– ಕಲಾವಿದರ ಮಾಸಾಶನ 2,500 ರೂ.ಗೆ ಹೆಚ್ಚಳ
ಬೆಂಗಳೂರು: ರಾಜ್ಯದ ಮದರಾಸಗಳಲ್ಲಿ ವಾರದಲ್ಲಿ 2 ದಿನ ಕನ್ನಡ (Kannada language) ಕಲಿಕೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
70ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಸಿಎಂ, ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಿಸಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವು ಕೆಲಸ ಮಾಡುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ: ಸಿಎಂ ಬೇಸರ
ಮುಂದುವರಿದು.. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ಕಲಾವಿದರ ಮಾಸಾಶನ 2,000 ರೂ.ನಿಂದ 2,500 ರೂ.ಗೆ ಹೆಚ್ಚಳ ಮಾಡಿದ್ದೇವೆ. ಕರ್ನಾಟಕದಲ್ಲಿ ತಯಾರಾಗುವ ಮತ್ತು ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಬಳಕೆ ಕಡ್ಡಾಯಗೊಳಿಸಿದ್ದೇವೆ. ರಾಜ್ಯದ ಮದರಾಸಗಳಲ್ಲಿ (Madrasas) ವಾರದಲ್ಲಿ 2 ದಿನ ಕನ್ನಡ ಕಲಿಕೆ ಆರಂಭಿಸಲಾಗಿದೆ. ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತವೇ ನಮ್ಮ ಮೊದಲ ಆದ್ಯತೆ ಎಂದು ತಿಳಿಸಿದರು.
ಹಿಂದಿ ಭಾಷೆ ಹೇರಿಕೆ ಮಾಡೋ ಕೆಲಸ ಕೇಂದ್ರ ಮಾಡ್ತಿದೆ. ಕೇಂದ್ರ ಸರ್ಕಾರ ಕರ್ನಾಟಕದ ವಿರೋಧಿ ಆಗಿದೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಕೊಟ್ಟರೂ ಅದಕ್ಕೆ ಅಗತ್ಯ ಸಹಕಾರ ಕೇಂದ್ರ ಕೊಡ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ಬಿಟ್ಟುಕೊಟ್ಟರು – ನವೆಂಬರ್ ಕ್ರಾಂತಿ ಹೊತ್ತಲ್ಲೇ ಡಿಕೆಶಿ ತ್ಯಾಗದ ಮಾತು
ಕೇಂದ್ರದಿಂದ ಮಲತಾಯಿ ಧೋರಣೆ
ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಒಕ್ಕೊರಲಿನಿಂದ ಖಂಡಿಸಬೇಕಿದೆ. 15ನೇ ಹಣಕಾಸು ಆಯೋಗದಿಂದ 70 ಸಾವಿರ ಕೋಟಿ ಅನ್ಯಾಯ ರಾಜ್ಯಕ್ಕೆ ಆಗಿದೆ. ಕೇಂದ್ರದಿಂದ ರಾಜ್ಯಕ್ಕೆ ಸುಮಾರು 1 ಲಕ್ಷ ಕೋಟಿ ಅನ್ಯಾಯ ಆಗಿದೆ. ರಾಜ್ಯಗಳನ್ನು ಕಬ್ಜ ಮಾಡುವ ಹೊಸಹತುಶಾಹಿ ವ್ಯವಸ್ಥೆ ಕೇಂದ್ರ ಮಾಡ್ತಿದೆ. ಕೋಮುದ್ವೇಷಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು ಎಂದು ಕೇಂದ್ರ ಸರ್ಕಾರ, ಕೋಮುವಾದಿಗಳ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಎಐನಿಂದ ಉದ್ಯೋಗ ನಷ್ಟ ಆಗುವ ಆತಂಕ ಇದೆ. ಕನ್ನಡವನ್ನು ತಂತ್ರಜ್ಞಾನಕ್ಕೆ ಬಳಕೆ ಆಗುವಂತೆ ಸಿದ್ಧವಾಗಬೇಕು. ಇದಕ್ಕಾಗಿ ಹೊಸ ನೀತಿ ತರಲು ಮುಂದಾಗುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಇದೇ ನಾಡು, ಇದೇ ಭಾಷೆ… ಎಂದೆಂದೂ ನಮ್ಮದಾಗಿರಲಿ: ಕನ್ನಡ ರಾಜ್ಯೋತ್ಸವ ಶುಭಕೋರಿದ ಆರ್‌ಸಿಬಿ



