ಬೆಳಗಾವಿ: ದೇಶದ ಆಹಾರ ಸ್ವಾವಲಂಬನೆಗೆ ಶ್ರಮಿಸುತ್ತಿರುವ ರೈತರಿಗೆ ಬೆಂಬಲ ಬೆಲೆ ಕೊಡುವುದು ಸರ್ಕಾರದ ಕರ್ತವ್ಯವಾಗಿದೆ. ದೇಶದಾದ್ಯಂತ ಕನಿಷ್ಠ ಬೆಂಬಲ ಬೆಲೆ (MSP) ಕಾಯ್ದೆ ಜಾರಿಗೆ ರೈತರು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಸ್‌ಪಿಪಿ ಕಾಯ್ದೆ ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೃಷಿ ಇಲಾಖೆಯ (Agriculture Department) ಆಶ್ರಯದಲ್ಲಿ ಸುವರ್ಣಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆಯ ಫಲಾನುಭವಿ ರೈತರಿಗೆ ವಿವಿಧ ಕೃಷಿ ಸಲಕರಣೆಗಳು ಮತ್ತು ಸೌಲಭ್ಯಗಳನ್ನು ವಿತರಿಸಿ ಅವರು ಮಾತನಾಡಿದರು. ಇದನ್ನೂ ಓದಿ: ವಂಚನೆಯಿಂದ ರಷ್ಯಾ ಸೇನೆಯಲ್ಲಿ ಸಿಲುಕಿದ್ದ ಹೈದರಾಬಾದ್ ಯುವಕ – ಯುದ್ಧದಲ್ಲಿ ದುರಂತ ಸಾವು
Advertisement
Advertisement
ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇದರಲ್ಲಿ 196 ತಾಲ್ಲೂಕುಗಳು ತೀವ್ರ ಬರಪೀಡಿತವಾಗಿವೆ. ಒಟ್ಟಾರೆ 18,171 ಕೋಟಿ ಬೆಳೆ ಹಾನಿಯಾಗಿದ್ದು, ಪರಿಹಾರ ಒದಗಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಆದ್ರೆ ಯಾವುದೇ ರೀತಿಯ ನೆರವು ನೀಡಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
Advertisement
ರೈತರಿಗೆ (Farmers) ತಲಾ 2 ಸಾವಿರ ರೂ.ಗಳಂತೆ ರಾಜ್ಯ ಸರ್ಕಾರ ತಾತ್ಕಾಲಿಕವಾಗಿ 631 ಕೋಟಿ ರೂ. ನೆರವು ನೀಡಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಕೃಷಿಹೊಂಡ ಯೋಜನೆಯನ್ನು ಕೂಡ ಇದಕ್ಕೂ ಮುಂಚಿನ ಸರ್ಕಾರ ಸ್ಥಗಿತಗೊಳಿಸಿತ್ತು. ಈ ಬಾರಿ 200 ಕೋಟಿ ರೂ. ಒದಗಿಸುವ ಮೂಲಕ ಕೃಷಿಭಾಗ್ಯ ಯೋಜನೆಗೆ (Krushi Bhagya Scheme) ಮರುಚಾಲನೆ ನೀಡಲಾಗಿದೆ.
Advertisement
900 ಕೋಟಿ ಮೊತ್ತದ ಕೃಷಿ ಸಲಕರಣೆ ವಿತರಣೆ:
ಬೆಳಗಾವಿ ವಿಭಾಗೀಯ ಮಟ್ಟದಲ್ಲಿ 2,700 ರೈತರಿಗೆ 13.12 ಕೋಟಿ ರೂ. ಮೊತ್ತದ ವಿವಿಧ ಬಗೆಯ ಕೃಷಿ ಸಲಕರಣೆಗಳನ್ನು ನೀಡಲಾಗುತ್ತಿದೆ. ಇದೇ ರೀತಿ ರಾಜ್ಯದಾದ್ಯಂತ ಒಟ್ಟಾರೆ 900 ಕೋಟಿ ರೂ.ಗಿಂತಲೂ ಅಧಿಕ ಮೊತ್ತದ ಸಲಕರಣೆಗಳನ್ನು ನೀಡಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ತಾಜ್ ಮಹಲ್‌ಗೆ ಈಗ ಮೆಟ್ರೋ ಸವಾರಿ; ಆಗ್ರಾ ಮೆಟ್ರೋ ಕಾರಿಡಾರ್ ಉದ್ಘಾಟಿಸಿದ ಮೋದಿ
ಆಧುನಿಕ ಯಂತ್ರೋಪಕರಣಗಳ ಮೂಲಕ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಸಹಾಯಧನದ ಮೂಲಕ ಸಲಕರಣೆಗಳನ್ನು ನೀಡಲಾಗುತ್ತಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ರೈತರಿಗೆ ಆಧುನಿಕ ಬೇಸಾಯ ಪದ್ಧತಿ ಅಳವಡಿಸಿಕೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾವೆಲ್ಲ ಕುರ್ಚಿಗಾಗಿ ಹೊಡೆದಾಡ್ತೀವಿ, ನೀವು ಕುರ್ಚಿ ಇದ್ರೂ ಯಾಕೆ ಕೂರಲ್ಲ: ಡಿಕೆಶಿ ಪ್ರಶ್ನೆ
ಸೂಕ್ಷ್ಮ ನೀರಾವರಿ ಅಳವಡಿಸಿಕೊಂಡಿರುವ ರೈತರಿಗೂ ಸಹಾಯಧನ ಆಧಾರಿತ ಯಂತ್ರೋಪಕರಣ ನೀಡಲಾಗುತ್ತಿದೆ. ಸಮಗ್ರ ಕೃಷಿ ಪದ್ಧತಿ ಅಭಿವೃದ್ಧಿಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ನೀರಾವರಿ, ಕೃಷಿ ಪದ್ಧತಿ, ಬೆಳೆಗೆ ನ್ಯಾಯಯುತ ಬೆಲೆ ಒದಗಿಸುವುದು ಸೇರಿದಂತೆ ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.