– ಬಿಜೆಪಿ DNAನಲ್ಲಿ ಕೋಮುವಾದದಂತೆ ಅಂತಃಕಲಹವೂ ಸೇರಿದೆ – ಸಿಎಂ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಡಾ ಹಗರಣ (MUDA Scam) ಸಂಚಲನ ಮೂಡಿಸಿದೆ. ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ.
ಬುಧವಾರವಷ್ಟೇ ಹರಿಯಾಣ ಚುನಾವಣಾ (Haryana Poll) ಪ್ರಚಾರದ ವೇಳೆ ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ಮೋದಿ ಮುಡಾ ಪ್ರಕರಣವನ್ನ ಪ್ರಸ್ತಾಪಿಸಿದರು. ಕಾಂಗ್ರೆಸ್‌ನಲ್ಲಿ ಒಳಜಗಳ (Infighting In Congress) ಶುರುವಾಗಿದೆ ಎಂದು ಕಿಡಿಕಾರಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ಎಕ್ಸ್ ಖಾತೆಯ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಸಿಬಿಐ ಡೈರೆಕ್ಟ್ ಎಂಟ್ರಿಗೆ ಬ್ರೇಕ್ – ʻರಕ್ಷಣಾತ್ಮಕʼ ಆಟಕ್ಕಿಳಿದ ಸಿದ್ದರಾಮಯ್ಯ ಸರ್ಕಾರ!
Advertisement
Prime Minister @narendramodi, in his usual reckless manner, has claimed there is infighting within the Karnataka Congress. It seems the PM has either misread or deliberately twisted the recent media reports, confusing BJP’s internal chaos with Congress. I demand that he…
— Siddaramaiah (@siddaramaiah) September 26, 2024
Advertisement
ಸಿಎಂ ಎಕ್ಸ್‌ನಲ್ಲಿ ಏನಿದೆ?
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕರ್ನಾಟಕದ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ ನಡೆಯುತ್ತಿದೆ ಎಂದು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ. ಬಹುಶಃ ಪ್ರಧಾನಿಯವರು ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಲ್ಲಿ ಉಲ್ಲೇಖವಾಗುತ್ತಿರುವ ಪಕ್ಷಗಳ ಹೆಸರಲ್ಲಿ ಗೊಂದಲ ಮಾಡಿಕೊಂಡು, ಬಿಜೆಪಿ ಬದಲಿಗೆ ಕಾಂಗ್ರೆಸ್ ಎಂದು ತಿಳಿದುಕೊಂಡು ಈ ಅಭಿಪ್ರಾಯ ವ್ಯಕ್ತಪಡಿಸಿರಬಹುದು. ಈ ಗೊಂದಲ ನಿವಾರಣೆಗಾಗಿ ಅವರು ತಕ್ಷಣ ಸ್ಪಷ್ಟೀಕರಣ ನೀಡಬೇಕೆಂದು ಮನವಿ ಮಾಡುತ್ತೇನೆ.
Advertisement
Advertisement
ಬಿಜೆಪಿಯ ರಕ್ತದಲ್ಲಿ ಹೇಗೆ ಕೋಮುವಾದ ಸೇರಿಕೊಂಡಿದೆಯೋ, ಅದೇ ರೀತಿ ಆಂತರಿಕ ಕಲಹವೂ ಸೇರಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಬಿಜೆಪಿ ನಾಯಕರು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳದ ದಿನವೇ ಸಿಗಲಾರದು. ಪ್ರತಿನಿತ್ಯ ಬಿಜೆಪಿ ನಾಯಕರು ಆರೋಪ – ಪ್ರತ್ಯಾರೋಪ, ಪರಸ್ಪರ ದೂಷಣೆ – ನಿಂದನೆಯ ಧಾರವಾಹಿ ಮೂಲಕ ಜನರನ್ನು ರಂಜಿಸುತ್ತಿದ್ದಾರೆ.
ಸನ್ಮಾನ್ಯ ನರೇಂದ್ರ ಮೋದಿ ಅವರೇ, ದಯವಿಟ್ಟು ತಾವು ಬೆಳಿಗ್ಗೆ ಎದ್ದು ಕರ್ನಾಟಕದಿಂದ ಪ್ರಕಟವಾಗುವ ಪತ್ರಿಕೆಗಳ ಮೇಲೆ ಕಣ್ಣಾಡಿಸಿದರೆ ನಿಮ್ಮ ಪಕ್ಷದಲ್ಲಿ ನಡೆಯುವ ಆಂತರಿಕ ಕಲಹದ ಒಂದು ಅಂದಾಜು ಸಿಗಬಹುದು. ಆ ನಂತರವಾದರೂ ನೀವು ನಮ್ಮ ಪಕ್ಷದ ಕಡೆ ಬೊಟ್ಟು ಮಾಡುವುದನ್ನು ನಿಲ್ಲಿಸಿದರೆ ನಿಮ್ಮ ಪಕ್ಷದ ಅಂತರ್‌ಕಲಹದ ಬೆಂಕಿಯನ್ನು ಶಮನ ಮಾಡಲು ಪ್ರಯತ್ನ ನಡೆಸಬಹುದು. ಇದನ್ನೂ ಓದಿ: Bilkis Bano case | ಕಟು ಟೀಕೆಯನ್ನು ಆದೇಶದಿಂದ ತೆಗೆಯುವಂತೆ ಗುಜರಾತ್ ಮಾಡಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಳಿಗ್ಗೆ ಎದ್ದ ಕೂಡಲೇ ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಸಾವಿರಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ. ಇವರ ಆರೋಪಗಳಿಗೆ ಶಾಸಕರಾದ ರಮೇಶ್ ಜಾರಕಿಹೊಳಿ, ಸಿ.ಟಿ ರವಿ ಮೊದಲಾದವರು ದನಿಗೂಡಿಸಿ ಅಪ್ಪ-ಮಕ್ಕಳ ವಿರುದ್ಧ ಬಗೆಬಗೆಯ ಆರೋಪಗಳನ್ನು ಮಾಡಿದ್ದಾರೆ. ಇದೀಗ ಉಚ್ಚಾಟಿತ ಬಿಜೆಪಿ ನಾಯಕ ಈಶ್ವರಪ್ಪನವರ ಮನೆಯಲ್ಲಿಯೇ ಕೂತು ಭಿನ್ನಮತೀಯ ಶಾಸಕರು ಸಭೆ ನಡೆಸಿದ್ದಾರೆ. ಇದನ್ನು ಅಂತರ್‌ಕಲಹ ಎಂದು ಕರೆಯದೇ ಪ್ರೇಮಸಲ್ಲಾಪ ಎನ್ನೋಣವೇ? ಇದನ್ನೂ ಓದಿ: Badlapur Encounter | ಆರೋಪಿ ಗುಂಡು ಹಾರಿಸಿದ್ರೆ ಪೊಲೀಸರು ಚಪ್ಪಾಳೆ ತಟ್ಟಬೇಕಾ?: ದೇವೇಂದ್ರ ಫಡ್ನವೀಸ್
ಕರ್ನಾಟಕದ ಬಿಜೆಪಿಯಲ್ಲಿನ ಅಂತಃಕಲಹ ಹೊಸ ವಿದ್ಯಮಾನವೇನಲ್ಲ. ಇದಕ್ಕೊಂದು ಇತಿಹಾಸವಿದೆ. ಕರ್ನಾಟಕದ ಜನತೆ ಎಂದೂ ಬಿಜೆಪಿಗೆ ಪೂರ್ಣಬಹುಮತ ನೀಡಿ ಅಧಿಕಾರಕ್ಕೆ ತಂದಿಲ್ಲ. ಅಕ್ರಮ ಹಣ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರೂ ಯಾರೇ ಒಬ್ಬ ಮುಖ್ಯಮಂತ್ರಿ ಪೂರ್ಣಾವಧಿ ಆಳಿಲ್ಲ. 2008 ರಿಂದ 2013ರ ವರೆಗೆ ಮೂವರು ಮುಖ್ಯಮಂತ್ರಿಗಳು, 2019 ರಿಂದ 2023ರ ಅವಧಿಯಲ್ಲಿ ಇಬ್ಬರು ಮುಖ್ಯಮಂತ್ರಿಗಳು. ಕರ್ನಾಟಕದ ಬಿಜೆಪಿಯೊಳಗಿನ ಅಂತಃಕಲಹ ನಮ್ಮಲ್ಲಿ ಮನೆಮನೆಮಾತಾಗಿದೆ. ಇದರಲ್ಲಿ ನಮ್ಮ ಪಕ್ಷದ ಯಾವುದೇ ಪಾತ್ರ ಇಲ್ಲ. ಇವೆಲ್ಲ ಸ್ವಯಂಕೃತ ಅಪರಾಧದ ಹಳವಂಡಗಳು.
2011ರಲ್ಲಿ ಬಿ.ಎಸ್ ಯಡಿಯೂರಪ್ಪ ಅವರು ಜೈಲಿಗೆ ಹೋಗಲು ಪಕ್ಷದೊಳಗಿನ ಅಂತಃಕಲಹವೂ ಕಾರಣ ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರೂ ಮರೆತುಬಿಟ್ಟಿದ್ದಾರೆ. ಅದರ ನಂತರ ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿದ್ದ ಯಡಿಯೂರಪ್ಪನವರು ವಾಜಪೇಯಿ – ಅಡ್ವಾಣಿಯವರನ್ನೂ ಸೇರಿದಂತೆ ಯಾರನ್ನೂ ಬಿಡದೆ ಕೀಳು ಮಟ್ಟದ ಭಾಷೆಯಲ್ಲಿ ನಿಂದಿಸಿದ್ದಾರೆ. ಕೊನೆಗೆ ಅವರನ್ನೇ ಕರೆತಂದು ಮುಖ್ಯಮಂತ್ರಿ ಮಾಡಿದ್ದಾಯಿತು. ನಂತರ ಅವರನ್ನು ಪದಚ್ಯುತಿಗೊಳಿಸಿಯೂ ಆಯಿತು. ಇವೆಲ್ಲದರ ಹಿಂದೆ ಪಕ್ಷದ ಅಂತಃಕಲಹ ಕಾರಣ ಅಲ್ಲವೇ?
ಪ್ರಧಾನಿ ನರೇಂದ್ರ ಮೋದಿ ಅವರೇ, ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯಲು ಹೋಗಬೇಡಿ. ನಮ್ಮ ಪಕ್ಷದ ಅಂತಃಕಲಹದ ಬಗ್ಗೆ ಚಿಂತೆ ಮಾಡಬೇಡಿ. ನಮ್ಮ ಪಕ್ಷ ಅಧಿಕಾರಕ್ಕೆ ಬಂದಾಗೆಲ್ಲ ಪೂರ್ಣಾವಧಿಯನ್ನು ಮುಗಿಸಿದ್ದೇವೆ. ದೇವರಾಜ ಅರಸು ನಂತರ ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ನಾನು ಇದೀಗ 2ನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಮ್ಮೊಳಗೆ ಜಗಳ ಹುಟ್ಟುಹಾಕುವ ನಿಮ್ಮೆಲ್ಲರ ನಿರಂತರ ಪ್ರಯತ್ನದ ಹೊರತಾಗಿಯೂ ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.