ಗೋಮಾಂಸವನ್ನು ಹಿಂದೂಗಳು, ಕ್ರಿಶ್ಚಿಯನ್ ಕೂಡ ತಿನ್ನುತ್ತಾರೆ: ಸಿದ್ದರಾಮಯ್ಯ

Public TV
1 Min Read
Siddaramaiah

ತುಮಕೂರು: ಗೋಮಾಂಸವನ್ನು ಹಿಂದೂಗಳು, ಕ್ರಿಶ್ಚಿಯನ್ ಕೂಡ ತಿನ್ನುತ್ತಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

web bjp logo 1538503012658

ನಗರದಲ್ಲಿ ನಡೆದ ಮಡಿವಾಳ-ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಯಾವ ಧರ್ಮದಲ್ಲಿ ಹುಟ್ಟಿದ್ದೇನೆ ಎಂಬುದು ಮುಖ್ಯವಲ್ಲ. ನಾವ್ಯಾರೂ ಇಂತಹ ಧರ್ಮ, ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟಿದವರಲ್ಲ. ಆದರೆ ನಾವೆಲ್ಲರೂ ಭಾರತೀಯರು ಎಂಬುದನ್ನು ಮರೆಯಬಾರದು. ಈ ದೇಶ ಒಂದು ಧರ್ಮಕ್ಕೆ ಸೇರಿದ್ದಲ್ಲ, ಎಲ್ಲರಿಗೂ ಸಮಾನ ಅವಕಾಶವಿದೆ. ಭಾರತದಲ್ಲಿರುವ ಎಲ್ಲಾ ಧರ್ಮಗಳ ಜನರ ನಡುವೆ ಸಹಬಾಳ್ವೆ ಅಗತ್ಯ. ಇದನ್ನೇ ನಮ್ಮ ಸಂವಿಧಾನವೂ ಪ್ರತಿಪಾದಿಸುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಟಿಪ್ಪು ದೇಶ ಭಕ್ತ – ಮತಾಂಧ ಆಗಿದ್ದರೆ ಹಿಂದೂ ದೇವಾಲಯಗಳು ಉಳೀತಿತ್ತಾ?: ಸಿದ್ದರಾಮಯ್ಯ

tippu

ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಹಲವು ಭಾವನಾತ್ಮಕ ವಿಚಾರಗಳ ಮೂಲಕ ಸಮಾಜವನ್ನು ಒಡೆಯುವ, ಮನುಷ್ಯರ ನಡುವೆ ಗೋಡೆಕಟ್ಟುವ ಕೆಲಸವನ್ನು ಸಂಘ ಪರಿವಾರದ ಮುಖಂಡರು ಮಾಡುತ್ತಿದ್ದಾರೆ. ಸಂವಿಧಾನದ ಪರವಾಗಿರುವ ನಾವೆಲ್ಲರೂ ದೇಶ ಒಡೆಯುವವರ ಕೈಗೆ ಅಧಿಕಾರ ಸಿಗದಂತೆ ನೋಡಿಕೊಳ್ಳಬೇಕಿದೆ. ರಾಜ್ಯದಲ್ಲಿ 2008ರಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ 1964 ರಿಂದಲೂ ಜಾರಿಯಲ್ಲಿದ್ದ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಒಂದು ವರ್ಗವನ್ನು ಟಾರ್ಗೆಟ್ ಮಾಡಿದರು. ಈಗ ಮತಾಂತರ ನಿಷೇಧ ಕಾಯ್ದೆ ಮೂಲಕ ಮತ್ತಷ್ಟು ಕಿರುಕುಳ ನೀಡುತ್ತಿದೆ. ಹುಸಿ ಜಾತ್ಯತೀತತೆ ಪ್ರದರ್ಶಿಸುತ್ತಿರುವ ಜೆಡಿಎಸ್ ಈ ಎರಡು ಮಹತ್ವದ ಕಾಯ್ದೆಗಳ ಚರ್ಚೆಯ ವೇಳೆ ಸಭಾತ್ಯಾಗ ಮಾಡಿ, ಕಾಯ್ದೆ ಪಾಸಾಗುವಂತೆ ಮಾಡಿ, ಈಗ ನಾಟಕವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಭಿಮಾನಿ ಮಗುವಿಗೆ ತಮ್ಮದೇ ಹೆಸರನ್ನಿಟ್ಟ ಸಿದ್ದರಾಮಯ್ಯ

cow cattle759

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಜಾರಿಗೆ ತಂದ ಶಾದಿ ಭಾಗ್ಯ, ಟಿಪ್ಪು ಜಯಂತಿ ಮತಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ಮಾಡಿದ ಕಾರ್ಯಕ್ರಮಗಳಲ್ಲ. ಬಿಜೆಪಿ, ಆರ್‍ಎಸ್‍ಎಸ್‍ನವರು ದೂರುವಂತೆ ಟಿಪ್ಪು ಮತಾಂಧನಾಗಿದ್ದರೆ ಶ್ರೀರಂಗಪಟ್ಟಣ ಹಾಗೂ ಇತರೆ ಕಡೆಗಳಲ್ಲಿ ಅಷ್ಟೊಂದು ಹಿಂದೂ ದೇವಾಲಯಗಳಿರಲು, ಅವರ ಆಸ್ಥಾನದಲ್ಲಿ ಹಿಂದೂ ಅಧಿಕಾರಿಗಳು ಕೆಲಸ ಮಾಡಲು ಸಾಧ್ಯವಿತ್ತೇ ಎಂದು ಪ್ರಶ್ನಿಸಿದರು.

Share This Article
Leave a Comment

Leave a Reply

Your email address will not be published. Required fields are marked *