ದಾವಣಗೆರೆ: ತೆರಿಗೆಯಲ್ಲಿ (Tax) ರಾಜ್ಯಕ್ಕೆ ಅನ್ಯಾಯವಾಗಿರೋದು ಸತ್ಯ, ಸತ್ಯ, ನಾನು ಹೇಳಿದ್ದು ಸುಳ್ಳಾದ್ರೆ ರಾಜಕೀಯ ಬಿಡ್ತೀನಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸವಾಲು ಹಾಕಿದ್ದಾರೆ.
ದಾವಣಗೆರೆ (Davanagere) ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಮಾನ ಮರ್ಯಾದೆ ತೆಗೆದಿದ್ದಾರೆ ಎಂದು ಬಿ.ಎಸ್ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. ನಾನೂ ಅವರಂತೆ ಹೇಳಿದ್ದಕ್ಕೆಲ್ಲಾ ತಲೆ ಅಲ್ಲಾಡಿಸಬೇಕಾ? ತೆರಿಗೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿರೋದು ಸತ್ಯ, ಸತ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗೃಹಿಣಿ ಸಾವು ಕೇಸ್‌ಗೆ ಟ್ವಿಸ್ಟ್ – ಪತಿಯೇ ಮಾಸ್ಟರ್ ಮೈಂಡ್, ಸ್ನೇಹಿತನ ಪತ್ನಿಯ ಕೊಲೆ ರಹಸ್ಯವೂ ಬಯಲು
Advertisement
Advertisement
ಇದುವರೆಗೂ ಕೆಂದ್ರ ಸರ್ಕಾರದಿಂದ (Union Government) ಒಂದೇ ಒಂದು ರೂಪಾಯಿ ಸಹ ಬಿಡುಗಡೆ ಮಾಡಿಲ್ಲ. ರಾಜ್ಯ ಬಿಜೆಪಿ ಲೀಡರ್‌ಗಳು ಅಮಿತ್ ಶಾ (Amit Shah) ಜೊತೆ ಮಾತನಾಡಿ ಅನುದಾನ ಬಿಡುಗಡೆ ಮಾಡಿಸಿಲ್ಲ. ಯಡಿಯೂರಪ್ಪ, ಅಶೋಕ್, ಬೊಮ್ಮಾಯಿ, ವಿಜಯೇಂದ್ರ ಈಗಲಾದ್ರೂ ಹೋಗಿ ಕೇಳಲಿ ಎಂದಿರುವ ಸಿಎಂ, ನಮಗೆ ಅನ್ಯಾಯ ಆದ್ರೆ ಪ್ರತಿಭಟಿಸಬಾರದಾ? ಯಡಿಯೂರಪ್ಪ ಅವರಂತೆ ಬಾಯಿ ಮುಚ್ಚಿಕೊಂಡು ಇರಬೇಕಾ? ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೊಂಡುವಾದ ಬಿಟ್ಟು ರಾಜ್ಯಕ್ಕೆ ಅನ್ಯಾಯವಾಗುತ್ತಿರೋದನ್ನ ಹರೀಶ್ ಪೂಂಜಾ ಒಪ್ಪಿಕೊಳ್ಳಬೇಕು: ದಿನೇಶ್ ಗುಂಡೂರಾವ್
Advertisement
Advertisement
ರಾಜ್ಯದಿಂದ 100 ರೂಪಾಯಿ ತೆರಿಗೆ ನೀಡಿದ್ರೆ ನಮಗೆ ಬರೋದು 12 ರೂಪಾಯಿ ಮಾತ್ರ. ತೆರಿಗೆ ಕೊಡೋದ್ರಲ್ಲಿ ದೇಶದಲ್ಲೇ ನಾವು 2ನೇ ಸ್ಥಾನದಲ್ಲಿದ್ದೇವೆ. ಆದರೂ ನಮಗೆ ಕೊಡಬೇಕಾದ ಅನುದಾನ ಸಿಗುತ್ತಿಲ್ಲ. ಬರವನ್ನ ನಾವು ಸರಿಯಾಗಿ ನಿರ್ವಹಣೆ ಮಾಡುತ್ತಿದ್ದೇವೆ. ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆ ಆಗಲ್ಲ. ಇದರೊಂದಿಗೆ ಜಾನುವಾರುಗಳಿಗೆ ಮೇವು ಸಿಗುವ ವ್ಯವಸ್ಥೆ ಮಾಡಿದ್ದೇವೆ. ಜನರಿಗೆ ಉದ್ಯೋಗ ಕೊಡ್ತಾ ಇದೀವಿ, ಅದಕ್ಕಾಗಿ 850 ಕೋಟಿ ರೂ. ನಿಧಿ ಇಡಲಾಗಿದೆ. ಯಾರೂ ಸಹ ಗುಳೆ ಹೋಗದ ರೀತಿ ನೋಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಶ್ರೀದೇವಿ ಪುತ್ರಿ ಜಾನ್ವಿಗೆ ಅವಕಾಶ ಕೊಟ್ಟ ಕರಣ್ ಜೋಹಾರ್