ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿಗೆ ಸ್ವಾಗತ ಕೋರಿರುವ ಕಾಂಗ್ರೆಸ್ ಹಲವು ಪ್ರಶ್ನೆಗಳನ್ನು ಮುಂದಿಟ್ಟು ಟಾಂಗ್ ಕೊಟ್ಟಿದೆ. ʼನಿಮ್ಮ ಭೇಟಿ ವಿಕಾಶ ದರ್ಶನಕ್ಕೋ ಅಥವಾ ವಿನಾಶ ದರ್ಶನಕ್ಕೋʼ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.
ಟ್ವೀಟ್ನಲ್ಲೇನಿದೆ?
ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮಂಗಳೂರಿಗೆ ಸ್ವಾಗತ. ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ. ಇದನ್ನೂ ಓದಿ: ಮುರುಘಾಶ್ರೀ ಪೋಕ್ಸೊ ಪ್ರಕರಣದಲ್ಲಿ ಸರ್ಕಾರ ಎಂಟ್ರಿ ಕೊಡಲ್ಲ: ಆರ್.ಅಶೋಕ್
ಸನ್ಮಾನ್ಯ ಪ್ರಧಾನ ಮಂತ್ರಿ @narendramodi ಯವರಿಗೆ ಮಂಗಳೂರಿಗೆ ಸ್ವಾಗತ.
ನಿಮ್ಮ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ?
ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ. 1/12
#AnswerMadiModi
— Siddaramaiah (@siddaramaiah) September 2, 2022
ದಕ್ಷಿಣ ಕನ್ನಡದ ಉದ್ಯಮಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ. ಇದು ವಿಕಾಸವೋ? ವಿನಾಶವೋ?
ಕಾರ್ಪೋರೇಷನ್ ಬ್ಯಾಂಕ್ ಸ್ಥಾಪಕರು- ಹಾಜಿ ಅಬ್ದುಲ್ಲಾ (1906), ಸಿಂಡಿಕೇಟ್ ಬ್ಯಾಂಕ್ ಸ್ಥಾಪಕರು ಟಿಎಂಎ ಪೈ, ಉಪೇಂದ್ರ ಪೈ, ವಾಮನ್ ಕುಡ್ವಾ (1925), ವಿಜಯಾ ಬ್ಯಾಂಕ್ ಸ್ಥಾಪಕರು- ಎ.ಬಿ.ಶೆಟ್ಟಿ (1931), ಪ್ರಧಾನಿ ಮೋದಿಯವರೇ, ನಿಮ್ಮ ನಡೆ ಈ ಅಮರವೀರರಿಗೆ ಬಗೆದ ದ್ರೋಹವಲ್ಲವೇ?
ಬಜ್ಪೆ ವಿಮಾನ ನಿಲ್ದಾಣ, ಎನ್ ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್- ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ.
ಬಿಜೆಪಿ ಸಂಸದ @nalinkateel ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು? ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರು?
ಇದು ವಿಕಾಸವೋ? ವಿನಾಶನೋ @narendramodi? 6/12#AnswerMadiModi
— Siddaramaiah (@siddaramaiah) September 2, 2022
ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ. (25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ಈ ವಿಮಾನ ನಿಲ್ದಾಣವನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದ್ದು (20-10-2020) ಪ್ರಧಾನಿ ಮೋದಿ. ಇದು ವಿಕಾಸವೋ? ವಿನಾಶವೋ?
ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಪ್ರಧಾನಿ ಮೋದಿ. ಇದು ವಿಕಾಸನೋ? ವಿನಾಶನೋ? ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಎದೆ ನೋವು – ಆಸ್ಪತ್ರೆಗೆ ದಾಖಲು
ಬಜ್ಪೆ ವಿಮಾನ ನಿಲ್ದಾಣ, ಎನ್ಎಂಪಿಟಿ, ಎನ್ ಎಚ್-66, ರೀಜನಲ್ ಎಂಜನಿಯರಿಂಗ್ ಕಾಲೇಜ್, ಎಂಸಿಎಫ್- ಇವೆಲ್ಲ ಕಾಂಗ್ರೆಸ್ ಸಂಸದರ ಕೊಡುಗೆ. ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಕೊಡುಗೆ ಏನು? ಮಳೆಯಲ್ಲಿ ಮುಳುಗುವ ಮಂಗಳೂರು? ಕೋಮುದ್ವೇಷದ ಬೆಂಕಿಯಲ್ಲಿ ಬೇಯುತ್ತಿರುವ ಮಂಗಳೂರು? ಇದು ವಿಕಾಸವೋ? ವಿನಾಶನೋ
ಜೂನ್ ತಿಂಗಳೊಂದರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದುವರೆ ಕೋಟಿ ಬೆಲೆಯ ಮಾದಕದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ.
