ರಾಮನಗರ: ಮೇಕೆದಾಟು ಪಾದಯಾತ್ರೆಯನ್ನು ರಾಜಕೀಯಕ್ಕಾಗಿ ಮಾಡುತ್ತಿಲ್ಲ. ಬದಲಾಗಿ ರಾಜ್ಯದ ಹಿತಕ್ಕಾಗಿ ಮಾಡುತ್ತಿದ್ದೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಾವುದೇ ಕಾನೂನು ಉಲ್ಲಂಘನೆ ಮಾಡುವುದಿಲ್ಲ. ಕೋವಿಡ್ ನಿಯಮ ಪಾಲನೆ ಮಾಡಿಯೇ ಪಾದಯಾತ್ರೆ ಮಾಡುತ್ತೇವೆ. ನಮ್ಮ ನೀರು ಬಳಸಿಕೊಳ್ಳಲು ನಾವು ಯಾಕೆ ತಮಿಳುನಾಡಿನವರನ್ನು ಕೇಳಬೇಕು ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ಕರ್ಫ್ಯೂ ವಿಚಾರವಾಗಿ ಮಾತನಾಡಿ, ನಾವು ಪಾದಯಾತ್ರೆ ಮಾಡುತ್ತಿರುವುದಕ್ಕೆ ಸರ್ಕಾರ ಕರ್ಫ್ಯೂ ವಿಧಿಸಿದೆ. ನಾವು ಎರಡು ತಿಂಗಳ ಹಿಂದೆಯೇ ಪಾದಯಾತ್ರೆ ಘೋಷಣೆ ಮಾಡಿದ್ದೆವು. ಆದರೆ ಇದನ್ನು ಮಾಡಬಾರದೆಂದು ಕರ್ಫ್ಯೂ ಹಾಕಿದ್ದಾರೆ. ರಾಜ್ಯದ ಹಿತ, ಬೆಂಗಳೂರಿನ ಜನರ ಹಿತಕ್ಕಾಗಿ ಈ ಪಾದಯಾತ್ರೆ ಮಾಡ್ತಿದ್ದೇವೆ. ನಮ್ಮ ನೀರು ನಾವು ಬಳಸಿಕೊಳ್ಳುತ್ತೇವೆ ಅಷ್ಟೆ. ಇದರಿಂದ ತಮಿಳುನಾಡಿಗೂ ಅನುಕೂಲ ಆಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಅಂಡರ್‌ಗ್ರೌಂಡ್‌ನಲ್ಲಿ ಕಂತೆ ಕಂತೆ ನೋಟು ಬಚ್ಚಿಟ್ಟಿದ್ದ ಉದ್ಯಮಿ – ಇವನ ಆಸ್ತಿ ಬಗ್ಗೆ ಮಾಹಿತಿ ನೀಡಿದ್ರೆ 10,000 ಬಹುಮಾನ
Advertisement
Advertisement
ಹೆಚ್ಚು ಪೊಲೀಸರ ನಿಯೋಜನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮನ್ನು ಚೆನ್ನಾಗಿ ನೋಡಿಕೊಳ್ಳುವುದಕ್ಕೆ ಹೆಚ್ಚು ಪೊಲೀಸ್‍ರನ್ನು ನಿಯೋಜಿಸಿದ್ದಾರೆ. ನಾವು ಯಾವುದೇ ಕಾನೂನು ಭಂಗ ಮಾಡುವುದಿಲ್ಲ. ಕಾನೂನು ಭಂಗ ಮಾಡದೇ ಪಾದಯಾತ್ರೆ ಮಾಡುತ್ತೇವೆ ಎಂದರು. ಇದನ್ನೂ ಓದಿ: ಹಿಮದಲ್ಲಿ ದೃಢವಾಗಿ ನಿಂತ ಯೋಧನಿಗೆ ಒಂದು ಸೆಲ್ಯೂಟ್ – ವೀಡಿಯೋ ವೈರಲ್