ಮೈಸೂರು: ಮೋದಿ ಹೋದ ಕಡೆಯಲ್ಲಿ ಬಿಜೆಪಿ ಸೋತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ರಾಹುಲ್ ಗಾಂಧಿ (Rahul Gandhi) ಬಂದ್ರೆ ಬಿಜೆಪಿಗೆ (BJP) ಲಾಭ ವಿಚಾರಕ್ಕೆ ಪ್ರತಿಕ್ರಿಯಿಸಿ, ಪಂಜಾಬ್, ತೆಲಂಗಾಣ, ಕೇರಳದಲ್ಲಿ ಮೋದಿ ಹೋಗಿದ್ದರು. ಅಲ್ಲಿ ಬಿಜೆಪಿ ಸೋತಿಲ್ವಾ? ಅವರು ಕೂಡ ಸೋಲ್ತಾರೆ. ಇದು ಕೇವಲ ರಾಜಕಾರಣಕ್ಕಾಗಿ ಹೇಳುತ್ತಿರುವಾಗಿದೆ ಎಂದು ಸಿಎಂ ಬೊಮ್ಮಾಯಿ ವಿರುದ್ಧ ಕಿಡಿಕಾರಿದರು.
Advertisement
Advertisement
ಡರ್ಟಿ ಪಾಲಿಟಿಕ್ಸ್ ವಿಚಾರಕ್ಕೆ ಕಿಡಿಕಾರಿದ ಅವರು, ನಾವು ಕೀಳು ಮಟ್ಟದ ರಾಜಕಾರಣ ಮಾಡಿಲ್ಲ. ಬಿಜೆಪಿ ಸರ್ಕಾರದವರು ರಾಜಕಾರಣ ಮಾಡುವ ಉದ್ದೇಶದಿಂದ ಮಾತನಾಡುತ್ತಾರೆ. ಡರ್ಟಿ ಪಾಲಿಟಿಕ್ಸ್ ಮಾಡುವುದು ಸಂಘ ಪರಿವಾರದವರು. ಕಾಂಗ್ರೆಸ್‌ನವರು ಹೋರಾಟ ಮಾಡಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಆದರೆ ಅವರು ಮಹಾತ್ಮಗಾಂಧಿ ಕೊಂದವರನ್ನು ಇವರು ಆರಾಧಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸೇತುವೆ ನೆಲಸಮ ಮಾಡುವಾಗ ನದಿಗೆ ಬಿದ್ದ ಜೆಸಿಬಿ- ಪ್ರಾಣಾಪಾಯದಿಂದ ಚಾಲಕ ಪಾರು
Advertisement
Advertisement
ಸಂಘ ಪರಿವಾರದವರು ಗಣೇಶನ ಮೆರವಣಿಗೆಯಲ್ಲಿ ಗೋಡ್ಸೆ ಫೋಟೋ ಇಟ್ಟುಕೊಂಡು ಓಡಾಡ್ತಾರೆ. ಇವರಿಗೆ ಯಾವ ನೈತಿಕತೆ ಇದೆ? ಪಾಪ ಇವರಿಗೆ ಡರ್ಟಿ ಪಾಲಿಟಿಕ್ಸ್ ಅಂದ್ರೆ ಗೊತ್ತಿಲ್ಲ. ಭ್ರಷ್ಟಾಚಾರ ಮಾಡ್ತಿದಿರಾ ಎಂಬುದು ಡರ್ಟಿ ಪಾಲಿಟಿಕ್ಸಾ? ಎಂದು ಟೀಕಿಸಿದರು. ಇದನ್ನೂ ಓದಿ: ಇತಿಹಾಸದಲ್ಲೇ ಮೊದಲ ಬಾರಿಗೆ ಮೈಸೂರು ದಸರಾಗೆ ರಾಷ್ಟ್ರಪತಿಯಿಂದ ಚಾಲನೆ