ಬೆಂಗಳೂರು: ಪಾದಯಾತ್ರೆ ಮುಂದುವರಿಸಬೇಕೋ ಅಥವಾ ಬೇಡವೋ ಎಂದು ನ್ಯಾಯಾಲಯ ನೀಡುವ ಆದೇಶವನ್ನು ನಾವು ಪಾಲನೆ ಮಾಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಾದಯಾತ್ರೆಗೆ ಸಂಬಂಧಿಸಿದ ಮೊಕದ್ದಮೆಯ ವಿಚಾರಣೆ 14ನೇ ತಾರೀಖು ನಡೆಯಲಿದೆ. ನಾಳೆ ಪಾದಯಾತ್ರೆ ಮಾಡಲು ತೊಂದರೆ ಇಲ್ಲ. ಹೀಗಾಗಿ ನಾಳೆ ಪಾದಯಾತ್ರೆ ಮಾಡುತ್ತೇವೆ. ಒಂದು ವೇಳೆ ನ್ಯಾಯಾಲಯ ಪಾದಯಾತ್ರೆ ನಿಲ್ಲಿಸುವಂತೆ ಆದೇಶಿಸಿದರೆ ಅದನ್ನು ಗೌರವಿಸಿ, ಪಾಲಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜನರಿಗೆ ಹಣ ಕೊಟ್ಟು ಕರೆಸಿಕೊಂಡು ನಡೆಸುತ್ತಿರುವ ಈ ಜಾತ್ರೆಯಿಂದ ಮೇಕೆದಾಟು ಸಾಕಾರ ಅಸಾಧ್ಯ: ಎಚ್‍ಡಿಕೆ
Advertisement
Advertisement
ಪಾದಯಾತ್ರೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಲಾಗುತ್ತಿದೆಯಾ ಎಂದು ಕೋರ್ಟ್ ಸರ್ಕಾರವನ್ನು ಪ್ರಶ್ನೆ ಮಾಡಿದೆ, ನ್ಯಾಯಾಲಯದ ಪ್ರಶ್ನೆಗೆ ಸರ್ಕಾರ ಉತ್ತರ ನೀಡುತ್ತದೆ. ಪಾದಯಾತ್ರೆ, ಪ್ರತಿಭಟನೆ ಮಾಡುವಾಗ ಸರ್ಕಾರದ ಅನುಮತಿ ಪಡೆದು ಮಾಡಲ್ಲ, ಸರ್ಕಾರದ ಗಮನಕ್ಕೆ ತಂದು ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾದಯಾತ್ರೆ ತಡೆಯಲು ಯಾರಿಗೆ ಕಾಯುತ್ತಿದ್ದೀರಿ – ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ
Advertisement
Advertisement
ನ್ಯಾಯಾಲಯದ ಆದೇಶ ಏನು ಬರುತ್ತೋ ಕಾದು ನೋಡೋಣ. ಏನೇ ಆದೇಶ ಬಂದರು ಅದನ್ನು ಉಲ್ಲಂಘನೆಯಂತೂ ಖಂಡಿತಾ ಮಾಡಲ್ಲ ಎಂದಿದ್ದಾರೆ. ಇದನ್ನೂ ಓದಿ: ಪಾದಯಾತ್ರೆಗೆ ಹೈಕೋರ್ಟ್ ಕೆಂಡಾಮಂಡಲ – ಕೈ ಮುಗಿದು ಮುಖದ ಮೇಲೆ ಕೈಯಿಟ್ಟ ಡಿಕೆಶಿ