ಬೆಂಗಳೂರು : ಮಾಜಿ ಮುಖ್ಯಮಂತ್ರಿ (Former Chief Minister) ದಿವಂಗತ ದೇವರಾಜ್ ಅರಸ್ ( Late Devaraj Urs) ಅವರಿಗೆ ಮರಣೋತ್ತರ ಭಾರತ ರತ್ನ (Bharat Ratna) ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಅಂತ ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.ಇದನ್ನೂ ಓದಿ: ವಿಧಾನ ಪರಿಷತ್‌ನಲ್ಲಿ ಬಹುಮತ ಬಂದ್ರೆ ಬಿಜೆಪಿ ತಂದಿದ್ದ ಭೂ ಕಂದಾಯ ಕಾಯ್ದೆ ರದ್ದು ಮಾಡ್ತೀನಿ: ಸಿದ್ದರಾಮಯ್ಯ
ವಿಧಾನಸೌಧದಲ್ಲಿ ನಡೆದ ದೇವರಾಜ್ ಅರಸ್ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವರಾಜ್ ಅರಸ್ ಸಾಮಾಜಿಕ ನ್ಯಾಯದ ಪರ ಇದ್ದವರು. ಬಡವರು, ದಲಿತರು, ರೈತರು, ಮಹಿಳೆಯರ ಪರ ಇದ್ದವರು. ಅವರ ಕೊಡುಗೆ ಅಪಾರವಾದದ್ದು. ಹೀಗಾಗಿ ದೇವರಾಜ್ ಅರಸ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡಬೇಕು ಅಂತ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ ಎಂದಿದ್ದಾರೆ.
Advertisement
Advertisement
ಇದಲ್ಲದೆ ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ್ ಅರಸ್ ಎಲೆಕ್ಟ್ರಾನಿಕ್ ಸಿಟಿ (Devaraj Urs Electronic City) ಅಂತ ನಾಮಕರಣ ಮಾಡಲು ಪ್ರಕ್ರಿಯೆ ಶುರು ಮಾಡಲಾಗಿದೆ. ಆದಷ್ಟು ಬೇಗ ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ್ ಅರಸ್ ಹೆಸರು ಇಡುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ನವೆಂಬರ್ 1ಕ್ಕೆ ವಿಧಾನಸೌಧದಲ್ಲಿ ನಿರ್ಮಾಣ ಆಗುತ್ತಿರುವ ಭುವನೇಶ್ವರಿ ಪ್ರತಿಮೆಯನ್ನು ಉದ್ಘಾಟನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.ಇದನ್ನೂ ಓದಿ: ಶತಮಾನ ಕಂಡ ಸರ್ಕಾರಿ ಶಾಲೆ ಕಿಡಿಗೇಡಿಗಳಿಂದ ಧ್ವಂಸ