Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ; ವಿಕಾಸ ದರ್ಶನಕ್ಕೋ.. ವಿನಾಶ ದರ್ಶನಕ್ಕೋ ಎಂದು ಸಿದ್ದು ಲೇವಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ; ವಿಕಾಸ ದರ್ಶನಕ್ಕೋ.. ವಿನಾಶ ದರ್ಶನಕ್ಕೋ ಎಂದು ಸಿದ್ದು ಲೇವಡಿ

Bengaluru City

ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ; ವಿಕಾಸ ದರ್ಶನಕ್ಕೋ.. ವಿನಾಶ ದರ್ಶನಕ್ಕೋ ಎಂದು ಸಿದ್ದು ಲೇವಡಿ

Public TV
Last updated: September 2, 2022 11:58 am
Public TV
Share
3 Min Read
SIDDU MODI
SHARE

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿಗೆ ಸ್ವಾಗತ ಕೋರಿರುವ ಕಾಂಗ್ರೆಸ್‌ ಹಲವು ಪ್ರಶ್ನೆಗಳನ್ನು ಮುಂದಿಟ್ಟು ಟಾಂಗ್‌ ಕೊಟ್ಟಿದೆ. ʼನಿಮ್ಮ ಭೇಟಿ ವಿಕಾಶ ದರ್ಶನಕ್ಕೋ ಅಥವಾ ವಿನಾಶ ದರ್ಶನಕ್ಕೋʼ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಟ್ವೀಟ್‌ನಲ್ಲೇನಿದೆ?
ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮಂಗಳೂರಿಗೆ ಸ್ವಾಗತ. ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ. ಇದನ್ನೂ ಓದಿ: ಮುರುಘಾಶ್ರೀ ಪೋಕ್ಸೊ ಪ್ರಕರಣದಲ್ಲಿ ಸರ್ಕಾರ ಎಂಟ್ರಿ ಕೊಡಲ್ಲ: ಆರ್.ಅಶೋಕ್

ಸನ್ಮಾನ್ಯ ಪ್ರಧಾನ ಮಂತ್ರಿ @narendramodi ಯವರಿಗೆ ಮಂಗಳೂರಿಗೆ ಸ್ವಾಗತ.
ನಿಮ್ಮ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ?
ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ. 1/12
#AnswerMadiModi

— Siddaramaiah (@siddaramaiah) September 2, 2022

ದಕ್ಷಿಣ ಕನ್ನಡದ ಉದ್ಯಮಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್‌ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ. ಇದು ವಿಕಾಸವೋ? ವಿನಾಶವೋ?

ಕಾರ್ಪೋರೇಷನ್ ಬ್ಯಾಂಕ್ ಸ್ಥಾಪಕರು- ಹಾಜಿ ಅಬ್ದುಲ್ಲಾ (1906), ಸಿಂಡಿಕೇಟ್ ಬ್ಯಾಂಕ್ ಸ್ಥಾಪಕರು ಟಿಎಂಎ ಪೈ, ಉಪೇಂದ್ರ ಪೈ, ವಾಮನ್ ಕುಡ್ವಾ (1925), ವಿಜಯಾ ಬ್ಯಾಂಕ್ ಸ್ಥಾಪಕರು- ಎ.ಬಿ.ಶೆಟ್ಟಿ (1931), ಪ್ರಧಾನಿ ಮೋದಿಯವರೇ, ನಿಮ್ಮ ನಡೆ ಈ ಅಮರವೀರರಿಗೆ ಬಗೆದ ದ್ರೋಹವಲ್ಲವೇ?

ಬಜ್ಪೆ ವಿಮಾನ ನಿಲ್ದಾಣ, ಎನ್ ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್- ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ.
ಬಿಜೆಪಿ ಸಂಸದ @nalinkateel ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು? ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರು?

ಇದು ವಿಕಾಸವೋ? ವಿನಾಶನೋ @narendramodi? 6/12#AnswerMadiModi

— Siddaramaiah (@siddaramaiah) September 2, 2022

ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ. (25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ಈ ವಿಮಾನ ನಿಲ್ದಾಣವನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದ್ದು (20-10-2020) ಪ್ರಧಾನಿ ಮೋದಿ. ಇದು ವಿಕಾಸವೋ? ವಿನಾಶವೋ?

ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಪ್ರಧಾನಿ ಮೋದಿ. ಇದು ವಿಕಾಸನೋ? ವಿನಾಶನೋ? ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಎದೆ ನೋವು – ಆಸ್ಪತ್ರೆಗೆ ದಾಖಲು

ಬಜ್ಪೆ ವಿಮಾನ ನಿಲ್ದಾಣ, ಎನ್‌ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್- ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ. ಬಿಜೆಪಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು? ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರು? ಇದು ವಿಕಾಸವೋ? ವಿನಾಶನೋ

ಜೂನ್ ತಿಂಗಳೊಂದರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದುವರೆ ಕೋಟಿ ಬೆಲೆಯ ಮಾದಕದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ.

