ಕಲಬುರಗಿ: ನನ್ನ ಸ್ನೇಹಿತರು, ಬೆಂಬಲಿಗರು ನನ್ನ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ನನ್ನ ಹುಟ್ಟುಹಬ್ಬ ಆಚರಣೆಗೆ ಬೆಂಬಲಿಗರು ಮುಂದಾದರೆ ಬಿಜೆಪಿಯವರಿಗೆ ಭಯ ಶುರುವಾಗಿದೆ. ಅದಕ್ಕಾಗಿಯೇ ನನ್ನ ಜನ್ಮದಿನದ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
Advertisement
ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಯಡಿಯೂರಪ್ಪ ಸಹ 75ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಆಗ ನಾನು ಅವರ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಹೋಗಿ ವಿಶ್ ಮಾಡಿ ಬಂದಿದ್ದೆ. ಸಿದ್ದರಾಮೋತ್ಸವ ಎಂದು ಕರೆದಿದ್ದೇ ನೀವು ಮಾಧ್ಯಮದವರು. ಅದು ಸಿದ್ದರಾಮೋತ್ಸವ ಅಲ್ಲ. ಸಿದ್ದರಾಮಯ್ಯನವರ 75ನೇ ಅಮೃತ ಉತ್ಸವ ಅಷ್ಟೇ. ನನ್ನ ಹುಟ್ಟುಹಬ್ಬ ಆಚರಣೆ ಬಗ್ಗೆ ನಮ್ಮ ಪಕ್ಷದಲ್ಲಿ ಯಾರಿಗೂ ನಡುಕ ಇಲ್ಲ. ನಮ್ಮವರಲ್ಲಿ ಯಾಕೆ ನಡುಕ ಇರುತ್ತೆ, ಇದೆಲ್ಲಾ ಸುಳ್ಳು ಎಂದಿದ್ದಾರೆ. ಇದನ್ನೂ ಓದಿ: ನನ್ನ ಮಗನ ಕೊಲೆಯಾಗಿದೆ- ಮೃತ ಕಿಕ್ ಬಾಕ್ಸರ್ ತಂದೆ ಆರೋಪ
Advertisement
Advertisement
ದೇವನೂರು ಮಹಾದೇವ ಅವರು ಸಾವರ್ಕರ್, ಹೆಡಗೇವಾರು, ಆರ್‌ಎಸ್‌ಎಸ್‌ನವರು ಯಾವ ಕಾಲದಲ್ಲಿ ಏನೆಲ್ಲ ಹೇಳಿದ್ದಾರೋ ಅದನ್ನೇ ಅವರು ಬರೆದಿದ್ದಾರೆ. ಆದ್ರೆ ಸತ್ಯ ಹೇಳಲು ಬಂದವರ ಮೇಲೆ ಆರೋಪ ಮಾಡೋದು, ಕೇಸ್ ಹಾಕೋದನ್ನು ಬಿಜೆಪಿಯವರು ಮಾಡುತ್ತಾರೆ. ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಮೂಲಭೂತ ಹಕ್ಕಿಗೆ ನಿರ್ಬಂಧ ಹೇರಲು ಇವರು ಯಾರು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಹಿಂದೂ ಯುವತಿಯ ಅಪಹರಣ, ಬಲವಂತದಿಂದ ಮತಾಂತರ ಮಾಡಿ ಮುಸ್ಲಿಂ ಯುವಕನೊಂದಿಗೆ ಮದುವೆ
Advertisement
ಪಿಎಸ್‍ಐ ನೇಮಕಾತಿ ಅಕ್ರಮ ವಿಚಾರದಲ್ಲಿ ಬಂಧಿತವಾಗಿರುವ ಹಿರಿಯ ಪೊಲೀಸ್ ಅಧಿಕಾರಿಗಳ ಮಂಪರು ಪರೀಕ್ಷೆ ನಡೆಸಬೇಕು. ಕೇವಲ ಅಧಿಕಾರಿಗಳನ್ನು ಮಾತ್ರ ಬಂಧಿಸಿದರೆ ಸಾಕಾಗುವುದಿಲ್ಲ. ಈ ಪ್ರಕರಣದಲ್ಲಿ ಶಾಮೀಲಾಗಿರುವ ಪ್ರತಿಯೊಬ್ಬರನ್ನು ಬಂಧಿಸಬೇಕು. ಬಂಧಿತ ಅಧಿಕಾರಿ ಅಮೃತ್ ಪೌಲ್ ಮತ್ತು ಡಿವೈಎಸ್‍ಪಿ ಶಾಂತಕುಮಾರ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಆಗ ಮಾತ್ರ ಎಲ್ಲವೂ ಹೊರಗೆ ಬರಲು ಸಾಧ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಶ್ವಥ್ ನಾರಾಯಣ ವಿರುದ್ಧ ಕಿಡಿ
ಪಿಎಸ್‍ಐ ಹಗರಣದಲ್ಲಿ ಸಿದ್ದರಾಮಯ್ಯರೇ ಪ್ರಮುಖ ಪಾತ್ರಧಾರಿ ಎನ್ನುವ ಸಚಿವ ಅಶ್ವತ್ಥ್ ನಾರಾಯಣ ಹೇಳಿಕೆಗೆ ತೀರುಗೇಟು ನೀಡಿದ ಸಿದ್ದರಾಮಯ್ಯ, ನಾನು ಸಿಎಂ ಆಗಿದ್ದಾಗ ಅವರು ವಿರೋಧ ಪಕ್ಷದಲ್ಲಿದ್ದರು ತಾನೇ, ಆಗ ಇವರು ಯಾಕೆ ಮಾತನಾಡಲಿಲ್ಲ? ಈಗೇಕೆ ಮಾತನಾಡುತ್ತಿದ್ದಾರೆ? ಆಗ ಅಶ್ವತ್ಥ್ ನಾರಾಯಣ ಬಾಯಲ್ಲಿ ಕಡುಬು ಇತ್ತಾ? ಯಾಕೆ ಸುಮ್ಮನಿದ್ದರು ಎಂದು ಪ್ರಶ್ನಿಸಿದ್ದಾರೆ.