ಕೆಲವರಿಗೆ ದಿವ್ಯ ಜ್ಞಾನವಿರುತ್ತೆ, ಆ ಜ್ಞಾನ ನಮಗಿಲ್ಲ: ಸಿದ್ದರಾಮಯ್ಯ

Public TV
2 Min Read
hbl siddu

ಹುಬ್ಬಳ್ಳಿ: ಕೆಲವರಿಗೆ ದಿವ್ಯ ಜ್ಞಾನವಿರುತ್ತೆ, ಆ ಜ್ಞಾನ ನಮಗಿಲ್ಲ ಎಂದು ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ ಅವರ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಧ್ಯಂತರ ಚುನಾವಣೆ ಮಾಡುವುದು ಸೂಕ್ತ ಎಂದಿದ್ದ ಬಸವರಾಜ್ ಹೊರಟ್ಟಿ ಹೇಳಿಕೆಗೆ ತಿರುಗೇಟು ನೀಡಿದರು. ಮಧ್ಯಂತರ ಚುನಾವಣೆ ಬರುವ ಪ್ರಶ್ನಯೇ ಇಲ್ಲ. ಕೆಲವರಿಗೆ ದಿವ್ಯ ಜ್ಞಾನ ಇರುತ್ತೆ, ಆ ಜ್ಞಾನ ನಮಗಿಲ್ಲ ಎಂದು ವ್ಯಂಗ್ಯವಾಡಿದರು. ಬಳಿಕ ಮೈತ್ರಿ ಒಂದೇ ಲೋಕಸಭೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣ ಅಲ್ಲ. ಆದರೆ ಸೋಲಿಗೆ ಕಾರಣವಾದ ಹಲವು ವಿಷಯದಲ್ಲಿ ಮೈತ್ರಿಯೂ ಒಂದು ಕಾರಣ ಇರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Basavaraj horatti

ಬುಧವಾರ ಬೂತ್ ಲೇವಲ್ ಮೀಟಿಂಗ್ ಮಾಡಿದ್ದೇವೆ. ಪಕ್ಷವನ್ನು ಬೂತ್ ಮಟ್ಟದಲ್ಲಿ ಗಟ್ಟಿ ಗೊಳಿಸಬೇಕಿದೆ. ಹೀಗಾಗಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡುತ್ತೇವೆ. ಡಿಸೆಂಬರ್ ಒಳಗೆ ಕೆಲಸ ಮುಗಿಸಿ ಎಂದು ನಾನು ಹೇಳಿಲ್ಲ, ಬದಲಿಗೆ ಕೆಲಸವನ್ನು ಚುರುಕುಗೊಳಿಸಿ ಎಂದು ಹೇಳಿರುವೆ. ಎರಡು ಪಕ್ಷ ಸೇರಿ ಸರ್ಕಾರ ರಚನೆ ಮಾಡಿದೆ. ಹೀಗಾಗಿ ಮೈತ್ರಿಯಲ್ಲಿ ಅಸಮಾಧಾನ ಸಹಜ. ನಿನ್ನೆ ನೆಡೆದ ಮೀಟಿಂಗ್‍ನಲ್ಲಿ ಕೆಲವರು ತಮ್ಮ ತಮ್ಮ ಅಭಿಪ್ರಾಯ ಹೇಳಿದ್ದಾರೆ. ಸೋಲಿನ ಬಗ್ಗೆ ಪರಾಮರ್ಶೆ ಮಾಡಲಾಗಿದೆ ಎಂದು ತಿಳಿಸಿದರು.

hbl siddu 1

ಸಿಎಂ ವೋಟ್ ಪ್ರಧಾನಿ ಮೋದಿಗೆ ಆದ್ರೆ ಕೆಲಸಕ್ಕೆ ನಾವು ಬೇಕಾ ಎಂದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿಎಂ ಯಾವ ಅರ್ಥದಲ್ಲಿ ಈ ಹೇಳಿಕೆ ನೀಡಿದ್ದಾರೆ ನನಗೆ ಗೊತಿಲ್ಲ. ಗೊತಿಲ್ಲದೇ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ಅವರೇ ಅದಕ್ಕೆ ಕ್ಷಮೆ ಕೇಳಿದ್ದಾರೆ ಎಂದು ಹೇಳಿದರು.

modi cm hdk angry 1

ಸಿಎಂ ಹೇಳಿದ್ದೇನು?
ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಸಾರಿಗೆ ಬಸ್‍ನಲ್ಲಿ ಸಿಎಂ ಪ್ರಯಾಣಿಸುತ್ತಿದ್ದ ವೇಳೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು.

lathi charge cm hdk

ಈ ವೇಳೆ ಕೋಪಗೊಂಡ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು ಹೇಳಿ ಪ್ರತಿಭಟನಾಕಾರರ ಮೇಲೆ ಕೂಗಾಡಿದರು. ಅಷ್ಟೇ ಅಲ್ಲ ನಾನು ಗ್ರಾಮವಾಸ್ತವ್ಯ ಮಾಡುವುದಿಲ್ಲ ಎಂದು ಹೇಳಿದರು.

CM AA

ನಂತರ ಸಿಎಂ ತಮ್ಮ ಸಿಟ್ಟನ್ನು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಮೇಲೆ ಹೊರ ಹಾಕಿದರು. ಗರಂ ಆಗಿದ್ದ ಸಿಎಂ ಅವರನ್ನು ನಾಡಗೌಡ ಅವರು ಸಮಾಧಾನಪಡಿಸಿ, ಯಾವನ್ರೀ ಅವನು ಎಸ್ಪಿ   ಎಂದು ಪೊಲೀಸ್ ಅಧಿಕಾರಿಗಳ ಮೇಲೆ ತಮ್ಮ ಕೋಪವನ್ನು ಹೊರಹಾಕಿದರು.

Share This Article
Leave a Comment

Leave a Reply

Your email address will not be published. Required fields are marked *