Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಹೊಗಳುಭಟ್ಟರ ಸಮೀಕ್ಷಾ ವರದಿಯಲ್ಲಿ ಯಾವ ವಿಶ್ವಾಸಾರ್ಹತೆ ಇರಲು ಸಾಧ್ಯ? – EVM ಸರ್ವೆಗೆ ಸಿಎಂ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೋದಿ ಹೊಗಳುಭಟ್ಟರ ಸಮೀಕ್ಷಾ ವರದಿಯಲ್ಲಿ ಯಾವ ವಿಶ್ವಾಸಾರ್ಹತೆ ಇರಲು ಸಾಧ್ಯ? – EVM ಸರ್ವೆಗೆ ಸಿಎಂ ಕಿಡಿ

Bengaluru City

ಮೋದಿ ಹೊಗಳುಭಟ್ಟರ ಸಮೀಕ್ಷಾ ವರದಿಯಲ್ಲಿ ಯಾವ ವಿಶ್ವಾಸಾರ್ಹತೆ ಇರಲು ಸಾಧ್ಯ? – EVM ಸರ್ವೆಗೆ ಸಿಎಂ ಕಿಡಿ

Public TV
Last updated: January 2, 2026 10:20 pm
Public TV
Share
4 Min Read
Siddaramaiah 10
SHARE

– ವೋಟ್ ಚೋರಿ ಒಂದು ಘೋಷಣೆ ಅಲ್ಲ.. ಅದು ಜಾರ್ಜ್‌ಶೀಟ್‌
– ಹಳೆಯ ಸಮೀಕ್ಷೆ ಬಳಸಿ ವಿಪಕ್ಷಗಳಿಂದ ದಾರಿ ತಪ್ಪಿಸುವ ಪ್ರಯತ್ನ; ಕಿಡಿ

ಬೆಂಗಳೂರು: EVM ಸಮೀಕ್ಷೆಯನ್ನ ಡಾ.ಆರ್ ಬಾಲಸುಬ್ರಮಣ್ಯಂ ಸ್ಥಾಪಿಸಿದ GRAAM ಎಂಬ NGO ನಡೆಸಿದೆ. ಅವರು 2024ರಲ್ಲಿ ಮೋದಿ ಬಗ್ಗೆ ಬರೆದಿರುವ ಪುಸ್ತಕ ನೋಡಿದ್ರೆ ಮೋದಿಯವರ ಅಂಧ ಅಭಿಮಾನಿಯಂತೆ ಕಾಣುತ್ತಾರೆ. ಇಂತಹ ಹೊಗಳುಭಟ್ಟರು ನಡೆಸಿರುವ ಸಮೀಕ್ಷೆ ಆಧರಿಸಿ ವರದಿ ಸಿದ್ಧಪಡಿಸಿರುವುದಕ್ಕೆ ಯಾವ ವಿಶ್ವಾಸಾರ್ಹತೆ ಇರಲು ಸಾಧ್ಯ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕಿಡಿ ಕಾರಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಸುದೀರ್ಘ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಸಿಎಂ ಇವಿಎಂ (Electronic Voting Machines) ಸಮೀಕ್ಷೆ ವಿರುದ್ಧ ಕಿಡಿ ಕಾಡಿದ್ದಾರೆ. ಚುನಾವಣಾ ಆಯೋಗದ ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುವ ವ್ಯರ್ಥಪ್ರಯತ್ನ ರಾಜ್ಯದಲ್ಲಿ ವಿರೋಧಪಕ್ಷಗಳಿಂದ ನಡೆಯುತ್ತಿರುವುದು ವಿಷಾದನೀಯ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಚುನಾವಣಾ ಆಯೋಗದ ಹಳೆಯ ಸಮೀಕ್ಷೆಯೊಂದನ್ನು ಬಳಸಿಕೊಂಡು ಜನರ ದಾರಿತಪ್ಪಿಸುವ ವ್ಯರ್ಥಪ್ರಯತ್ನ ರಾಜ್ಯದಲ್ಲಿ ವಿರೋಧಪಕ್ಷಗಳಿಂದ ನಡೆಯುತ್ತಿರುವುದು ವಿಷಾದನೀಯ. ಚುನಾವಣಾ ಅಕ್ರಮಗಳ ಬಗ್ಗೆ ನಮ್ಮ ನಾಯಕರಾದ @RahulGandhi ಅವರು ಎತ್ತಿರುವ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅದನ್ನು ‘ತಪ್ಪು’ ಎಂದು ಬಿಂಬಿಸುವ ಕುತಂತ್ರ ನಡೆಯುತ್ತಿದೆ.… pic.twitter.com/5SFjJyPpyf

