ಬೆಂಗಳೂರು: ಸೋಲಿನ ಭಯದಲ್ಲಿ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು (Bank Account) ಬಿಜೆಪಿ ಸೀಜ್ ಮಾಡಿದೆ. ಈ ಬಾರಿ ಬಿಜೆಪಿಯನ್ನು ದೇಶದ ಜನ ಸ್ಪಷ್ಟವಾಗಿ ತಿರಸ್ಕರಿಸಿ ಭಾರತವನ್ನು ಉಳಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ.
ಕೆಪಿಸಿಸಿ (KPCC) ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬ್ರಿಟಿಷರನ್ನು ಭಾರತದಿಂದ ಓಡಿಸಲು ಸುದೀರ್ಘ ಹೋರಾಟ ನಡೆಸಿ ಹುತಾತ್ಮರಾದ, ಜೈಲು ಸೇರಿದ ಚರಿತ್ರೆ ಕಾಂಗ್ರೆಸ್ಕ್ಕೆ ಇದೆ. ಬಿಜೆಪಿ ನಮಗೆ ಎಷ್ಟೇ ತೊಂದರೆ ಕೊಟ್ಟರೂ ಕಾಂಗ್ರೆಸ್ ಕಾರ್ಯಕರ್ತರು (Congress Workers) ಹೋರಾಟದ ಹಾದಿಯಲ್ಲೇ ಎಲ್ಲವನ್ನೂ ಎದುರಿಸಲಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಇದು ಮಗನ ರಾಜಕೀಯ ಭವಿಷ್ಯ- ಟಿಕೆಟ್ಗಾಗಿ ಸಿಎಂಗೆ ದುಂಬಾಲು ಬಿದ್ದ ಮಹದೇವಪ್ಪ
Advertisement
Advertisement
ಪ್ರಜಾಪ್ರಭುತ್ವದಲ್ಲಿ ಜನಾಭಿಪ್ರಾಯ ಅಂತಿಮ. ಕಾಂಗ್ರೆಸ್ ಜನರಿಂದ ಹಣ ಸಂಗ್ರಹಿಸಿದೆ. ಜನರು ಸ್ವಯಂಪ್ರೇರಿತವಾಗಿ ಕೊಟ್ಟ ಹಣ ಕಾಂಗ್ರೆಸ್ ಖಾತೆಯಲ್ಲಿತ್ತು. ಸಣ್ಣ ತಾಂತ್ರಿಕ ಕಾರಣ ನೀಡಿ ಇಡೀ ಖಾತೆಯನ್ನು ಸೀಜ್ ಮಾಡಿರುವುದು ಸರ್ವಾಧಿಕಾರಿ ಧೋರಣೆ. ಕಾಂಗ್ರೆಸ್ ಪಕ್ಷ ಚುನಾವಣೆ ನಡೆಸದಂತೆ ಬಿಜೆಪಿ ಈ ರೀತಿಯ ತೊಂದರೆ ಕೊಡುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಇದು ಖಂಡನೀಯ ಎಂದು ಅಸಮಾಧಾನ ಹೊರಹಾಕಿದ್ದಾರೆ.
Advertisement
Advertisement
ಬಿಜೆಪಿ ಮನುಸ್ಮೃತಿಯ ಮಾರಕ ಮನಸ್ಥಿತಿಯನ್ನು ಹೊಂದಿದೆ. ಹೀಗಾಗಿ ಬಿಜೆಪಿಗೆ ಅಸಮಾನತೆ ಇರಬೇಕು, ಜಾತಿ ವ್ಯವಸ್ಥೆ ಗಟ್ಟಿಯಾಗಬೇಕು, ನಿರುದ್ಯೋಗ ಹೆಚ್ಚಾಗಬೇಕು, ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಬಾರದು. ಈ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಬಾರದು ಎನ್ನುವ ಮನಸ್ಥಿತಿ ಬಿಜೆಪಿಯದ್ದಾಗಿದೆ. ಇದಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಹಣ ಇಲ್ಲದಂತೆ ಮಾಡಲು ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಿಸ್ತೂಲ್ ಪರಿಶೀಲನೆ ವೇಳೆ ಮಿಸ್ ಫೈರಿಂಗ್- ಪೇದೆ ಕಾಲಿಗೆ ಗುಂಡೇಟು
ಸಿಎಎ, ಪುಲ್ವಾಮಾ, ಅಯೋಧ್ಯೆ ಹೆಸರಲ್ಲಿ ಇನ್ನೂ ಎಷ್ಟು ವರ್ಷ ಭಾರತೀಯರನ್ನು ಭಾವನಾತ್ಮಕವಾಗಿ ಮರಳು ಮಾಡ್ತೀರಿ? ಜನರ ಬದುಕಿನ ಸಮಸ್ಯೆಗಳಿಗೆ ನೆಪಕ್ಕೂ ಸ್ಪಂದಿಸದ ನೀವು ಕೇವಲ ಭಾವನಾತ್ಮಕವಾಗಿ ಕೆರಳಿಸುತ್ತಾ ಇದ್ದೀರಿ. ಆದರೆ ಭಾರತದ ಜನತೆ ನಿಮ್ಮನ್ನು ಈ ಬಾರಿ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಒಬ್ಬೊಬ್ಬ ಶಾಸಕನಿಗೂ ಬಿಜೆಪಿಯವ್ರಿಂದ 50 ಕೋಟಿ ಆಫರ್: ಸಿಎಂ ಗಂಭೀರ ಆರೋಪ