ಶಿವಮೊಗ್ಗ: ಬಿಜೆಪಿ ತೊಲಗಿಸಬೇಕು ಎಂಬುದೇ ಬಿಜೆಪಿಯವರ (BJP) ಸಂಕಲ್ಪ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸಂಕಲ್ಪ ಯಾತ್ರೆ ವಿಚಾರವಾಗಿ ವ್ಯಂಗ್ಯವಾಡಿದರು. ಹಣ ನೀಡಿ ಜನರನ್ನು ಕರೆದುಕೊಂಡು ಬಂದಿದ್ದಾರೆ. ಅದಕ್ಕಾಗಿ ಕಾರ್ಯಕ್ರಮದಲ್ಲಿ ಜನರು ಕುಳಿತುಕೊಳ್ಳುತ್ತಿಲ್ಲ. ಬಿಜೆಪಿಯವರು ಅಂದ್ರೆ ಡೋಂಗಿಗಳು, ಸುಳ್ಳು ಹೇಳುವವರು ಎಂದು ವ್ಯಂಗ್ಯವಾಡಿದರು.
Advertisement
Advertisement
ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇಲ್ಲ. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಆರ್‌ಎಸ್‍ಎಸ್ (RSS) ಕಾರ್ಯಕರ್ತರು ಕಾನೂನು ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ವಿರೋಧಿಗಳ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡುತ್ತಿದ್ದಾರೆ. ಬಿಜೆಪಿಯವರು ಹೆಣದ ಮೇಲೆ ರಾಜಕಾರಣ ಮಾಡ್ತಿದ್ದಾರೆ ಎಂದು ಕಿಡಿಕಾರಿದರು.
Advertisement
Advertisement
ನಿಷೇಧಾಜ್ಞೆ ಇದ್ದರೂ ಶಿವಮೊಗ್ಗದಲ್ಲಿ ಹರ್ಷನ ಮೆರವಣಿಗೆ ನಡೆಸಿದರು. ಶಿವಮೊಗ್ಗದಲ್ಲಿ (Shivamogga) ಈಶ್ವರಪ್ಪನೇ (Eshwarappa) ಗಲಾಟೆ ಮಾಡಿಸುತ್ತಿರೋದು ಎಂದ ಅವರು, ಮೀಸಲಾತಿ ಬಗ್ಗೆ ಮಾತನಾಡಲು ಶ್ರೀರಾಮುಲುಗೆ ಏನು ಗೊತ್ತಿಲ್ಲ. ಆತನಿಗೆ ಸಂವಿಧಾನವೇ ಗೊತ್ತಿಲ್ಲ. ಆತನೇ ನಾನು ಪೆದ್ದ ಅಂತಾ ಹೇಳಿಕೊಂಡಿದ್ದಾನೆ ಎಂದು ಟೀಕಿಸಿದರು. ಇದನ್ನೂ ಓದಿ: ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದಕ್ಷಿಣದ ಇಬ್ಬರು ಸ್ಟಾರ್ ನಟರು ಗೆಸ್ಟ್ : ಸಿಎಂ ಘೋಷಣೆ
ವಿಧಾನಸಭೆ ಚುನಾವಣೆಗೆ (Election) ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇನ್ನೂ ಎಲ್ಲಿ ಸ್ಪರ್ಧೆ ಮಾಡಬೇಕು ಎಂದು ತೀರ್ಮಾನ ಮಾಡಿಲ್ಲ. ನೋಡೋಣ ಸ್ಪರ್ಧೆ ಬಗ್ಗೆ ಮುಂದೆ ತೀರ್ಮಾನ ಮಾಡುತ್ತೇನೆ. ಎಲ್ಲಾ ಕಡೆಯಿಂದಲೂ ಆಹ್ವಾನ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬುಡಕಟ್ಟು ಜನಾಂಗದವರ ಸಾಂಪ್ರದಾಯಿಕ ನೃತ್ಯಕ್ಕೆ ಹೆಜ್ಜೆ ಹಾಕಿದ ರಾಹುಲ್ ಗಾಂಧಿ