ಬೆಳಗಾವಿ: ರಾಜಕೀಯವಾಗಿ ನಾಲ್ಕು ದಿನ ವಿಳಂಬ ಆಗಬಹುದು. ಇವತ್ತಿಲ್ಲಾ ನಾಳೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು. ಹೊಸ ಸಿಎಂ ಯಾರು ಅನ್ನೋದು ಕಾಂಗ್ರೆಸ್‌ಗೆ ಬಿಟ್ಟ ವಿಚಾರ ಎಂದು ಸಂಸದ ಜಗದೀಶ್ ಶೆಟ್ಟರ್ (jagadish Shettar) ಹೇಳಿಕೆ ನೀಡಿದ್ದಾರೆ.
ಬೆಳಗಾವಿಯ (Belagavi) ತಮ್ಮ ನೂತನ ಕಚೇರಿಯಲ್ಲಿ ಪೂಜೆ ನೆರವೇರಿಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಸರ್ಕಾರ ಬೀಳಿಸಲು ಬಿಜೆಪಿ ಯಾವುದೇ ರೀತಿಯ ಆಪರೇಷನ್ ಕಮಲ ಮಾಡುತ್ತಿಲ್ಲ. ಅವರ ಸ್ವಯಂಕೃತ ಅಪರಾಧದಿಂದ ಸರ್ಕಾರ ಬಿದ್ದು ಹೋಗಲಿದೆ. ಈಗಾಗಲೇ 8 ಜನ ಸಿಎಂ ಆಗಲೂ ತಯಾರಿದ್ದಾರೆ. ಅವರಲ್ಲಿ ಆಂತರಿಕ ಪೈಪೋಟಿ ನಡೆಯುತ್ತಿದೆ. ಸಿದ್ದರಾಮಯ್ಯ ಸಿಎಂ, ಡಿ.ಕೆ.ಶಿವಕುಮಾರ್ ಡಿಸಿಎಂ ಆದ ದಿನದಿಂದಲೇ ಒಳ ಜಗಳ ಇದೆ. ಆ ಒಳಜಗಳದಿಂದಲೇ ಈ ಸರ್ಕಾರ ಬಿದ್ದು ಹೋಗಲಿದೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಉತ್ತರ ಪ್ರದೇಶ| ಮಗಳನ್ನು ಹಗ್ಗದಲ್ಲಿ ತಲೆಕೆಳಗಾಗಿ ನೇತುಹಾಕಿ ಮನಬಂದಂತೆ ಥಳಿಸಿದ ತಂದೆ
Advertisement
ಚಳಿಗಾಲದ ಅಧಿವೇಶನಕ್ಕೆ ಹೊಸ ಸಿಎಂ ಬರ್ತಾರೆ ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಜ್ಯಾಧ್ಯಕ್ಷರು ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೆ ಅವರಿಗೆ ಬಿಟ್ಟ ವಿಚಾರ. ನನ್ನ ರಾಜಕೀಯ ಅನುಭವದ ಮೇಲೆ ಹೇಳುವುದಾದರೆ, ಮುಡಾ ಪ್ರಕರಣ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗುತ್ತಿದೆ. ತಪ್ಪು ಮಾಡಿರೋದು ಗೊತ್ತಿದೆ. ಲೋಕಾಯುಕ್ತ ತನಿಖೆ ಆಗ್ತಿದೆ. ಇಷ್ಟಾದ್ರು ಸಿಎಂ ಆಗಿ ಮುಂದುವರೆದಿರೋ ಸಿದ್ದರಾಮಯ್ಯ ಅವರಿಗೆ ನೈತಿಕತೆ ಇಲ್ಲ. ಇದು ಬಂಡತನದ ಪರಮಾವಧಿ ಎಂದು ಕಿಡಿಕಾರಿದರು. ಇದನ್ನೂ ಓದಿ: ದಸರಾ ಸಂಭ್ರಮದ ನಡುವೆ ವರುಣ ಎಂಟ್ರಿ – ಮಳೆಯ ನಡುವೆಯೂ ಜನರ ಸಂಭ್ರಮ
Advertisement
Advertisement
ಮುಡಾ ಹಗರಣದಲ್ಲಿ (MUDA Scam) ರಾಜೀನಾಮೆ ಕೊಡುವಂತೆ ಹೇಳಿದರೆ ಸಿದ್ದರಾಮಯ್ಯ ಭಂಡತನ ಪ್ರದರ್ಶಿಸುತ್ತಿದ್ದಾರೆ. ಜನರ ಗಮನವನ್ನು ಬೇರೆ ಕಡೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ರಾಜೀನಾಮೆ ವಿಚಾರ ಚರ್ಚೆ ನಡೆಯುತ್ತಿದೆ. ಒಂದೊಂದೇ ವಿಷಯಗಳನ್ನ ತೆಗೆದುಕೊಂಡು ಬರುತ್ತಿದ್ದಾರೆ. ಜಾತಿಗಣತಿಯ ವರದಿ ಕ್ಯಾಬಿನೆಟ್‌ನಲ್ಲಿ ಸಲ್ಲಿಸುತ್ತೇವೆ ಎಂದರು. ಈಗ ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಹೋರಾಟದ ಹಿನ್ನೆಲೆ ಇರುವ ಕೇಸ್ ನಾವು ವಾಪಸ್ ಪಡೆದಿದ್ದೇವೆ. ರೈತರ ಮಹದಾಯಿ ಹೋರಾಟ ಕೇಸ್ ಯಾಕೆ ವಾಪಸ್ ತೆಗೆದುಕೊಳ್ಳಲಿಲ್ಲ. ಮಹದಾಯಿ ವಿಚಾರದಲ್ಲಿ ಯಾಕೆ ವಿಳಂಬ ಆಗುತ್ತಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಮಡಿಕೇರಿ ದಸರಾಕ್ಕೆ ಕ್ಷಣಗಣನೆ – ದಶಮಂಟಪಗಳ ಪ್ರದರ್ಶನದ ವೀಕ್ಷಣೆಗೆ ದೂರದ ಊರುಗಳಿಂದ ಜನರು
Advertisement