Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದಲಿತರ ಬಗ್ಗೆ ಮಾತಾಡೋ ನೈತಿಕತೆ ಬಿಜೆಪಿಯವರಿಗೆ ಇಲ್ಲ – ಸಿದ್ದರಾಮಯ್ಯ

Public TV
Last updated: August 22, 2024 4:21 pm
Public TV
Share
3 Min Read
siddaramaiah 5
SHARE

ಬೆಂಗಳೂರು: ದಲಿತ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಅವಹೇಳನಕಾರಿ ಮಾತು ಆಡ್ತಿದೆ, ಹೋರಾಟ ಮಾಡ್ತಿದೆ ಎಂಬ ಬಿಜೆಪಿ ಪ್ರತಿಭಟನೆಗೆ (BJP Protest) ಸಿಎಂ ಸಿದ್ದರಾಮಯ್ಯ (Siddaramaiah) ತಿರುಗೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಬಿಜೆಪಿಗೆ ತಿರುಗೇಟು ಕೊಟ್ಟಿರುವ ಸಿಎಂ ಬಿಜೆಪಿ ದಲಿತ ವಿರೋಧಿ ಅಂತ ಕಿಡಿಕಾರಿದ್ದಾರೆ.

ದಲಿತರನ್ನು ಬಳಸಿ ಬಿಸಾಡುವ @BJP4India ಮತ್ತು ಸಂಘ ಪರಿವಾರದ ಪಿತೂರಿ ರಾಜಕಾರಣವನ್ನು ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ. ಈಗ ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ. ಕನಿಷ್ಠ ಅಟಲ್ ಬಿಹಾರಿ ವಾಜಪೇಯಿ ಅವರು ದಲಿತ ಸಮುದಾಯಕ್ಕೆ ಸೇರಿರುವ ಬಂಗಾರು ಲಕ್ಷ್ಮಣ್…

— Siddaramaiah (@siddaramaiah) August 22, 2024

ರಾಜ್ಯದ ಘನತೆವೆತ್ತ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋಟ್‌ (Thawar chand Gehlot) ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ ಬಿಜೆಪಿ ನಾಯಕರು “ದಲಿತ ಗುರಾಣಿ” ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ಹಿಂದೂಗಳಲ್ಲಿ (Hindu) ಜಾತಿಯೇ ಇಲ್ಲ, ಧರ್ಮವೇ ಎಲ್ಲ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ. ರಾಜ್ಯಪಾಲರಿಗೆ ಅವಮಾನವಾಗಿದೆ ಎಂದು ಪ್ರತಿಭಟಿಸುತ್ತಿರುವ ರಾಜ್ಯದ ಬಿಜೆಪಿ ನಾಯಕರಿಗೆ ನನ್ನ ಕೆಲವು ಸರಳ ಪ್ರಶ್ನೆಗಳಿವೆ. ಇದನ್ನೂ ಓದಿ: ಟ್ರೈನಿ ವೈದ್ಯೆ ಮೇಲೆ ನಡೆದಿರೋದು ಗ್ಯಾಂಗ್‌ ರೇಪ್‌ ಅಲ್ಲ – ಪ್ರಾಥಮಿಕ ತನಿಖೆ ಬಳಿಕ CBI ಮೂಲಗಳಿಂದ ಮಾಹಿತಿ

ರಾಜ್ಯದ ಘನತೆವೆತ್ತ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋತ್ ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ @BJP4Karnataka ನಾಯಕರು “ದಲಿತ ಗುರಾಣಿ” ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ‘ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ’ ಎಂದು ಉಪದೇಶ ಮಾಡುತ್ತಿರುವ…

