– ಹೈಕಮಾಂಡ್ ಹೇಳಿದಂತೆ ನಡೆದುಕೊಳ್ತೀನಿ – ಚೆಕ್ ಮೇಟ್ ಇಡ್ತಾರಾ ಸಿಎಂ?
– ಬಿಹಾರದಲ್ಲಿ ಇಂಡಿ ಒಕ್ಕೂಟ ಅಧಿಕಾರಕ್ಕೆ ಬರುತ್ತೆ
ಬೆಂಗಳೂರು: ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ (Rahul Gandhi), ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನವಂಬರ್ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು.
ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ (DK Shivakumar) ಮುಖ್ಯಮಂತ್ರಿಯಾಗಲಿ ಎಂಬ ಬಿಹಾರ ಮುಖಂಡರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಪ್ರಶ್ನೆ ಕೇಳ್ತಿದ್ದಂತೆ ಮಾಧ್ಯಮಗಳ ವಿರುದ್ಧ ಗರಂ ಆದರು. ಇದನ್ನೂ ಓದಿ: ಮಾನವ-ವನ್ಯಜೀವಿ ಸಂಘರ್ಷ ನಿಂತ್ರಣಕ್ಕೆ ಬಾರದಿದ್ರೆ ಸಫಾರಿ ಸಂಪೂರ್ಣ ಬಂದ್: ಈಶ್ವರ್ ಖಂಡ್ರೆ
ಯಾರು ಏನೇ ಹೇಳಿದ್ರೂ ಅದು ಮುಖ್ಯವಲ್ಲ. ಕಾಂಗ್ರೆಸ್ ಹೈಕಮಾಂಡ್ ಹೇಳುವುದಷ್ಟೇ ಮುಖ್ಯ. ಕಾಂಗ್ರೆಸ್ ಹೈಕಮಾಂಡ್ ಏನಾದ್ರೂ ಹೇಳಿದ್ಯಾ ಈ ಬಗ್ಗೆ? ಯಾಕೆ ಪದೆ ಪದೆ ಅದನ್ನೇ ಮಾತನಾಡ್ತೀರಾ. ಜನ ಮಾತನಾಡುತ್ತಿಲ್ಲ, ಮಾಧ್ಯಮದವರೇ ಪದೇ ಪದೇ ಮಾತನಾಡುತ್ತಿದ್ದಾರೆ ಅಂತ ಗರಂ ಆದರು. ಇದನ್ನೂ ಓದಿ: ಕ್ರಿಕೆಟ್ ಪ್ರೇಮಿಯಾದ ನನಗಿದು ಖುಷಿ ಕೊಟ್ಟಿದೆ – ವಿಶ್ವ ಕಿರೀಟ ಗೆದ್ದ ವನಿತೆಯರಿಗೆ ಸಿಎಂ, ಡಿಸಿಎಂ ವಿಶ್
ಕಾಂಗ್ರೆಸ್‌ಗೆ ಹೈಕಮಾಂಡ್ ಇದೆ. ಹೈಕಮಾಂಡ್ ಹೇಳುವುದು ಮಾತ್ರವೇ ಮುಖ್ಯ, ಅದೇ ಅಂತಿಮ. ನಾನು ಬಿಹಾರ ಚುನಾವಣೆ ಬಳಿಕ ರಾಹುಲ್ ಗಾಂಧಿ ಅವರನ್ನ ಭೇಟಿ ಮಾಡುತ್ತೇನೆ. ಸಂಪುಟ ಪುನಾರಚನೆ ಬಗ್ಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರೊಟ್ಟಿಗೆ ಚರ್ಚೆ ಮಾಡುತ್ತೇನೆ. ಇದಕ್ಕಾಗಿಯೇ ನವಂಬರ್ 15ಕ್ಕೆ ದೆಹಲಿಗೆ ಹೋಗುತ್ತಿದ್ದೇನೆ. ಪುನಾರಚನೆ ಬಗ್ಗೆ ಹೈಕಮಾಂಡ್ ಏನು ಹೇಳುತ್ತೋ ಆ ರೀತಿ ನಡೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ ಸಿಎಂ.
ನಿತೀಶ್ ಕುಮಾರ್‌ಗೆ ಸಿದ್ಧಾಂತ ಇಲ್ಲ
ಇನ್ನೂ ಬಿಹಾರ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಪ್ರಚಾರಕ್ಕೆ ಇಲ್ಲಿಯವರೆಗೆ ನನ್ನನ್ನ ಕರೆದಿಲ್ಲ, ಕರೆದರೆ ಹೋಗುತ್ತೇನೆ. ಬಿಹಾರದಲ್ಲಿ ಈ ಬಾರಿ ಇಂಡಿ ಒಕ್ಕೂಟ ಅಧಿಕಾರಕ್ಕೆ ಬರುತ್ತೆ. ನಿತೀಶ್ ಕುಮಾರ್ ಬಗ್ಗೆ ಜನಕ್ಕೆ ಬೇಸರ ಬಂದಿದೆ. ಏಕೆಂದ್ರೆ ಅವರಿಗೆ ಯಾವುದೇ ಸಿದ್ಧಾಂತ ಇಲ್ಲ. ಅವರು ಎಲ್ಲಾ ಪಕ್ಷಗಳನ್ನ ಬದಲಾಯಿಸಿದ್ದಾರೆ. ಈ ಕಾರಣ ಜನ ಇಂಡಿ ಒಕ್ಕೂಟದ ಪರ ಮತ ಹಾಕುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮ ಗ್ಯಾರೆಂಟಿಗಳನ್ನೇ ನಿತೀಶ್ ಕುಮಾರ್ ಅಲ್ಲಿ ಘೋಷಣೆ ಮಾಡಿದ್ದಾರೆ. ಆದರು ಅಲ್ಲಿಯ ಜನ ಅವರನ್ನ ಕೈ ಹಿಡಿಯುವುದಿಲ್ಲ. ಕರ್ನಾಟಕದಲ್ಲಿ ಬಿಹಾರದ ಮತದಾರರು ಇದ್ದಾರೆ. ಅವರಿಗೂ ನಮ್ಮ ಒಕ್ಕೂಟಕ್ಕೆ ಮತ ಹಾಕಿ ಎಂದು ಕೇಳುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರದಿಂದ ಪಾಕಿಸ್ತಾನ-ಕಾಂಗ್ರೆಸ್ ಎರಡೂ ಚೇತರಿಸಿಕೊಂಡಿಲ್ಲ: ಬಿಹಾರ ರ‍್ಯಾಲಿಯಲ್ಲಿ ಮೋದಿ ಅಬ್ಬರದ ಭಾಷಣ