— Siddaramaiah (@siddaramaiah) January 2, 2026

ಸಿಎಂ ಎಕ್ಸ್‌ನಲ್ಲಿ ಏನಿದೆ?
ಚುನಾವಣಾ ಆಯೋಗದ (Election Commission) ಹಳೆಯ ಸಮೀಕ್ಷೆಯೊಂದನ್ನು ಬಳಸಿಕೊಂಡು ಜನರ ದಾರಿತಪ್ಪಿಸುವ ವ್ಯರ್ಥಪ್ರಯತ್ನ ರಾಜ್ಯದಲ್ಲಿ ವಿರೋಧಪಕ್ಷಗಳಿಂದ ನಡೆಯುತ್ತಿರುವುದು ವಿಷಾದನೀಯ. ಚುನಾವಣಾ ಅಕ್ರಮಗಳ ಬಗ್ಗೆ ನಮ್ಮ ನಾಯಕರಾದ ರಾಹುಲ್‌ ಗಾಂಧಿ (Rahul Gandhi) ಅವರು ಎತ್ತಿರುವ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅದನ್ನು ‘ತಪ್ಪು’ ಎಂದು ಬಿಂಬಿಸುವ ಕುತಂತ್ರ ನಡೆಯುತ್ತಿದೆ. ಮಾಧ್ಯಮಗಳಲ್ಲಿ ವರದಿಯಾಗಿರುವ ಈ ಸುಳ್ಳು ಕಥನದ ವಿಶ್ವಾಸಾರ್ಹತೆಯನ್ನು ತುಸು ಆಳಕ್ಕೆ ಇಳಿದು ಪರಿಶೀಲಿಸಿದರೆ ಇದರ ಹಿಂದಿನ ದುರುದ್ದೇಶ ಸ್ಪಷ್ಟವಾಗುತ್ತದೆ.

ಮೊದಲನೆಯದಾಗಿ, ಈ ತಥಾಕಥಿತ ಸಮೀಕ್ಷೆ ರಾಜ್ಯ ಚುನಾವಣಾ ಆಯೋಗವು ಮೇ 2025ರಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಡೆಸಿದ ಸಿಸ್ಟಮ್ಯಾಟಿಕ್ ವೋಟರ್ಸ್‌ ಎಜುಕೇಷನ್ ಆ್ಯಂಡ್ ಎಲೆಕ್ಟೋರಲ್‌ ಪಾರ್ಟಿಸಿಪೇಷನ್‌ (ಸ್ವೀಪ್‌ – SWEEP) ಕಾರ್ಯಕ್ರಮದ ಒಂದು ಭಾಗವಾಗಿದೆ. ಜನರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವುದು ಇದರ ಉದ್ದೇಶವಾಗಿತ್ತೇ ಹೊರತು ಇದು ರಾಹುಲ್ ಗಾಂಧಿ ಅವರು ಆರೋಪಿಸಿರುವ ಮತಗಳ್ಳತನದ ಜನಾಭಿಪ್ರಾಯ ಸಂಗ್ರಹ ಅಲ್ಲ. ಮತದಾರರ ಜಾಗೃತಿಯ ಉದ್ದೇಶವನ್ನು ಚುನಾವಣಾ ಅಕ್ರಮದ ಕುರಿತಾದ ಜನಾಭಿಪ್ರಾಯವೆಂದು ಬಿಂಬಿಸುವುದು ಸರಿಯಲ್ಲ. ಇದು ಜನರ ದಾರಿ ತಪ್ಪಿಸುವ ದುರುದ್ದೇಶದ ರಾಜಕೀಯ ಹುನ್ನಾರವಾಗಿದೆ.