— Siddaramaiah (@siddaramaiah) August 22, 2024

ಮೊದಲನೆಯದಾಗಿ ದಲಿತ ಸಮುದಾಯಕ್ಕೆ (Dalits Community) ಸೇರಿರುವ ಥಾವರಚಂದ್ ಗೆಹ್ಲೋಟ್‌ ಅವರ ಬಗ್ಗೆ ನಿಮ್ಮಲ್ಲಿ ಅಷ್ಟೊಂದು ಗೌರವ ಮತ್ತು ಅಭಿಮಾನವಿದ್ದರೇ ಕೇಂದ್ರ ಸಚಿವ ಸಂಪುಟದಲ್ಲಿರಬೇಕಾಗಿದ್ದ ಅವರನ್ನು ಇಲ್ಲಿ ತಂದು ಪಂಜರದ ಗಿಣಿಯನ್ನಾಗಿ ಯಾಕೆ ಮಾಡಿದ್ದೀರಿ? ಮಾರ್ಗದರ್ಶಕ ಮಂಡಳಿ ಎಂಬ ವನವಾಸಾಶ್ರಮ ಸೇರುವಷ್ಟು ವಯಸ್ಸಾಗದೇ ಇದ್ದರೂ ಅವರ ಸಕ್ರಿಯ ರಾಜಕೀಯ ಜೀವನವನ್ನು ಯಾಕೆ ಮೊಟಕುಗೊಳಿಸಿದಿರಿ? ಕೇಂದ್ರ ಸಚಿವ ಸ್ಥಾನದಿಂದ ವಂಚಿತರನ್ನಾಗಿ ಮಾಡಿ, ತಮ್ಮ ರಾಜಕೀಯ ವಿರೋಧಿಗಳ ವಿರುದ್ಧದ ದ್ವೇಷದ ರಾಜಕಾರಣಕ್ಕೆ ದಲಿತ ಸಮುದಾಯದ ನಾಯಕನನ್ನು ದುರ್ಬಳಕೆ ಮಾಡಿಕೊಳ್ಳುವುದು ಆ ಸಮುದಾಯಕ್ಕೆ ಮಾಡುವ ಅನ್ಯಾಯ-ಅವಮಾನ ಅಲ್ಲವೇ? ಇದನ್ನೂ ಓದಿ: ಧರ್ಮಗುರುಗಳ ಮೂಲಕ ಮುಸ್ಲಿಮರ ವಿವಾಹ ನೋಂದಣಿಗೆ ತಡೆ – ಹೊಸ ಮಸೂದೆಗೆ ಅಸ್ಸಾಂ ಕ್ಯಾಬಿನೆಟ್ ಅನುಮೋದನೆ

BY Vijayendra Mysuru Chalo

ಬಿಜೆಪಿ ನಾಯಕರೇ, ದಲಿತ ನಾಯಕರೊಬ್ಬರನ್ನು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಳಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ?ದಲಿತರನ್ನು ಬಳಸಿ ಬಿಸಾಡುವ ಬಿಜೆಪಿ ಮತ್ತು ಸಂಘ ಪರಿವಾರದ ಪಿತೂರಿ ರಾಜಕಾರಣವನ್ನು ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ. ಈಗ ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ. ಕನಿಷ್ಠ ಅಟಲ್ ಬಿಹಾರಿ ವಾಜಪೇಯಿ ಅವರು ದಲಿತ ಸಮುದಾಯಕ್ಕೆ ಸೇರಿರುವ ಬಂಗಾರು ಲಕ್ಷ್ಮಣ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಆದರೆ ಬಿಜೆಪಿಯೊಳಗಿನ ಸಂಘಿ ಮನಸ್ಸು ಅದನ್ನು ಸಹಿಸಿಕೊಳ್ಳದೇ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿತು, ಕೊನೆಗೆ ಅದೇ ಕೊರಗಿನಲ್ಲಿ ಅವರು ಸಾವಿಗೀಡಾದರು.

hassana bjp jds ct ravi vijayendra prajwal reavnna 2

ದಲಿತ ಸಮುದಾಯಕ್ಕೆ ಸೇರಿರುವ ನಮ್ಮ ಪಕ್ಷದ ಈಗಿನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಹಿರಿಯ ನಾಯಕರು ಎಷ್ಟು ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳುತ್ತಿದ್ದಾರೆ ಎನ್ನುವುದನ್ನು ನೋಡಿ ಕಲಿಯಿರಿ. ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ, ಮೀಸಲಾತಿಯನ್ನು ವಿರೋಧಿಸುತ್ತಿರುವ ಮತ್ತು ಜಾತಿ ತಾರತಮ್ಯವನ್ನು ಅಂತರಂಗದಲ್ಲಿ ಒಪ್ಪಿಕೊಂಡು ಬಹಿರಂಗದಲ್ಲಿ ಜಾತ್ಯತೀತತೆಯ ಸೋಗುಹಾಕಿರುವ ನಿಮಗೆ ದಲಿತರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ನಿಮಗೆ ದಲಿತ ಸಮುದಾಯದ ಬಗ್ಗೆ ನಿಜವಾಗಿಯೂ ಗೌರವ ಇದ್ದರೇ ಥಾವರ ಚಂದ್ ಗೆಹ್ಲೋಟ್‌ ಅವರ ಮೇಲೆ ಕೆಟ್ಟ ಕೆಲಸ ಮಾಡಲು ರಾಜಕೀಯ ಒತ್ತಡ ಹೇರಲು ಹೋಗದೆ, ಅವರು ಸಂವಿಧಾನದತ್ತವಾಗಿ ಕರ್ತವ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಿ, ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: J&K Assembly Polls | ಎನ್‌ಸಿ-ಕಾಂಗ್ರೆಸ್ ಮೈತ್ರಿ ಬಹುತೇಕ ಖಚಿತ; ಮುಂದುವರಿದ ಸೀಟು ಹಂಚಿಕೆ ಮಾತುಕತೆ

