ಚಿತ್ರದುರ್ಗ: ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಚಿತ್ರದುರ್ಗದ ಖಾಸಗಿ ಹೋಟೆಲ್‍ನಲ್ಲಿ ನಡೆದ ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಭಯೋತ್ಪಾದನೆಗೆ ಬಡ್ತಿ ನೀಡುತ್ತದೆಂಬ ಕಟೀಲ್ ಹೇಳಿಕೆಗೆ ಕಿಡಿಕಾರಿದ್ದಾರೆ. ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕನಾಗಿದ್ದೂ, ಅವರ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ಸಿದ್ದರಾಮ್ಯ ವಾಗ್ದಾಳಿ ನಡೆಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದಿರುವ ಬಿಎಸ್‍ವೈ ಹೇಳಿಕೆಗೆ ಟಾಂಗ್ ನೀಡಿದ್ದೂ, ಬಿಎಸ್‍ವೈ ಅವರ ಜೇಬಿನಲ್ಲಿ ಮತಗಳು ಇವೆಯೇ? ಈ ರಾಜ್ಯದ ಜನ ಬಿಜೆಪಿ ಕಿತ್ತೊಗೆಯಲು ತೀರ್ಮಾನಿಸಿದ್ದಾರೆಂದು ತಿರುಗೇಟು ನೀಡಿದರು. ಇದನ್ನೂ ಓದಿ: ಹಣದಾಸೆಗೆ ಅಂಧ ಸ್ನೇಹಿತನನ್ನ ಕೊಂದ ವ್ಯಕ್ತಿಗೆ ಜೀವಾವಧಿ ಶಿಕ್ಷೆ!
ಜೆಡಿಎಸ್ ಯಾವ ಪಕ್ಷದ ಬಿ ಟೀಮ್ ಅಲ್ಲ ಎಂದ ಹೆಚ್‍ಡಿಕೆ ಹೇಳಿಕೆಗೂ ಟಾಂಗ್ ನೀಡಿದ್ದೂ, ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಹಲವು ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿದರು. ಹಾಗೆಯೇ ಆರು ಕಡೆ ಮಾತ್ರ ಜೆಡಿಎಸ್ ಅಭ್ಯರ್ಥಿ ಹಾಕಿದ್ದಾರೆ. ಇನ್ನುಳಿದ ಕ್ಷೇತ್ರಗಳಲ್ಲಿ ಜೆಡಿಎಸ್ ಯಾರಿಗೆ ಬೆಂಬಲ ನೀಡುತ್ತದೆ ಎಂದು ವ್ಯಂಗ್ಯವಾಡಿದರು. ಈ ವೇಳೆ ಅವರೊಂದಿಗೆ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ಜಮೀರ್ ಅಹಮ್ಮದ್, ಆಂಜನೇಯ ಹಾಗೂ ರಮಾನಾಥ್ ರೈ ಇದ್ದರು. ಇದನ್ನೂ ಓದಿ: ಜಿಮ್‍ನಲ್ಲಿ ಬೆವರು ಹರಿಸುತ್ತಿರುವ ಮೇಘನಾ ರಾಜ್