evm counting

2ನೇಯದಾಗಿ, ಸಮೀಕ್ಷೆ ನಡೆಸಲಾದ ಸಮಯವೇ ಸತ್ಯಕ್ಕೆ ಹಿಡಿದ ಕೈಗನ್ನಡಿಯಂತಿದೆ. ಸಮೀಕ್ಷೆಯನ್ನು ಮೇ 2025ರಲ್ಲಿ ನಡೆಸಲಾಗಿದೆ. ರಾಹುಲ್ ಗಾಂಧಿ ಅವರು ಚುನಾವಣಾ ಅಕ್ರಮಗಳ ಕುರಿತು ಪುರಾವೆ ಸಹಿತ ಸುದ್ದಿಗೋಷ್ಠಿ ನಡೆಸಿದ್ದು ಆಗಸ್ಟ್‌ 2025ರಲ್ಲಿ, ಅಂದರೆ ಸಮೀಕ್ಷೆಯಾದ 3 ತಿಂಗಳ ಬಳಿಕ ರಾಹುಲ್‌ ಗಾಂಧಿ ಅವರು ಮತಗಳ್ಳತನದ ವಿರುದ್ಧ ಧ್ವನಿಯೆತ್ತಿದ್ದಾರೆ. ಹಿಂದಿನ ಜನಾಭಿಪ್ರಾಯದ ಡಾಟಾವನ್ನು ಬಳಸಿಕೊಂಡು ನಂತರದ ಮತಗಳ್ಳತನದ ಆರೋಪಕ್ಕೆ ಜನಮನ್ನಣೆ ನೀಡಿಲ್ಲ ಎನ್ನುವುದು ಹಾಸ್ಯಾಸ್ಪದ. ಸತ್ಯಾಂಶವನ್ನು ಪರಿಶೀಲಿಸದೆ ಮಾಡಿರುವ ಈ ವರದಿಗೆ ಸತ್ಯಾಂಶವನ್ನು ಮರೆಮಾಚುವ ಉದ್ದೇಶವಿದ್ದಂತಿದೆ.

ಮೂರನೆಯದಾಗಿ, ಸಮೀಕ್ಷೆಯಲ್ಲಿ ಬಳಸಲಾದ ಮಾದರಿ ಪ್ರಮಾಣವು ರಾಜ್ಯದ ಜನಾಭಿಪ್ರಾಯವೆಂದು ಪರಿಗಣಿಸುವಷ್ಟು ಸಮರ್ಥನೀಯವಾಗಿಲ್ಲ. ಸುಮಾರು 5.3 ಕೋಟಿಗೂ ಹೆಚ್ಚು ವಯಸ್ಕ ಮತದಾರರನ್ನು ಹೊಂದಿರುವ ರಾಜ್ಯದಲ್ಲಿ ಕೇವಲ 5,100 ಜನರನ್ನಷ್ಟೇ ಸಮೀಕ್ಷೆಗೆ ಒಳಪಡಿಸಲಾಗಿದೆ. ಇದು ಮತದಾರರನ್ನು 0.01% ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪ್ರತಿನಿಧಿಸುತ್ತದೆ. ಗಂಭೀರವಾದ ವಿಷಯಕ್ಕೆ ಸಂಬಂಧಿಸಿದಂತೆ ಅಂಕಿಅಂಶಗಳನ್ನು ಸಂಗ್ರಹಿಸುವಾಗ ಇಷ್ಟು ಸಣ್ಣ ಪ್ರಮಾಣದ ಮಾದರಿಯು ಸಮೀಕ್ಷೆಯ ದೊಡ್ಡ ಲೋಪವಾಗಿದೆ. ಬೆಂಗಳೂರು ಸೆಂಟ್ರಲ್‌ ನಂತಹ ಕ್ಷೇತ್ರದಲ್ಲಿ ಮತದಾರರ ಪಟ್ಟಿಯನ್ನು ತಿರುಚಿರುವುದು ಸತ್ಯಾಂಶವಿರುವ ಆರೋಪವಾಗಿದೆ. ಅಂತಹ ಕ್ಷೇತ್ರದಲ್ಲಿ ಸಮೀಕ್ಷೆಗೆ ಒಳಪಟ್ಟಿರುವವರ ಸಂಖ್ಯೆ ಎರಡಂಕಿಯನ್ನು ದಾಟಿಲ್ಲ. ಇದನ್ನೇ ಜನರ ತೀರ್ಮಾನ ಎಂದು ಬಿಂಬಿಸುವುದು ಸಮಂಜಸವೆನಿಸುವುದಿಲ್ಲ.

