ಮಂಡ್ಯ: ಈವರೆಗೆ ನಾನು ಯಾರಿಂದಲೂ ಛೀ, ಥೂ ಅನ್ನಿಸಿಕೊಂಡು ಅಧಿಕಾರ ಮಾಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಮಂಡ್ಯ ತಾಲೂಕಿನ ತಿರುಮಲಾಪುರ ಗ್ರಾಮದಲ್ಲಿ ಹುಲಿಯೂರಮ್ಮ ದೇವಸ್ಥಾನ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಜನರು ಆಶೀರ್ವಾದ ಮಾಡಿದ್ದರಿಂದ 5 ವರ್ಷ ಸಿಎಂ ಆಗಿದ್ದೆ. ಯಾರಿಂದಲೂ ಛೀ, ಥೂ ಅನಿಸಿಕೊಂಡು ಅಧಿಕಾರ ಮಾಡಲಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. 158 ಭರವಸೆಗಳನ್ನೂ ಈಡೇರಿಸಿದ್ದೇವೆ. ಅದನ್ನು ಮೀರಿ 30ಕ್ಕೂ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸೆಣಬಿನ ಬೀಜದ ಎಣ್ಣೆ ಬಗ್ಗೆ ತಿಳಿದಿದ್ದೀರಾ? ಇದರಲ್ಲಿದೆ ತ್ವಚೆ ಸೌಂದರ್ಯದ ಗುಟ್ಟು
Advertisement
Advertisement
ಎಲ್ಲಾ ಜಾತಿ ಬಡವರಿಗೆ ಕಾರ್ಯಕ್ರಮ ಕೊಟ್ಟಿದ್ದೇನೆ. ಕೆಲವೇ ಜಾತಿಗಳಿಗೆ ಸೀಮಿತವಾಗಿ ನಾನು ಅಧಿಕಾರ ಮಾಡಲಿಲ್ಲ. ಅಕ್ಕಿ, ಹಾಲು, ಶೂ, ಸಮವಸ್ತ್ರ ಎಲ್ಲಾ ಧರ್ಮ, ಜಾತಿವರಿಗೂ ಉಪಯೋಗವಾಗಿದೆ. ಇವತ್ತು ಎಲ್ಲವನ್ನೂ ಹಾಳು ಮಾಡ್ತಿದ್ದಾರೆ. ಕೃಷಿ ಭಾಗ್ಯ ಕಾರ್ಯಕ್ರಮ ಕೂಡ ನಿಲ್ಲಿಸಿದ್ದಾರೆ. ರಾಜ್ಯದಲ್ಲಿ 2 ವರ್ಷದಿಂದ ವಿದ್ಯಾರ್ಥಿ ವೇತನ (Student Scholarship) ಕೊಟ್ಟಿಲ್ಲ. ಈ ಬಗ್ಗೆ ಎಸ್ಸಿ-ಎಸ್ಟಿ ಮಕ್ಕಳು (SC ST Community) ನನ್ನ ಮುಂದೆ ದೂರುತ್ತಿದ್ದಾರೆ. ವಿದ್ಯಾಸಿರಿ ಕಾರ್ಯಕ್ರಮ ನಿಲ್ಲಿಸಿದ್ದಾರೆ. ಹೀಗಿರುವಾಗಿ ಎಸ್ಸಿ-ಎಸ್ಟಿ ಸಮುದಾಯಗಳ ಬಗ್ಗೆ ಮಾತನಾಡುವುದಕ್ಕೆ ಇವರಿಗೆ ಯಾವ ನೈತಿಕತೆಯಿದೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಾನು ಪ್ರೀತಿಸಿದ ಮೊದಲ ಹುಡುಗಿ ಸಮಂತಾ: ಟ್ವೀಟ್ ಮಾಡಿದ ವಿಜಯ್ ದೇವರಕೊಂಡ
Advertisement
Advertisement
ಬಿಜೆಪಿ ಅವರು ಅಧಿಕಾರಕ್ಕೆ ಬಂದಿರೋದೇ ಹಿಂಬಾಗಲಿನಿಂದ. ನಾವು ಮುಂಭಾಗಲಿಂದಲೇ ಓಡಿಸೋಣ. ಇಂತಹವರು ಮತ್ತೆ ಅಧಿಕಾರಕ್ಕೆ ಬರಬೇಕಾ? ನಾವು ಅಧಿಕಾರಕ್ಕೆ ಬಂದ್ರೆ ಜನೋಪಯೋಗಿ ಕೆಲಸ ಮಾಡ್ತೇವೆ. ಜನರಿಗೆ ಉಪಯೋಗ ಆಗುವ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಬಿಜೆಪಿ ವಿರುದ್ಧ ಸಿದ್ದು ಗುಡುಗಿದ್ದಾರೆ.