ಚಿತ್ರದುರ್ಗ: ಐದು ವರ್ಷ ನಾವೇ ಅಧಿಕಾರದಲ್ಲಿ ಇರುತ್ತೇವೆ ಎಂದು ಸಿಎಂ (Siddaramaiah) ಹೇಳಿದ್ದಾರೆ ಹೊರತು ನಾನೇ ಸಿಎಂ ಎಂದು ಹೇಳಿಲ್ಲ ಎಂದು ಸಾಂಖ್ಯಿಕ ಮತ್ತು ಯೋಜನಾ ಖಾತೆ ಸಚಿವ ಡಿ.ಸುಧಾಕರ್ (D Sudhakar) ಹೇಳಿದರು.
ಚಿತ್ರದುರ್ಗದಲ್ಲಿ (Chitradurga) ಗಣರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಆಗಿ ಐದು ವರ್ಷ ಸಂಪೂರ್ಣಗೊಳಿಸುವರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಈ ವೇಳೆ ಸಂಪೂರ್ಣ ಐದು ವರ್ಷ ನಾವೇ ಅಧಿಕಾರದಲ್ಲಿ ಇರುತ್ತೇವೆ. ಮುಂದಿನ 2028ಕ್ಕೂ ಸಹ ಕಾಂಗ್ರೆಸ್ ಅಧಿಕಾರದಲ್ಲಿರುತ್ತದೆ ಎಂದಷ್ಟೇ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳಿಲ್ಲವೆಂದು ಸ್ಪಷ್ಟಪಡಿಸುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಲ್ಲ ಎಂದು ಹೇಳಿದರು. ಇದನ್ನೂ ಓದಿ: Mysuru | ಥೈಲ್ಯಾಂಡ್ ಬ್ಯೂಟಿ ಇಟ್ಕೊಂಡು ಹೈಟೆಕ್ ವೇಶ್ಯಾವಾಟಿಕೆ ದಂಧೆ – ಕೇಸ್ ದಾಖಲು
ಇನ್ನು ಡಿಕೆಶಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸಚಿವ ಸುಧಾಕರ್ ಈ ರೀತಿ ಹೇಳಿಕೆ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಐದು ವರ್ಷ ಸಂಪೂರ್ಣಗೊಳಿಸುವುದಿಲ್ಲ ಎಂಬ ಚರ್ಚೆಗೆ ಮತ್ತಷ್ಟು ಪುಷ್ಟಿ ಸಿಗುವಂತೆ ಮಾಡಿದರು. ಇದನ್ನೂ ಓದಿ: ಶಕ್ತಿ ಯೋಜನೆಯಿಂದ ಯಾವುದೇ ನಷ್ಟವಾಗಿಲ್ಲ: ರಾಮಲಿಂಗಾ ರೆಡ್ಡಿ
ಇನ್ನು ಇದೇ ವೇಳೆ ಬಳ್ಳಾರಿಯ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಜಟಾಪಟಿ ಬಗ್ಗೆಯು ಸಚಿವ ಸುಧಾಕರ ಪ್ರತಿಕ್ರಿಯಿಸಿದರು. ಉಪ್ಪು ತಿಂದವರು ನೀರು ಕುಡಿಯುತ್ತಾರೆ. 2008 ಹಾಗೂ 2018ರಲ್ಲೂ ಬಿಜೆಪಿಗೆ ಬಹುಮತ ಇರಲಿಲ್ಲ. ಬಿಜೆಪಿಯವರು ಅಕ್ರಮವಾಗಿ ಸರ್ಕಾರವನ್ನು ಅಧಿಕಾರಕ್ಕೆ ತಂದರು. ಯಾವತ್ತೂ ಈ ಬಿಜೆಪಿಗೆ ಬಹುಮತವಿತ್ತು. ಅವರು, ಬೇರೆ ದಾರಿಯಿಂದ ಅಧಿಕಾರಕ್ಕೆ ಬಂದಿದ್ದರು. ಬಿಜೆಪಿಯವರಿಗೆ ಅಧಿಕಾರದ ದಾಹವಿದೆ. ಹೀಗಾಗಿ ಹಳೆಯದನ್ನು ಕೆದಕಿಕೊಂಡು ಹೋಗುತಿದ್ದಾರೆ ಎಂದರು. ಇದನ್ನೂ ಓದಿ: 76ನೇ ಗಣರಾಜ್ಯೋತ್ಸವ ಸಂಭ್ರಮ – ಈ ವರ್ಷವೂ ಗಮನಸೆಳೆದ ಮೋದಿ ಪೇಟ
ಇನ್ನೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಸರ್ಕಾರ ಕ್ರಮ ಕೈಗೊಂಡಿದೆ. ಆದರೆ ಮೈಕ್ರೋ ಫೈನಾನ್ಸ್ ಕಿರುಕುಳ ದೂರುಗಳು ಚಿತ್ರದುರ್ಗದಲ್ಲಿ ಇಲ್ಲ. ಅಂತಹ ದೂರುಗಳಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು. ಅಗತ್ಯ ಕಠಿಣ ಕ್ರಮಕ್ಕೆ ಎಸ್ಪಿ, ಡಿಸಿಗೆ ಸೂಚನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ತುಮಕೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ: ಪರಮೇಶ್ವರ್