ನಾಲ್ಕನೆಯದಾಗಿ, ಸಮೀಕ್ಷೆ ನಡೆಸಿದವರ ಹಿನ್ನೆಲೆಯನ್ನು ಮಾಧ್ಯಮಗಳು ಕೂಡಾ ಪರಿಶೀಲಿಸಿದಂತಿಲ್ಲ. ಈ ಸಮೀಕ್ಷೆಯನ್ನು ಡಾ. ಆರ್. ಬಾಲಸುಬ್ರಮಣ್ಯಂ ಸ್ಥಾಪಿಸಿದ GRAAM ಎಂಬ NGO ನಡೆಸಿದೆ. ಬಾಲಸುಬ್ರಮಣ್ಯಂ ಅವರು ಪ್ರಸ್ತುತ ಕೇಂದ್ರ ಸರ್ಕಾರ ನೇಮಿಸಿರುವ ಒಂದು ಹುದ್ದೆಯಲ್ಲಿದ್ದಾರೆ. ಇವರು 2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಬರೆದಿರುವ ಪುಸ್ತಕವನ್ನು ನೋಡಿದರೆ ಈ ಮಹಾಶಯರು ಮೋದಿಯವರ ಅಂಧ ಅಭಿಮಾನಿಯಂತೆ ಕಾಣುತ್ತಾರೆ. ಇಂತಹ ಹೊಗಳುಭಟ್ಟರು ನಡೆಸಿರುವ ಸಮೀಕ್ಷೆಯನ್ನು ಆಧರಿಸಿ ವರದಿಯನ್ನು ಸಿದ್ಧಪಡಿಸಿರುವುದಕ್ಕೆ ಯಾವ ವಿಶ್ವಾಸಾರ್ಹತೆ ಇರಲು ಸಾಧ್ಯ?

ಐದನೆಯದಾಗಿ, ಸಮೀಕ್ಷಾ ವರದಿಯನ್ನು ಉಲ್ಲೇಖಿಸಿ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳಲ್ಲಿ ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧಿಯವರ ಆರೋಪದಲ್ಲಿ ಹುರುಳಿಲ್ಲ ಎನ್ನುವುದನ್ನು ಹೇಳಲು ಪ್ರಯತ್ನಿಸಿರುವುದು ವಿಷಾದನೀಯ. ರಾಹುಲ್‌ ಗಾಂಧಿ ಅವರು ಪ್ರಜಾಪ್ರಭುತ್ವವನ್ನಾಗಲಿ, ಚುನಾವಣೆಯನ್ನಾಗಲಿ ಪ್ರಶ್ನಿಸಿಲ್ಲ. ಅವರು ಚುನಾವಣಾ ಆಯೋಗ ಪಾರದರ್ಶಕವಾಗಿ ತಯಾರಿಸಿರುವ ಮತದಾರರ ಪಟ್ಟಿ ಮತ್ತು ಮತಗಟ್ಟೆಗಳ ಸಿಸಿಟಿವಿ ದೃಶ್ಯಗಳನ್ನು ಕೇಳಿದ್ದಾರೆ. ಇವಿಎಂನ ಕಾರ್ಯವೈಖರಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯುಕ್ತರನ್ನು ನೇಮಕಗೊಳಿಸುವ ಪ್ರಕ್ರಿಯೆ ಬಗ್ಗೆ ಪ್ರಶ್ನಿಸಿದ್ದಾರೆ. ಆದರೆ ಈ ಯಾವ ಪ್ರಶ್ನೆಗಳಿಗೂ ಚುನಾವಣಾ ಆಯೋಗ ಸಮಂಜಸ ಉತ್ತರವನ್ನು ಕೊಟ್ಟಿಲ್ಲ.

