ಬೆಂಗಳೂರು: ಎಐಸಿಸಿ ಅಧ್ಯಕ್ಷರು (AICC President) ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಚಿವ ಸುರ್ಜೆವಾಲಾ ಅವರಿಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ. ಪಕ್ಷದ ಶಿಸ್ತು ಉಲ್ಲಂಗಿಸಿದ್ದು ಸಾಬೀತಾದರೇ ಸಚಿವ ಸ್ಥಾನದಿಂದ ವಜಾ ಮಾಡುವಂತೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸಂಪುಟ ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
Advertisement
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮಾತಮಾಡಿದ ಅವರು, ಸಚಿವರಿಗೆ ಎಚ್ಚರಿಕೆ ಕೊಟ್ಟರು. ನನ್ನ ಮತ್ತು ಶಿವಕುಮಾರ್ ಇಬ್ಬರೊಟ್ಟಿಗೂ ಕೆ.ಸಿ ವೇಣುಗೋಪಾಲ್ (KC Venugopal) ಮಾತನಾಡಿದ್ದಾರೆ. ನೀವ್ಯಾರು ಇನ್ನುಮುಂದೆ ಸಭೆ ಸೇರುವುದು, ಮಾತನಾಡುವುದು, ಮಾಡಬಾರದು. ಮುಂದೆ ಅಂತಹ ಪರಿಸ್ಥಿತಿ ನಿರ್ಮಾಣವಾದರೆ ನೀವೆ ಜವಾಬ್ದಾರರು ಎಂದಿದ್ದಾರೆ. ಇದನ್ನೂ ಓದಿ: ದಸರಾ ಜಂಬೂಸವಾರಿ ಮೆರವಣಿಗೆಗೆ ಪೊಲೀಸ್ ಇಲಾಖೆ ಬಿಗಿ ಭದ್ರತೆ: ಕಮಿಷನರ್ ಸೀಮಾ ಲಾಟ್ಕರ್
Advertisement
Advertisement
ಮುಂದುವರಿದು, ಎಐಸಿಸಿ ಅಧ್ಯಕ್ಷರು ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರಿಗೆ ಸ್ಪಷ್ಟವಾಗಿ ಸೂಚನೆ ನೀಡಿದ್ದಾರೆ. ಯಾವ ಸಚಿವರು ಸಭೆ ಮಾಡ್ತಾರೆ? ಬಹಿರಂಗವಾಗಿ ಮಾತಾಡ್ತಾರೆ ಅವರಿಗೆ ಎಐಸಿಸಿಯಿಂದ ನೀವೆ ನೋಟಿಸ್ ನೀಡಿ. ಪಕ್ಷದ ಶಿಸ್ತು ಉಲ್ಲಂಗಿಸಿದ್ದು ಸಾಬೀತಾದರೆ ಸಚಿವ ಸ್ಥಾನದಿಂದ ವಜಾ ಮಾಡಿ. ಇವಿಷ್ಟು ನಿರ್ದೇಶನ ಎಐಸಿಸಿ ಅಧ್ಯಕ್ಷರಿಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿಗೆ ಬಂದಿದೆ. ಇದನ್ನ ಕೆ.ಸಿ ವೇಣುಗೋಪಾಲ್ ಹಾಗೂ ಸುರ್ಜೆವಾಲ ಇಬ್ಬರೂ ನನ್ನ ಗಮನಕ್ಕೆ ತಂದಿದ್ದಾರೆ. ನಿಮ್ಮ ಸಭೆ, ನಿಮ್ಮ ಮಾತು, ನಿಮ್ಮ ಜವಬ್ದಾರಿ. ಈ ವಿಚಾರದಲ್ಲಿ ಯಾವುದೂ ನನ್ನ ಕೈಯಲ್ಲಿ ಇಲ್ಲ ಎಂದು ನೇರವಾಗಿ ಸಿಎಂ ಹೇಳಿದ್ದಾರೆ.
Advertisement
ಇದಕ್ಕೂ ಮುನ್ನ ಸಂಪುಟ ಸಭೆ ಆರಂಭವಾಗುತ್ತಿದ್ದಂತೆ ಮೊದಲಿಗೆ ಸಚಿವರ ಸಭೆ ಬಗ್ಗೆ ಸಿಎಂ ಮಾತು ಆರಂಭಿಸಿದರು. ಈ ವೇಳೆ ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಅವರ ಮಾತಿನ ಬಗ್ಗೆ ಅವರ ಮಗ ಶಾಸಕ ಪ್ರಕಾಶ್ ಕೋಳಿವಾಡ ಕ್ಷಮೆ ಕೇಳಿದರು. ಬಳಿಕ ಸಿಎಂ ಅದು ಮುಗಿದ ಅಧ್ಯಾಯ, ಆದ್ರೆ ಸಚಿವರು ನೀವೇ ಮಾತಾನಾಡಿದರೆ ಹೇಗೆ? ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ನಾವು ಎಲ್ಲಿಯೂ, ಯಾವತ್ತೂ ಸಿಎಂ ಪದವಿ ಬಗ್ಗೆ ಚರ್ಚೆ ಮಾಡಿಲ್ಲ: ಸಚಿವ ಪರಮೇಶ್ವರ್
ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಸಚಿವ ಮಹಾದೇವಪ್ಪ, ಪರಮೇಶ್ವರ್, ಸತೀಶ್ ಜಾರಕಿಹೋಳಿ ಸ್ಪಷ್ಟನೆ ನೀಡಿದ್ದಾರೆ. ಇಲಾಖೆ ವಿಚಾರಕ್ಕೆ ಭೇಟಿ ಮಾಡಿದ್ದರು ಅದು ಮಾಧ್ಯಮಗಳಲ್ಲಿ ಹಾಗೆ ಸುದ್ದಿ ಆಗಿದೆ ಅಷ್ಟೆ. ಮೈಸೂರಲ್ಲಿ ಎಲ್ಲರನ್ನೂ ನಾನೇ ಊಟಕ್ಕೆ ಕರೆದೆ ಅದಕ್ಕೆ ಎಲ್ಲರೂ ಸೇರಿದ್ದೆವು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಏನೇ ಇರಲಿ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.