ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣ ಕಸಿಯುತ್ತಿದೆ ಬಿಜೆಪಿ: ಸಿದ್ದು

Public TV
2 Min Read
Siddaramaiah Chamarajanagar

ಬೆಂಗಳೂರು: ಹಿಜಬ್‌ ವಿವಾದ ಮತ್ತಷ್ಟು ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಬಿಜೆಪಿಯವರೇ ಸಂಘ ಪರಿವಾದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದು ಟ್ವೀಟ್‌ನಲ್ಲೇನಿದೆ?
ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆದು, ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ. ಇದನ್ನೂ ಓದಿ: ಹಿಜಬ್ ಹಾಕಿಸೋಕೆ ಅಥವಾ ತೆಗಿಸೋಕೆ ಯಾರೇ ಬಂದ್ರು ಒದ್ದು ಒಳಗೆ ಹಾಕಿ: ಪ್ರಹ್ಲಾದ್ ಜೋಶಿ

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ನಲ್ಲಿ ಮಧ್ಯಂತರ ತೀರ್ಪು ಬಂದಿದೆ. ಶಾಲಾಭಿವೃದ್ಧಿ ಕಮಿಟಿ ಇರುವ ಕಡೆಗಳಲ್ಲಿ ಸಮಿತಿಯು ಸಮವಸ್ತ್ರ ನೀತಿ ರೂಪಿಸಿದ್ದರೆ ಅಲ್ಲಿ ಮಾತ್ರ ಈ ಆದೇಶ ಅನ್ವಯವಾಗುತ್ತದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.

ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧೀನದಲ್ಲಿನ ವಸತಿ ಶಾಲಾ ಕಾಲೇಜುಗಳು, ಮೌಲಾನಾ ಆಜಾದ್ ಮಾದರಿ ಶಾಲೆಗಳು (ಆಂಗ್ಲ ಮಾಧ್ಯಮ) ಶಾಲೆಗಳಿಗೂ ಹೈಕೋರ್ಟ್ ತೀರ್ಪು ಅನ್ವಯವಾಗುತ್ತದೆ ಎಂದು ಸುತ್ತೋಲೆ ಹೊರಡಿಸಿದ್ದಾರೆ. ಇದನ್ನೂ ಓದಿ: ಸೈನ್ ಭಾಷೆ ಅರ್ಥಮಾಡಿಕೊಳ್ಳುವ ಎಐ ಮಾದರಿಯನ್ನು ರಚಿಸಿದ 20 ವರ್ಷದ ಯುವತಿ

ಮೊದಲನೆಯದಾಗಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾಭಿವೃದ್ಧಿ ಸಮಿತಿಯೇ ಇರುವುದಿಲ್ಲ, ಶಾಲಾಭಿವೃದ್ಧಿ ಸಮಿತಿ ರೂಪಿಸಿದ ಸಮವಸ್ತ್ರ ನೀತಿಗೆ ಮಾತ್ರ ಹೈಕೋರ್ಟ್ ತೀರ್ಪು ಅನ್ವಯವಾಗುತ್ತದೆ. ಹಾಗಾಗಿ ಈ ಸುತ್ತೋಲೆ ಘನ ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗುತ್ತದೆ.

ಅಲ್ಪಸಂಖ್ಯಾತ ನಿಯೋಗದ ಜೊತೆ ನಾನು, ಡಿ.ಕೆ.ಶಿವಕುಮಾರ್‌ ಅವರು ಇಂದು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಗೊಂದಲ ನಿವಾರಿಸುವಂತೆ ಹೇಳಿದ್ದೇವೆ. ಯಾವ ಮಕ್ಕಳೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಕಾಳಜಿ. ಇದನ್ನೂ ಓದಿ:  ಹಿಜಬ್ ತೆಗೆದು ರೀಲ್ಸ್ ಮಾಡ್ತಾರೆ, ಈಗ ಹಿಜಾಬ್ ತೆಗೆಯೋಕಾಗಲ್ವಾ – ಬೆಳಗಾವಿ ವಿದ್ಯಾರ್ಥಿನಿಯರ ಪ್ರಶ್ನೆ

ಪ್ರಧಾನಿ ಮೋದಿ ಅವರು ಭೇಟಿ ಬಚಾವೊ, ಭೇಟಿ ಪಡಾವೋ ಎನ್ನುತ್ತಾರೆ. ಬಿಜೆಪಿಯವರೇ ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲು ಹೊರಟಿದ್ದಾರೆ. ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ಬಿಜೆಪಿಯ ನಿಲುವೇನು ಎಂದು ಮೋದಿಯವರೇ ಉತ್ತರಿಸಬೇಕು.

ಹಿಜಾಬ್ ವಿವಾದದ ಹಿಂದೆ ಯಾವುದೇ ಸಂಘಟನೆ ಇದ್ದರೂ ಅದನ್ನು ಖಂಡಿಸುತ್ತೇನೆ. ಅದು ಆರ್.ಎಸ್.ಎಸ್ ಇರಲಿ, ಎಸ್.ಡಿ.ಪಿ.ಐ ಇರಲಿ, ಭಜರಂಗ ದಳವಿರಲಿ. ಮೂಲಭೂತವಾದಿ ಸಂಘಟನೆಗಳು ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಗೆ ಮಾರಕ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *