– ಸರ್ಕಾರದ ಹಿರಿಯ ಕಾರ್ಯದರ್ಶಿಗಳಿಗೆ ಶುಭಾಶಯ ಕೋರಿದ ಸಿಎಂ
– ಗ್ಯಾರಂಟಿ ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆ
– ಜನರ ನಿರೀಕ್ಷೆ ಹುಸಿಯಾಗದ ರೀತಿ ಕೆಲಸ ಮಾಡಬೇಕೆಂದು ಸಲಹೆ
ಬೆಂಗಳೂರು: ರಾಜ್ಯ ಸರ್ಕಾರದ ಕಾರ್ಯದರ್ಶಿಗಳಿಗೆ ಹೊಸ ವರ್ಷದ ಶುಭಾಶಯ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು 2024ನೇ ವರ್ಷಕ್ಕೆ ನಾವೆಲ್ಲರೂ ಕಾಲಿಡುತ್ತಿದ್ದು, ಈ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ ಎಂದು ನುಡಿದರು.
ರಾಜ್ಯದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಸೋಮವಾರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹೊಸವರ್ಷದ (New Year 2024) ಶುಭಾಶಯ ಕೋರಿದ ಸಂದರ್ಭದಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: ಅಯೋಧ್ಯೆಯಲ್ಲಿರೋದು ಬಿಜೆಪಿ ರಾಮ, ನಮ್ಮ ರಾಮ ಸಿದ್ದರಾಮಯ್ಯ: ಹೆಚ್. ಆಂಜನೇಯ
Advertisement
Advertisement
ರಾಜ್ಯದಲ್ಲಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 35,000 ಕೋಟಿ ರೂ.ನಷ್ಟು ಬೆಳೆ ನಷ್ಟವಾಗಿದೆ. ಪ್ರಕೃತಿ ಸಹಾಯವಿಲ್ಲದಿದ್ದರೇ, ಸರ್ಕಾರ ಏನು ಪರಿಹಾರ ಕೊಟ್ಟರು ಸಾಕಾಗುವುದಿಲ್ಲ. ಹವಾಮಾನ ಬದಲಾವಣೆಯಿಂದಾಗಿ ಈ ವೈಪರೀತ್ಯ ಕಾಣುತ್ತಿದ್ದೇವೆ. ಮುಂಗಾರಿನಲ್ಲಿ ಒಳ್ಳೆಯ ಮಳೆಯಾಗುವ (Rain) ನಿರೀಕ್ಷೆ ಇದೆ. 2024ರಲ್ಲಿ ಒಳ್ಳೆಯ ಮಳೆ-ಬೆಳೆ ಆಗಲಿ ಎಂದು ಪ್ರಾರ್ಥನೆ ಮಾಡುವುದಾಗಿ ತಿಳಿಸಿದರು.
Advertisement
ಗ್ಯಾರಂಟಿ ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆ:
ಅಭಿವೃದ್ಧಿ ನಿರೀಕ್ಷಿತ ಫಲ ಕಾಣಲು ಸಮೃದ್ಧಿಯಾಗಿ ಮಳೆಯಾಗಲಿ. 60% ಗಿಂತ ಹೆಚ್ಚು ಜನ ವ್ಯವಸಾಯದ ಮೇಲೆ ಅವಲಂಬಿತರಾಗಿದ್ದಾರೆ. ಗ್ಯಾರಂಟಿಗಳನ್ನ ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆಯಾಗಿದೆ. ಬಡವರ ಕುಟುಂಬಕ್ಕೆ ಹಣ ದೊರೆಯುತ್ತಿದ್ದು, ಕೊಳ್ಳುವ ಶಕ್ತಿ ಸಿಕ್ಕಿದೆ. ಬರಗಾಲವಿದ್ದರೂ ಸ್ವಲ್ಪ ಮಟ್ಟಿಗೆ ಅದರ ತೀವ್ರತೆ ಕಡಿಮೆಯಾಗಿದೆ. ಇಲ್ಲದಿದ್ದರೆ ಹಾಹಾಕಾರ ಶುರುವಾಗುತ್ತಿತ್ತು ಎಂದು ಎಚ್ಚರಿಸಿದರು. ಇದನ್ನೂ ಓದಿ: ಐಷಾರಾಮಿಯಷ್ಟೇ ದುಬಾರಿ ಅಯೋಧ್ಯಾ ಟೆಂಟ್ ಹೌಸ್ – ಒಂದು ದಿನಕ್ಕೆ ಎಷ್ಟು ಹಣ ಗೊತ್ತಾ?
Advertisement
ಸಾರ್ವತ್ರಿಕ ಮೂಲ ಆದಾಯದ ತತ್ವದ ತಳಹದಿಯ ಮೇಲೆ ಜನರ ಆದಾಯ ಹೆಚ್ಚಿಸಿ ಆರ್ಥಿಕ ಚಟುವಟಿಕೆಗಳಿಗೆ ಇಂಬು ದೊರೆತಿದೆ. ರಾಜ್ಯದ ಜನರ ಅಭಿವೃದ್ಧಿಗಾಗಿ ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ. ಸರ್ಕಾರ ಆಡಳಿತ ವರ್ಗವನ್ನು ಆಯ್ಕೆಮಾಡಿದೆ. ಜನಪರ, ಸಮಾಜಮುಖಿ ಧೋರಣೆ ಇದ್ದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು, ಸಂವಿಧಾನದ ಆಶಯಗಳನ್ನ ಈಡೇರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಜನರ ನಿರೀಕ್ಷೆ ಹುಸಿಯಾಗದ ರೀತಿ ಕೆಲಸ ಮಾಡಬೇಕು:
ಸಂವಿಧಾನ ಅರಿತು ಅದರಂತೆ ನಡೆಯಬೇಕು. ಜನರ ನಿರೀಕ್ಷೆ ಹುಸಿಯಾಗದ ರೀತಿ ಕೆಲಸ ಮಾಡಬೇಕು. ಈ ದಿಕ್ಕಿನಲ್ಲಿ ನಾವೆಲ್ಲರೂ ಪ್ರಯತ್ನ ಮಾಡೋಣ ಎಂದು ಹೇಳಿದರು. ಇದನ್ನೂ ಓದಿ: ಪ್ರಾಣಪ್ರತಿಷ್ಠೆ ದಿನ ಸಾರ್ವತ್ರಿಕ ರಜೆ ಘೋಷಿಸುವಂತೆ ಸಿಎಂಗೆ ಪತ್ರ: ಯಶ್ಪಾಲ್ ಸುವರ್ಣ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ನಜೀರ್ ಅಹ್ಮದ್ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಉಪಸ್ಥಿತರಿದ್ದರು. ಇದೇ ವೇಳೆ ಸರ್ಕಾರದ ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಬರೆದಿರುವ ʻಸುಸ್ಥಿರ ಬದುಕಿನ ಸುತ್ತ ಆಶಾಕಿರಣʼ ಪುಸ್ತಕವನ್ನು ಸಿಎಂ ಬಿಡುಗಡೆ ಮಾಡಿದರು.