ಇದು ವಿಕಾಸನೋ? ವಿನಾಶನೋ @narendramodi? 8/12#AnswerMadiModi

— Siddaramaiah (@siddaramaiah) September 2, 2022

ದಕ್ಷಿಣ ಕನ್ನಡದ ವಿಕಾಸ ಪುರುಷರು ಕಾಂಗ್ರೆಸ್ ಸಂಸದರಾಗಿದ್ದ ಉಳ್ಳಾಲ ಶ್ರೀನಿವಾಸ ಮಲ್ಯ, ಕೆಮ್ತೂರು ಕಾಂತಪ್ಪ ಶೆಟ್ಟಿ ಮತ್ತು ಬೋಳಾರ ಜನಾರ್ಧನ ಪೂಜಾರಿ. ದಕ್ಷಿಣ ಕನ್ನಡದ ವಿನಾಶ ಪುರುಷ- ಬಿಜೆಪಿ ಸಂಸದ ನಳಿನ್‌ ಕುಮಾರ್‌ ಕಟೀಲ್‌. ಇದು ವಿಕಾಸವೋ? ವಿನಾಶವೋ?

ಜೂನ್ ತಿಂಗಳೊಂದರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೂವರೆ ಕೋಟಿ ಬೆಲೆಯ ಮಾದಕ ದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ. ಇದು ವಿಕಾಸನೋ? ವಿನಾಶನೋ?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿದೆ. ಹೆಜ್ಜೆಹೆಜ್ಜೆಗೂ ಗುಂಡಿಬಿದ್ದ ರಸ್ತೆಗಳು, ಕುಸಿದು ಬಿದ್ದಿರುವ ಮನೆಗಳು, ನೆರೆಯಲ್ಲಿ ಕೊಚ್ಚಿಹೋದ ರೈತರ ಬೆಳೆಗಳು. ಪ್ರಧಾನಿ ಭೇಟಿಗಾಗಿ ಮಳೆ ಹುಳುಕನ್ನು ಮುಚ್ಚಿಟ್ಟು ರಸ್ತೆಗಳಿಗೆ ತೇಪೆ ಹಾಕಲಾಗಿದೆ. ಇದು ವಿಕಾಸನೋ? ವಿನಾಶನೋ?

48 ಕಿ.ಮೀ. ಅಂತರದಲ್ಲಿ ಬ್ರಹ್ಮರಕೂಟ್ಲು, ಸುರತ್ಕಲ್, ತಲಪಾಡಿ ಮತ್ತು ಹೆಜಮಾಡಿಗಳಲ್ಲಿ 4 ನಿಯಮಬಾಹಿರ ಟೋಲ್ ಗೇಟ್ ಗಳು.
ವಾಹನ ಸಂಚಾರಿಗಳ ಜೇಬು ಖಾಲಿ,
ಅಕ್ರಮದ ರೂವಾರಿಗಳಾದ @BJP4India ಸಂಸದರು ಮತ್ತು @BJP4Karnataka ಶಾಸಕರ ಜೇಬು ಭರ್ತಿ.

ಇದು ವಿಕಾಸನೋ? ವಿನಾಶನೋ @narendramodi? 12/12#AnswerMadiModi

— Siddaramaiah (@siddaramaiah) September 2, 2022

ಕಳೆದ ಮೂರು ವರ್ಷಗಳಲ್ಲಿ ಕಡಲ್ಕೊರೆತ ತಡೆಗೆ ರಾಜ್ಯ ಬಿಜೆಪಿ ಸರ್ಕಾರ ಖರ್ಚು ಮಾಡಿರುವ ಹಣ ಅಂದಾಜು ರೂ.250 ಕೋಟಿ. ಇದರಲ್ಲಿ 40% ಜನಪ್ರತಿನಿಧಿಗಳ ಜೇಬಿಗೆ, 60% ಕಡಲ ನೀರಿಗೆ. ಕಡಲ್ಕೊರೆತ ಮುಂದುವರಿದಿದೆ. ಇದು ವಿಕಾಸವೋ? ವಿನಾಶನೋ? ಇದನ್ನೂ ಓದಿ: ಕಾಫಿ ದೈತ್ಯ ಸ್ಟಾರ್‌ಬಕ್ಸ್‌ಗೆ ಭಾರತ ಮೂಲದ ಲಕ್ಷ್ಮಣ್ CEO ಆಗಿ ನೇಮಕ

ಕರಾವಳಿ ಮೀನುಗಾರರ ಮೇಲೆ ಸಿಆರ್‌ಜೆಡ್, ಸಿಎಂ ಜೆಡ್ ನಿಯಮಾವಳಿಗಳ ಹೇರಿಕೆ. ಪ್ರವಾಸೋದ್ಯಮದ ಹೆಸರಲ್ಲಿ ರೆಸಾರ್ಟ್, ಥೀಮ್ ಪಾರ್ಕ್‌ಗಳಿಗೆ ಮುಕ್ತ ಪರವಾನಿಗೆ. ಇದು ವಿಕಾಸನೋ? ವಿನಾಶನೋ?

