ಬಾಗಲಕೋಟೆ: ಪ್ರಜ್ವಲ್ ರೇವಣ್ಣ (Prajwal Revanna) ಎಲ್ಲಿಗಾದರೂ ಎಸ್ಕೇಪ್ ಆಗಲು, ಯಾವುದೇ ದೇಶಕ್ಕೆ ಹೋಗಿರಲಿ, ಅಲ್ಲಿಂದ ಹಿಡಿದು ತರ್ತೀವಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಗುಡುಗಿದ್ದಾರೆ.
ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ದುಬೈಗೆ (Dubai) ಪ್ರಯಾಣ ಬೆಳೆಸಿದ್ದಾರೆಯೇ ಎಂಬುದರ ಕುರಿತು ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಅವರು ಎಲ್ಲಿಗಾದರೂ ಎಸ್ಕೇಪ್ ಆಗಿರಲಿ, ಯಾವುದೇ ದೇಶಕ್ಕೆ ಹೋಗಿರಲಿ, ಅಲ್ಲಿಂದ ಹಿಡಿದು ತರ್ತೀವಿ ಎಂದು ಸಿಎಂ ಗುಡುಗಿದ್ದಾರೆ. ಇದನ್ನೂ ಓದಿ: ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡ್ತಿದ್ರು: ಪ್ರಜ್ವಲ್ ವಿರುದ್ಧ ಮತ್ತೊಬ್ಬ ಸಂತ್ರಸ್ತೆ ದೂರು
Advertisement
Advertisement
ಪಾಸ್‌ಪೋರ್ಟ್ ರದ್ದು ಮಾಡುವ ಅಧಿಕಾರ ಇರೋದು ಕೇಂದ್ರ ಸರ್ಕಾರಕ್ಕೆ, ನಾನು ಪ್ರಧಾನಿಗೆ ರದ್ದು ಮಾಡಿ ಅಂದು ಪತ್ರ ಕೂಡ ಬರೆದಿದ್ದೇನೆ. ಆದ್ರೆ ಕೇಂದ್ರ ಸರ್ಕಾರವೇ ಪ್ರಜ್ವಲ್‌ರನ್ನ ರಕ್ಷಣೆ ಮಾಡುತ್ತಿದೆ. ಕುಮಾರಸ್ವಾಮಿ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ನನ್ನ ಮಗ ಇದ್ದ ಹಾಗೆ. ನನ್ನ ಮಗ ಬೇರೆ ಅಲ್ಲ, ಪ್ರಜ್ವಲ್ ಬೇರೆ ಅಲ್ಲ ಅಂದಿದ್ದರು. ಈಗ ಅವರ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂತಿದ್ದಾರೆ. ಅವರು ಎಲ್ಲಾ ಕುಕೃತ್ಯವನ್ನು ಒಟ್ಟಿಗೆ ಮಾಡ್ತಾರೆ, ಆಮೇಲೆ ನಾವಲ್ಲ ಅಂತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
Advertisement
ಅಲ್ಲದೇ ಪ್ರಜ್ವಲ್ ರೇವಣ್ಣ ಮೇಲೆ ರೇಪ್ ಕೇಸ್ ನೀಡಿದ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಯನ್ನ ರೇವಣ್ಣ ಎಸ್ಕೇಪ್ ಮಾಡಿಸಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಆ ಹೆಣ್ಣುಮಗಳು ಎಲ್ಲಿ ಹೋಗಿದ್ದಾರೆ? ಎಂದು ಪತ್ತೆ ಹಚ್ಚಲು ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಮೇಥಿಯಲ್ಲಿ ಗಾಂಧಿ ಕುಟುಂಬಯೇತರ ಅಭ್ಯರ್ಥಿ – ಯಾರಿದು ಕಿಶೋರಿ ಲಾಲ್ ಶರ್ಮಾ?
