ಉಡುಪಿ: ಪಠ್ಯದ ವಿಚಾರದಲ್ಲಿ ತಾರತಮ್ಯ ಬೇಡ. ಶಾಲೆಯಲ್ಲಿ ನೈತಿಕ ವಿದ್ಯೆ ಕಲಿಹಿಸುವುದಾದರೆ ಕಲಿಸಿ. ಭಗವದ್ಗೀತೆ ಕುರಾನ್ ಬೈಬಲ್ ಯಾವುದನ್ನಾದರೂ ಕಲಿಸಿ. ಆದರೆ ಶಾಲೆಯಲ್ಲಿ ತಾರತಮ್ಯ ಮಾಡಲು ಹೋಗಬೇಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಉಡುಪಿ ಜಿಲ್ಲೆ ಹಿರಿಯಡ್ಕದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ದೇಶದಲ್ಲಿ ಎಲ್ಲರೂ ಸ್ವತಂತ್ರರು, ನಮ್ಮದು ಸ್ವತಂತ್ರ ಭಾರತ ದೇಶವಾಗಿದೆ. ಯಾರು ಯಾರಿಗೂ ಬೆದರಿಕೆ ಹಾಕುವಂತಿಲ್ಲ. ವ್ಯಾಪಾರ ವಹಿವಾಟು ನಡೆಸಲು ಬೆದರಿಕೆ ಹಾಕುವವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಮದರಸಾಗಳಲ್ಲಿ ಶಿಕ್ಷಣ ಪದ್ಧತಿ ತರುವ ಪ್ರಯತ್ನ ಮಾಡ್ತೇವೆ: ಬಿ.ಸಿ ನಾಗೇಶ್
ಮುಸಲ್ಮಾನರಿಗೆ ವ್ಯಾಪಾರ ಬಹಿಷ್ಕಾರ ವಿಚಾರವಾಗಿ ಮಾತನಾಡಿ, ಕಾನೂನು ಇದಕ್ಕೆ ಅವಕಾಶ ಕೊಡುವುದಿಲ್ಲ. ಯಾರದೇ ಜಾತ್ರೆಯಲ್ಲಿ ಯಾರು ಬೇಕಾದರೂ ಭಾಗವಹಿಸಬಹುದು. ಮನೆ, ಖಾಸಗಿ ಕಾರ್ಯಕ್ರಮವಾದರೆ ಅದು ಒಕೆ ಆದರೆ, ಇದು ಕಾನೂನು ವಿರುದ್ಧವಾದ ನಡವಳಿಕೆ. ಸರ್ಕಾರ ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕರಾವಳಿ ಮಲೆನಾಡು ಬಯಲುಸೀಮೆ ಎಲ್ಲಾದರೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಗುಜರಾತ್ ಫೈಲ್ಸ್ ಚಿತ್ರಕ್ಕಾಗಿ ಪ್ರಧಾನಿ ಮೋದಿಗೆ ಸವಾಲು ಹಾಕಿದ ಬಾಲಿವುಡ್ ನಿರ್ದೇಶಕ