advertisement
ಪಿಎಸ್‍ಐ ಅಕ್ರಮ ನೇಮಕಾತಿ ವಿಚಾರದಲ್ಲಿ ವಿಜಯೇಂದ್ರ ಹೆಸರು ಪ್ರಸ್ತಾಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಚಿವ ಆರ್. ಅಶೋಕ್, ಆರಗ ಜ್ಞಾನೇಂದ್ರ, ವಿಜಯೇಂದ್ರ ಹೆಸರು ಕೇಳಿ ಬರುತ್ತಿದೆ. ಈ ಬಗ್ಗೆ ತನಿಖೆಯಾಗಲಿ ಅಂತಾ ಹೇಳಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.
Advertisement
ಮಾಜಿ ಸಚಿವ ಈಶ್ವರಪ್ಪ ಕೇಸ್‍ನಲ್ಲಿ ಕ್ಲೀನ್ ಚೀಟ್ ಅಂದ್ರೆ ಏನು? ಕೇಸ್ ಮುಚ್ಚಿ ಹಾಕಿದರು ಅಂತಾ ತಾನೆ ಎಂದ ಅವರು, ಬಿ ರಿಪೋರ್ಟ್ ಹಾಕಿರೋದು ಪೋಲಿಸರು ಹೊರತು ಕೋರ್ಟ್ ನೀಡಿರೋದಲ್ಲ. ಸ್ವತಃ ಸಂತೋಷ್ ಪಾಟೀಲ್ ಪತ್ನಿಯೇ ಆರೋಪ ಮಾಡಿದ್ದಾರೆ. ತನಿಖೆಯ ದಿಕ್ಕು ತಪ್ಪುತ್ತಿದೆ ಅಂತಾ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಅದೆಲ್ಲಾ ಏನಾಯಿತು ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಭೂಕುಸಿತದ ಕಾರಣ ತಿಳಿಯಲು ವಿಜ್ಞಾನಿಗಳ ನೆರವು: ಬಿ.ಸಿ.ನಾಗೇಶ್