Advertisement
ಪ್ರಜ್ವಲ್ ವಿಡಿಯೊ ಬಗ್ಗೆ ಗೊತ್ತಿದ್ದರೂ ಯಾಕೆ ಅಲಯನ್ಸ್ ಮಾಡಿಕೊಂಡರು? ಮೋದಿ ನಾ ಖಾವುಂಗಾ ನಾ ಖಾನೆ ದೂಂಗಾ ಅಂತಾರೆ. ಅದೇ ಜನ ಇನ್ಕಮ್ ಟ್ಯಾಕ್ಸ್, ಇಡಿ ರೇಡ್ ಆದವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ. ಅಪರಾಧಿಗಳನ್ನೆಲ್ಲ ಸೇರಿಸಿಕೊಂಡಿದ್ದಾರೆ, ಅವರೂ ಮಾಡಬಾರದ ಕೆಲಸ ಮಾಡ್ತಾರೆ. ಅಧಿಕಾರ ಮಾಡುವುದಕ್ಕೋಸ್ಕರ ಮಾಡಬಾರದ ಕೆಲಸಗಳನ್ನೇ ಮಾಡ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಹುಬ್ಬಳ್ಳಿ ನೇಹಾ ಕೊಲೆ ಲವ್ ಜಿಹಾದ್ ಎಂಬ ಅಮಿತ್ ಶಾ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ, ಅಮಿತ್ ಶಾ ರಾಜಕೀಯಕ್ಕೋಸ್ಕರ ಹೇಳ್ತಾರೆ. ನೇಹಾ ಪ್ರಕರಣದಲ್ಲಿ ಕೂಡಲೇ ಆರೋಪಿಯನ್ನ ಬಂಧಿಸಿದ್ದೇವೆ. ತನಿಖೆಯನ್ನ ಸಿಐಡಿಗೆ ಕೊಟ್ಟಿದ್ದೆವೆ. ಆರೋಪಿಗೆ ಕಠಿಣ ಶಿಕ್ಷೆ ಕೊಡಬೇಕು ಅಂತ, ಪಬ್ಲಿಕ್ ಪ್ರಾಸಿಕ್ಯೂಟರ್ ಜೊತೆಗೆ ಮಾತನಾಡಿ ಸ್ಪೇಷಲ್ ಕೋರ್ಟ್ ಮಾಡಿದ್ದೇವೆ. ಸರ್ಕಾರ ಕಾನೂನು ಪ್ರಕಾರ ಏನೆಲ್ಲಾ ಮಾಡಲು ಸಾಧ್ಯವೋ ಅದೆಲ್ಲವನ್ನೂ ಮಾಡಿದ್ದೇವೆ ಎಂದು ಹೇಳಿದ್ದಾರೆ.
ರಾಜಕೀಯಕ್ಕೋಸ್ಕರ ನೇಹಾ ಪ್ರಕರಣದ ಬಗ್ಗೆ ಮಾತನಾಡುವ ಅಮಿತ್ ಶಾ, ಮಣಿಪುರ ಘಟನೆ ಬಗ್ಗೆ ಯಾಕೆ ಮಾತಾಡಲಿಲ್ಲ? ದೇಶದ ಗೃಹಸಚಿವರಾಗಿ ಏನು ಮಾಡಿದರು? ಅಲ್ಲಿ ಬಿಜೆಪಿ ಸಿಎಂ ಇದ್ದಾರೆ, ಅವರನ್ನ ಬದಲಾಯಿಸಿದ್ರಾ? ಸರ್ಕಾರವನ್ನ ವಜಾಗೊಳಿಸಿದ್ರಾ ಎಂದು ಪ್ರಶ್ನೆಗಳ ಮಳೆಗರೆದಿದ್ದಾರೆ. ಇದನ್ನೂ ಓದಿ: ಬಿರುಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಫುಲ್ ಟ್ಯಾಂಕ್ ಮಾಡಿಸಿದ್ರೆ ಸಮಸ್ಯೆ ಆಗಲ್ಲ: ಇಂಡಿಯನ್ ಆಯಿಲ್ ಸ್ಪಷ್ಟನೆ