ರಾಯಚೂರು: ಇಲ್ಲಿಯವರೆಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಂಭಾಪುರಿ ಮಠಕ್ಕೆ ಯಾವತ್ತೂ ಕೂಡ ಬಂದಿಲ್ಲ. ಒಮ್ಮೆ ಭೇಟಿ ನೀಡಬೇಕೆಂದು ರಂಭಾಪುರಿ ಶ್ರೀ ವೀರಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವೇದಿಕೆ ಕಾರ್ಯಕ್ರಮದಲ್ಲಿ ಆಹ್ವಾನ ನೀಡಿದರು.
Advertisement
ಜಿಲ್ಲೆಯ ದೇವದುರ್ಗದ ಗಬ್ಬೂರನಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಅವರು, ರಂಭಾಪುರಿ ಶ್ರೀಗಳು ನನಗೂ ನಮ್ಮ ಪಕ್ಷಕ್ಕೂ ಆಶೀರ್ವಾದ ಮಾಡಿದ್ದಾರೆ. ಅವರಿಗೆ ಅನಂತ ಅನಂತ ಧನ್ಯವಾದಗಳು ಅಂತ ಸಿದ್ದರಾಮಯ್ಯ ಭಾಷಣದಲ್ಲಿ ಮಾತನಾಡಿದ ಹಿನ್ನೆಲೆ ಅದಕ್ಕೆ ಪ್ರತಿಯಾಗಿ ಮಠಕ್ಕೆ ಬರುವಂತೆ ಶ್ರೀಗಳು ಆಹ್ವಾನ ನೀಡಿದರು. ಇದನ್ನೂ ಓದಿ: ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ
Advertisement
Advertisement
ಮದುವೆ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಮತ್ತು ನಾನು ಬಂದಿದ್ದು ಯೋಗ ಯೋಗ ಅಂತ ಶ್ರೀಗಳು ಹೇಳಿದರು. ವೇದಿಕೆ ಮೇಲೆ ಇದ್ದ ರಂಭಾಪುರಿ ಶ್ರೀಗಳ ಬಗ್ಗೆ ಸಿದ್ದರಾಮಯ್ಯ ಮಾತನಾಡಿ, ಶ್ರೀಗಳ ಆಶೀರ್ವಾದ ನಮಗೆ ಇದೆ ಎಂದರು. ಇದನ್ನೂ ಓದಿ: ಜ್ಞಾನವಾಪಿ ಕೇಸ್ ವಾರಣಾಸಿ ಕೋರ್ಟ್‍ಗೆ ವರ್ಗಾವಣೆ – ವಾದ, ಪ್ರತಿವಾದ ಹೇಗಿತ್ತು?
Advertisement
ಇನ್ನೂ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು, ಸಮಾಜದಲ್ಲಿ ನಡೆಯುತ್ತಿರುವ ಧರ್ಮ ಮತ್ತು ರಾಜಕೀಯ ಸಂಘರ್ಷಗಳು ಒಳ್ಳೆಯದಲ್ಲ. ಇದನ್ನ ಪ್ರತಿಯೊಬ್ಬ ಮನುಷ್ಯ ಅರ್ಥ ಮಾಡಿಕೊಳ್ಳಬೇಕು. ಪ್ರತಿಯೊಂದು ಧರ್ಮದವರು ಪ್ರೀತಿ ವಿಶ್ವಾಸದಿಂದ ಬಾಳಬೇಕು. ಸೌಹಾರ್ದತೆಯಿಂದ ಬಾಳಿ ಬದುಕಬೇಕು ಅನ್ನೋದು ರಂಭಾಪುರಿ ಪೀಠದ ಧ್ಯೇಯವಾಗಿದೆ ಅಂತ ರಂಭಾಪುರಿ ಶ್ರೀಗಳು ತಿಳಿಸಿದರು.