TAGGED:bjpcongressdalitssiddaramaiahthawar chand gehlotಕಾಂಗ್ರೆಸ್ಥಾವರ ಚಂದ್ ಗೆಹ್ಲೋಟ್‌ದಲಿತರುಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Priyanka Chopra
ಪತಿ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಿಯಾಂಕಾ
Bollywood Cinema Latest
Vajreshwari Combines
ಪಾರ್ವತಮ್ಮ ರಾಜ್‌ಕುಮಾರ್ ಕನಸಿನ ಕೂಸಿಗೆ 50 ವರ್ಷ
Cinema Latest Sandalwood Top Stories
Darshan in Thailand 1
ದರ್ಶನ್‌ಗೆ ನೋ ಟೆನ್ಷನ್ – ಜಾಲಿ ಮೂಡಲ್ಲಿ ಥಾಯ್ಲೆಂಡ್‌ನಲ್ಲಿ ಬಿಂದಾಸ್‌ ಪಾರ್ಟಿ
Cinema Latest Sandalwood Top Stories
ram charan sukumar
ಹೊಸ ವರ್ಷಕ್ಕೆ ಪುಷ್ಪಾ ಡೈರೆಕ್ಟರ್ ಜೊತೆ ರಾಮ್‌ಚರಣ್ ಸಿನಿಮಾ..!?
Cinema Latest South cinema Top Stories
vijay deverakonda 4
ದಿಢೀರ್‌ ಆಸ್ಪತ್ರೆಗೆ ದಾಖಲಾದ ನಟ ವಿಜಯ್‌ ದೇವರಕೊಂಡ
Cinema Latest National South cinema Top Stories

You Might Also Like

Uttar Pradesh women suicide
Crime

ವರದಕ್ಷಿಣೆ ಕಿರುಕುಳ ಆರೋಪ – ದೇಹದ ಮೇಲೆ ಡೆತ್‌ನೋಟ್ ಬರೆದು ಮಹಿಳೆ ಆತ್ಮಹತ್ಯೆ

Public TV
By Public TV
5 minutes ago
Kerala Nurse Nimisha Priya
Latest

ನಿಮಿಷಾ ಪ್ರಿಯಾರನ್ನ ಸುರಕ್ಷಿತವಾಗಿ ವಾಪಸ್ ಕರೆತರಲು ಶಕ್ತಿಮೀರಿ ಪ್ರಯತ್ನ – ‘ಸುಪ್ರೀಂ’ಗೆ ಕೇಂದ್ರದಿಂದ ಮಾಹಿತಿ

Public TV
By Public TV
18 minutes ago
Koppal Yoga Teacher Dies by HeartAttack
Districts

ಕೊಪ್ಪಳ | ಹೃದಯಾಘಾತಕ್ಕೆ ಯೋಗ ಶಿಕ್ಷಕ ಬಲಿ – ಎರಡೇ ದಿನದಲ್ಲಿ ಮೂರು ಸಾವು

Public TV
By Public TV
38 minutes ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಯ ಹೊಣೆ ಹೊತ್ತಿದ್ದ ಟಿಆರ್‌ಎಫ್‌ನ್ನು ಉಗ್ರ ಸಂಘಟನೆ ಪಟ್ಟಿಗೆ ಸೇರಿಸಿದ ಅಮೆರಿಕ

Public TV
By Public TV
42 minutes ago
Praveen
Bagalkot

ಚಿಕ್ಕಮಗಳೂರು | ವಿದ್ಯುತ್ ಶಾಕ್‍ಗೆ ನವವಿವಾಹಿತ ಲೈನ್‍ಮೆನ್ ಬಲಿ

Public TV
By Public TV
43 minutes ago
Arvind Kejriwal Rahul Gandhi
Latest

ಇಂಡಿಯಾ ಒಕ್ಕೂಟದಿಂದ ಹೊರಬಂದ ಆಪ್‌ – ಎಎಪಿ ನಾಯಕ ಸಂಜಯ್‌ ಸಿಂಗ್‌ ಹೇಳಿಕೆ

Public TV
By Public TV
47 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?