48 ಕಿ.ಮೀ. ಅಂತರದಲ್ಲಿ ಬ್ರಹ್ಮರಕೂಟ್ಲು, ಸುರತ್ಕಲ್, ತಲಪಾಡಿ ಮತ್ತು ಹೆಜಮಾಡಿಗಳಲ್ಲಿ 4 ನಿಯಮಬಾಹಿರ ಟೋಲ್ ಗೇಟ್‌ಗಳು. ವಾಹನ ಸಂಚಾರಿಗಳ ಜೇಬು ಖಾಲಿ, ಅಕ್ರಮದ ರೂವಾರಿಗಳಾದ ಬಿಜೆಪಿ ಸಂಸದರು ಮತ್ತು ಬಿಜೆಪಿ ಶಾಸಕರ ಜೇಬು ಭರ್ತಿ. ಇದು ವಿಕಾಸನೋ? ವಿನಾಶನೋ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bjpcongressnarendra modisiddaramaiahಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sangeetha Bhat
ನೀಳ ಕೇಶರಾಶಿಗೆ ಕತ್ತರಿ ಹಾಕಿದ ಸಂಗೀತಾ ಭಟ್
Cinema Latest Sandalwood Top Stories
Rashmika Mandanna Mysaa
ರಶ್ಮಿಕಾ ಮಂದಣ್ಣ `ಮೈಸಾ’ ಸಿನಿಮಾದ ಮೊದಲ ಗ್ಲಿಂಪ್ಸ್‌ ರಿಲೀಸ್
Cinema Latest South cinema Top Stories
Allu Arjun Trivikram 3
ಸಾವಿರ ಕೋಟಿ ಬಜೆಟ್‌ನಲ್ಲಿ ಅಲ್ಲು ಅರ್ಜುನ್ ಮತ್ತೊಂದು ಸಿನಿಮಾ..!
Cinema Latest Top Stories
Rakshita Prem
ಸುದೀಪ್ ಯುದ್ಧದ ಮಾತು : ವಿಜಯಲಕ್ಷ್ಮಿ ತಿರುಗೇಟು ಬಗ್ಗೆ ರಕ್ಷಿತಾ ಪ್ರೇಮ್ ಹೇಳಿದ್ದೇನು?
Cinema Latest Sandalwood Top Stories

You Might Also Like

KN Rajanna
Districts

ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡಲ್ಲ: ರಾಜಣ್ಣ

Public TV
By Public TV
1 minute ago
digital arrest old man
Crime

‘ಡಿಜಿಟಲ್‌ ಅರೆಸ್ಟ್‌’ ವಂಚನೆ; 9 ಕೋಟಿ ಹಣ ಕಳೆದುಕೊಂಡ 85ರ ವೃದ್ಧ

Public TV
By Public TV
48 minutes ago
Unnao Rape Survivor Met Rahul Gandhi
Latest

ರಾಹುಲ್‌ ಗಾಂಧಿ ಭೇಟಿಯಾದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

Public TV
By Public TV
2 hours ago
R Ashoka 1
Bengaluru City

ಸಿದ್ದರಾಮಯ್ಯ ಅಧಿಕಾರ ಕೊಡಲ್ಲ, ಡಿ.ಕೆ.ಶಿವಕುಮಾರ್ ದೇವಸ್ಥಾನ ಬಿಡಲ್ಲ: ಅಶೋಕ್ ವ್ಯಂಗ್ಯ

Public TV
By Public TV
2 hours ago
Jogi Prem
Cinema

ಸ್ಯಾಂಡಲ್‌ವುಡ್‌ನಲ್ಲಿ ಫ್ಯಾನ್ಸ್ ವಾರ್ : ನಿರ್ದೇಶಕ ಪ್ರೇಮ್ ಹೇಳಿದ್ದೇನು?

Public TV
By Public TV
2 hours ago
R Ashok 1
Bengaluru City

ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯ್ತು? ಅತಿದೊಡ್ಡ ಸ್ಕ್ಯಾಂಡಲ್: ಅಶೋಕ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?