ಬೆಂಗಳೂರು: ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳಡಿ 389.66 ಕೋಟಿ ರೂ.ಗಳು ಬಾಕಿ ಉಳಿದಿದ್ದವು. ಬಾಕಿ ಇರುವುದರಿಂದ ಗೃಹಜ್ಯೋತಿಯಡಿ (Gruha Jyothi Scheme) ಉಚಿತ ಕೊಡುವುದು ಕಷ್ಟವಾಗುತ್ತಿತ್ತು. ಆದ್ದರಿಂದ ಬಾಕಿ ಮೊತ್ತವನ್ನು ಒಂದು ಬಾರಿಗೆ ಮನ್ನಾ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದರು.
ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಇಂಧನ ಇಲಾಖೆ ಪರಿಶೀಲನಾ ಸಭೆಯ ಮುಖ್ಯಾಂಶಗಳು:
2022ನೇ ಇಸವಿಗೆ ಹೋಲಿಸಿದರೆ 2023 ರಲ್ಲಿ ವಿದ್ಯುತ್ ಬೇಡಿಕೆ ಸರಾಸರಿ ಶೇ. 43 ರಷ್ಟು ಹೆಚ್ಚಿದೆ. ಅಕ್ಟೋಬರ್ ತಿಂಗಳಲ್ಲಿ 15,978 ಮೆಗಾವ್ಯಾಟ್ ಬೇಡಿಕೆ ದಾಖಲಾಗಿದೆ. ವಿದ್ಯುತ್ ಬಳಕೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 45 ರಷ್ಟು… pic.twitter.com/JiGYNERHR6
— CM of Karnataka (@CMofKarnataka) November 6, 2023
Advertisement
ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾಗ್ಯಜ್ಯೋತಿ, ಕುಟೀರ ಜ್ಯೋತಿಗೆ 18 ಯೂನಿಟ್ಗಳ ಮಿತಿಯಿತ್ತು. ಅದನ್ನು 40 ಯೂನಿಟ್ಗಳಿಗೆ ನಮ್ಮ ಸರ್ಕಾರವೇ ಹಿಂದೆ ಹೆಚ್ಚಳ ಮಾಡಿತ್ತು. ಈ ಗೃಹಜ್ಯೋತಿ ಬಂದ ನಂತರ ಭಾಗ್ಯಜ್ಯೋತಿ (Bhagya Jyoti Scheme), ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳನ್ನ ಗೃಹಜ್ಯೋತಿ ಯೋಜನೆಯಡಿ ಸೇರಿಸಿ, 58 ಯೂನಿಟ್ವರಗೆ ಉಚಿತವಾಗಿ ವಿದ್ಯುತ್ ನೀಡಲು ತೀರ್ಮಾನಿಸಿದೆ ಎಂದು ಹೇಳಿದರು. ಇದನ್ನೂ ಓದಿ: ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್ – ಸಿಎಂ ಮಹತ್ವದ ಸಭೆಯಲ್ಲಿ ನಿರ್ಧಾರ
Advertisement
Advertisement
ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳಡಿ 389.66 ಕೋಟಿ ರೂ.ಗಳು ಬಾಕಿ ಉಳಿದಿದ್ದವು. ಬಾಕಿ ಇರುವುದರಿಂದ ಗೃಹಜ್ಯೋತಿಯಡಿ ಉಚಿತ ಕೊಡುವುದು ಕಷ್ಟವಾಗುತ್ತಿತ್ತು. ಆದ್ದರಿಂದ ಬಾಕಿ ಮೊತ್ತವನ್ನು ಒಂದು ಬಾರಿಗೆ ಮನ್ನಾ ಮಾಡಲಾಗುತ್ತಿದೆ. ಇನ್ಮುಂದೆ ಬಾಕಿ ಕೊಡಬೇಕಾದ ಅಗತ್ಯವಿಲ್ಲ. ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಜೂನಿಯರ್ ಕಾಲೇಜುಗಳಿಗೆ ನ.1 ರಂದು ಘೋಷಿಸಿದಂತೆ ವಿದ್ಯುತ್ ಹಾಗೂ ನೀರಿನ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಂದಿನ ಮುಂಗಾರಿನ ವರೆಗೆ ಮಳೆ ಬರುವುದಿಲ್ಲ ಎಂಬುದೆಲ್ಲವನ್ನು ಲೆಕ್ಕಾಚಾರ ಮಾಡಿಯೇ ಈ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಶ್ಮಿಕಾ ಅರೆಬೆತ್ತಲೆ ಫೇಕ್ ವಿಡಿಯೋ: ಕಿಡಿಗೇಡಿಗಳಿಗೆ ರಾಜೀವ್ ಚಂದ್ರಶೇಖರ್ ಖಡಕ್ ವಾರ್ನಿಂಗ್
Advertisement
ರಾಜ್ಯದಲ್ಲಿ ವಿದ್ಯುತ್ ಕೊರತೆಯಿದೆ ಎಂದು ನೀರಾವರಿ ಪಂಪ್ಸೆಟ್ಗಳಿಗೆ 7 ಗಂಟೆಗಳ ಕಾಲ ಹರಿಸಲು ಮೊದಲೇ ಘೋಷಣೆ ಮಾಡಿದ್ದೆವು. ಕೆಲವು ಜನ ಸತತವಾಗಿ ಮೂರು ಫೇಸ್ನಲ್ಲಿ 5 ಗಂಟೆ ವಿದ್ಯುತ್ ನೀಡಿದರೆ ಸಾಕು ಎಂದಿದ್ದರು. ಅದಕ್ಕಾಗಿ 5 ಗಂಟೆಗಳ ಕಾಲ 3 ಫೇಸ್ನಲ್ಲಿ ವಿದ್ಯುತ್ ನೀಡುವಂತೆ ಸೂಚನೆ ನೀಡಲಾಗಿತ್ತು. ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ರೈತರು ಭೇಟಿ ಮಾಡಿ ಭತ್ತ ಬೆಳೆಯುವುದರಿಂದ 5 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸಾಕಾಗುವುದಿಲ್ಲ, 7 ಗಂಟೆಗಳ ಕಾಲ ನೀಡಬೇಕೆಂದು ಎಂದು ಮನವಿ ಮಾಡಿದರು. ಕಬ್ಬು ಹಾಗೂ ಭತ್ತ ಕಟಾವಿಗೆ ಬಂದಿರುವುದರಿಂದ ಈ ಭಾಗದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ನೀಡಲು ಸೂಚನೆ ನೀಡಲಾಗಿದೆ. ಉಳಿದ ಭಾಗಗಳಿಗೆ ನೀಡುತ್ತಿದ್ದ 5 ಗಂಟೆಗಳ ವಿದ್ಯುತ್ ಅನ್ನು 7 ಗಂಟೆಗಳ ಕಾಲ ನೀಡಲು ಸಾಧ್ಯವಾಗುತ್ತದೆ ಎಂದು ನಿರ್ಧರಿಸಲಾಗಿದೆ.
ವಿದ್ಯುತ್ ಉತ್ಪಾದನೆಯಲ್ಲಿ ಹೆಚ್ಚಳ: ರಾಯಚೂರು, ಬಳ್ಳಾರಿಯಲ್ಲಿ ಥರ್ಮಲ್ ಘಟಕಗಳಿದ್ದು, ರಾಜ್ಯದಲ್ಲಿ ಥರ್ಮಲ್, ಜಲವಿದ್ಯುತ್, ಸೋಲಾರ್ ಮೂಲಕ ವಿದ್ಯುತ್ ಉತ್ಪಾದಿಸುತ್ತಿದ್ದು. ಥರ್ಮಲ್ ಘಟಕವು 1000 ಮೆಗಾ ವ್ಯಾಟ್ ಉತ್ಪಾದಿಸುತ್ತಿದೆ. ಸುಮಾರು 2,400 ರಿಂದ 3,200 ಮೆ.ವ್ಯಾ, ವಿದ್ಯುತ್ ಉತ್ಪಾದನೆ ಹೆಚ್ಚಾಗಿದೆ. ಕಬ್ಬು ಅರೆಯುವುದು ಪ್ರಾರಮಭವಾಗಿ ಕೋ-ಜನರೇಷನ್ ಆಗಿರುವುದರಿಂದ 450 ಮೆ.ವ್ಯಾಟ್ ಉತ್ಪಾದನೆಯಾಗಿದೆ. ಕೂಡ್ಲಗಿಯಲ್ಲಿ 150 ಮೆ.ವ್ಯಾ ಕರ್ನಾಟಕಕ್ಕೆ ಉಳಿತಾಯವಾಗಲಿದೆ. ಜೊತೆಗೆ ವಿದ್ಯುತ್ ಖರೀದಿ ಮಾಡುವುದರಿಂದ ಹೆಚ್ಚು ವಿದ್ಯುತ್ ದೊರೆಯಲಿದೆ. ಹಾಗಾಗಿ ಪ್ರತಿದಿನ 7 ತಾಸು ವಿದ್ಯುತ್ ಪಂಪ್ಸೆಟ್ಗಳಿಗೆ ನೀಡುತ್ತಿದ್ದೇವೆ. ಕೈಗಾರಿಕೆಗಳಿಗೆ, ಗೃಹಬಳಕೆಗೆ ವಿದ್ಯುತ್ ಕಡಿತ ಮಾಡುವುದಿಲ್ಲ. ಪಂಪ್ಸೆಟ್ಗಳಿಗೆ ನೀಡುವ ವಿದ್ಯುತ್ ಸಹಾಯಧನವನ್ನು ಸರ್ಕಾರವೇ ನೀಡಲಿದೆ. 13,100 ಕೋಟಿ ರೂ.ಗಳನ್ನು ಬಜೆಟ್ನಲ್ಲಿ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.
70% ರಷ್ಟು ಥರ್ಮಲ್ ವಿದ್ಯುತ್ ಉತ್ಪಾದನೆ: 70% ರಷ್ಟು ಥರ್ಮಲ್ ವಿದ್ಯುತ್ ಉತ್ಪಾದನೆಯಾಗುತ್ತಿದೆ 1,000 ಯೂನಿಟ್ವರೆಗೆ ವಿದ್ಯುತ್ ಅನ್ನು ಹೊರಗಿನಿಂದ ಖರೀದಿಸಲಾಗುತ್ತಿದೆ. ವಿದ್ಯುತ್ ಖರೀದಿಯ ಮೊತ್ತ ಎಷ್ಟು ವಿದ್ಯುತ್ ಖರೀದಿಸುತ್ತೇವೆ ಎನ್ನುವುದರ ಮೇಲೆ ಅವಲಂಬಿತವಾಗಿದೆ. ಸ್ಥಳೀಯ ಹಾಗೂ ಆಮದು ಮಾಡಿದ ಕಲ್ಲಿದ್ದಲನ್ನು ಮಿಶ್ರಣ ಮಾಡಿ ಬಳಸುವುದರಿಂದ ವಿದ್ಯುತ್ ಉತ್ಪಾದನೆಯಾಗುತ್ತದೆ. ಉತ್ತರ ಪ್ರದೇಶ ಹಾಗೂ ಪಂಜಾಬ್ ನಡುವೆ ನಮ್ಮದು ವಿನಿಮಯ ಪದ್ದತಿ ಇದೆ. ಈಗ ಪಡೆದು, ಜೂನ್ನಿಂದ ನಾವು ಅವರಿಗೆ ಹಿಂದಿರುಗಿಸುತ್ತೇವೆ. ಯಾವುದೇ ಖಾಸಗಿಯವರಿಂದ ವಿದ್ಯುತ್ ಖರೀದಿಸಿಲ್ಲ ಎಂದು ವಿವರಿಸಿದರು.
ಗೃಹಲಕ್ಷ್ಮಿ ಯೋಜನೆಯ 2 ಸಾವಿರಗಳನ್ನು ಚಿಟ್ ಫಂಡ್ ಹೂಡಿಕೆ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಇಂತಹ ಯಾವುದೇ ಯೋಜನೆಗಳು ಸರ್ಕಾರದ ಮುಂದಿಲ್ಲ. ಮಹಿಳೆಯರಿಗೆ ಡಿಬಿಟಿ ಮೂಲಕ 2 ಸಾವಿರ ರೂ.ಗಳು ನೀಡಲಾಗುತ್ತಿದ್ದು, ಇದನ್ನು ಮುಂದುವರೆಸಲಾಗುವುದು ಎಂದರು.