ಅಂತಿಮವಾಗಿ, ಮತಗಳವು ಒಂದು ಘೋಷಣೆಯಲ್ಲ. ಅದು ಆರೋಪಪಟ್ಟಿ. ಆಳಂದದಲ್ಲಿ ಸುಮಾರು 5,994 ಅಧಿಕೃತ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಲು ಪ್ರಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಎಸ್ಐಟಿ 22,000 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿದೆ. ಅದರಲ್ಲಿ ಪಕ್ಷದ ಮಾಜಿ ಶಾಸಕರು ಸೇರಿದಂತೆ 7 ಮಂದಿ ಆರೋಪಿಗಳಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದರೂ ಆರೋಪದ ಕುರಿತು ರಾಜ್ಯ ಸರ್ಕಾರವು ಎಸ್ಐಟಿ ತನಿಖೆಯನ್ನು ನಡೆಸಿದೆ. ಆರೋಪವನ್ನು ಮರೆಮಾಚಲು ಚುನಾವಣಾ ಆಯೋಗವೇ ವ್ಯವಸ್ಥಿತವಾಗಿ ಪ್ರಯತ್ನಿಸಿರುವುದು ಕಂಡುಬಂದಿದೆ.

ಚುನಾವಣಾ ಆಯೋಗ ದುರುದ್ದೇಶದಿಂದ ಸಂಶಾಯಸ್ಪದ ಸಂಸ್ಥೆಯ ಮೂಲಕ ನಡೆಸಿರುವ ದೋಷಪೂರಿತ ಸಮೀಕ್ಷೆಯ ವರದಿಯನ್ನು ಬಳಸಿಕೊಂಡು ನಂತರದ ದಿನಗಳಲ್ಲಿ ರಾಹುಲ್ ಗಾಂಧಿಯವರು ಪತ್ರಿಕಾಗೋಷ್ಠಿಯಲ್ಲಿ ಮಾಡಿರುವ ಆರೋಪಗಳನ್ನು ಮುಚ್ಚಿಹಾಕಲು ಸಾಧ್ಯ ಇಲ್ಲ ಎನ್ನುವುದನ್ನು ಭಾರತೀಯ ಜನತಾ ಪಕ್ಷ ಅರ್ಥಮಾಡಿಕೊಳ್ಳಬೇಕು.

ಮೇಲ್ನೋಟದಲ್ಲಿಯೇ ಸ್ಪಷ್ಟವಾಗಿ ಕಾಣುವಂತೆ, ರಾಜಕೀಯ ದುರುದ್ದೇಶದಿಂದಲೇ ಮಾಡಲಾಗಿರುವ ಸಮೀಕ್ಷೆಯ ಒಳ-ಹೊರಗನ್ನು ಸೂಕ್ಷ್ಮವಾಗಿ ಪರಿಶೀಲಿಸದೆ, ಅದರ ಗುಪ್ತ ಅಜೆಂಡಾವನ್ನು ಅರ್ಥಮಾಡಿಕೊಳ್ಳದೆ, ಆ ವರದಿಯ ಕೆಲವು ಭಾಗಗಳನ್ನಷ್ಟೇ ಹೆಕ್ಕಿ ತೆಗೆಯಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

TAGGED:Congress Governmentevmkarnatakanarendra modiRahul GandhisiddaramaiahVote TheftVoting Machinesಇವಿಎಂ ಸಮೀಕ್ಷೆನರೇಂದ್ರ ಮೋದಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
5 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
5 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
6 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
6 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?