ಇದು ವಿಕಾಸನೋ? ವಿನಾಶನೋ @narendramodi? 8/12#AnswerMadiModi
— Siddaramaiah (@siddaramaiah) September 2, 2022
ದಕ್ಷಿಣ ಕನ್ನಡದ ವಿಕಾಸ ಪುರುಷರು ಕಾಂಗ್ರೆಸ್ ಸಂಸದರಾಗಿದ್ದ ಉಳ್ಳಾಲ ಶ್ರೀನಿವಾಸ ಮಲ್ಯ, ಕೆಮ್ತೂರು ಕಾಂತಪ್ಪ ಶೆಟ್ಟಿ ಮತ್ತು ಬೋಳಾರ ಜನಾರ್ಧನ ಪೂಜಾರಿ. ದಕ್ಷಿಣ ಕನ್ನಡದ ವಿನಾಶ ಪುರುಷ- ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್. ಇದು ವಿಕಾಸವೋ? ವಿನಾಶವೋ?
ಜೂನ್ ತಿಂಗಳೊಂದರಲ್ಲಿಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೂವರೆ ಕೋಟಿ ಬೆಲೆಯ ಮಾದಕ ದ್ರವ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾದಕದ್ರವ್ಯ ಸೇವನೆಯಲ್ಲಿ ದೇಶದಲ್ಲಿಯೇ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದೆ. ಇದು ವಿಕಾಸನೋ? ವಿನಾಶನೋ?
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಾಖಲೆಯ ಮಳೆಯಾಗಿದೆ. ಹೆಜ್ಜೆಹೆಜ್ಜೆಗೂ ಗುಂಡಿಬಿದ್ದ ರಸ್ತೆಗಳು, ಕುಸಿದು ಬಿದ್ದಿರುವ ಮನೆಗಳು, ನೆರೆಯಲ್ಲಿ ಕೊಚ್ಚಿಹೋದ ರೈತರ ಬೆಳೆಗಳು. ಪ್ರಧಾನಿ ಭೇಟಿಗಾಗಿ ಮಳೆ ಹುಳುಕನ್ನು ಮುಚ್ಚಿಟ್ಟು ರಸ್ತೆಗಳಿಗೆ ತೇಪೆ ಹಾಕಲಾಗಿದೆ. ಇದು ವಿಕಾಸನೋ? ವಿನಾಶನೋ?
48 ಕಿ.ಮೀ. ಅಂತರದಲ್ಲಿ ಬ್ರಹ್ಮರಕೂಟ್ಲು, ಸುರತ್ಕಲ್, ತಲಪಾಡಿ ಮತ್ತು ಹೆಜಮಾಡಿಗಳಲ್ಲಿ 4 ನಿಯಮಬಾಹಿರ ಟೋಲ್ ಗೇಟ್ ಗಳು.
ವಾಹನ ಸಂಚಾರಿಗಳ ಜೇಬು ಖಾಲಿ,
ಅಕ್ರಮದ ರೂವಾರಿಗಳಾದ @BJP4India ಸಂಸದರು ಮತ್ತು @BJP4Karnataka ಶಾಸಕರ ಜೇಬು ಭರ್ತಿ.
ಇದು ವಿಕಾಸನೋ? ವಿನಾಶನೋ @narendramodi? 12/12#AnswerMadiModi
— Siddaramaiah (@siddaramaiah) September 2, 2022
ಕಳೆದ ಮೂರು ವರ್ಷಗಳಲ್ಲಿ ಕಡಲ್ಕೊರೆತ ತಡೆಗೆ ರಾಜ್ಯ ಬಿಜೆಪಿ ಸರ್ಕಾರ ಖರ್ಚು ಮಾಡಿರುವ ಹಣ ಅಂದಾಜು ರೂ.250 ಕೋಟಿ. ಇದರಲ್ಲಿ 40% ಜನಪ್ರತಿನಿಧಿಗಳ ಜೇಬಿಗೆ, 60% ಕಡಲ ನೀರಿಗೆ. ಕಡಲ್ಕೊರೆತ ಮುಂದುವರಿದಿದೆ. ಇದು ವಿಕಾಸವೋ? ವಿನಾಶನೋ? ಇದನ್ನೂ ಓದಿ: ಕಾಫಿ ದೈತ್ಯ ಸ್ಟಾರ್ಬಕ್ಸ್ಗೆ ಭಾರತ ಮೂಲದ ಲಕ್ಷ್ಮಣ್ CEO ಆಗಿ ನೇಮಕ
ಕರಾವಳಿ ಮೀನುಗಾರರ ಮೇಲೆ ಸಿಆರ್ಜೆಡ್, ಸಿಎಂ ಜೆಡ್ ನಿಯಮಾವಳಿಗಳ ಹೇರಿಕೆ. ಪ್ರವಾಸೋದ್ಯಮದ ಹೆಸರಲ್ಲಿ ರೆಸಾರ್ಟ್, ಥೀಮ್ ಪಾರ್ಕ್ಗಳಿಗೆ ಮುಕ್ತ ಪರವಾನಿಗೆ. ಇದು ವಿಕಾಸನೋ? ವಿನಾಶನೋ?
48 ಕಿ.ಮೀ. ಅಂತರದಲ್ಲಿ ಬ್ರಹ್ಮರಕೂಟ್ಲು, ಸುರತ್ಕಲ್, ತಲಪಾಡಿ ಮತ್ತು ಹೆಜಮಾಡಿಗಳಲ್ಲಿ 4 ನಿಯಮಬಾಹಿರ ಟೋಲ್ ಗೇಟ್ಗಳು. ವಾಹನ ಸಂಚಾರಿಗಳ ಜೇಬು ಖಾಲಿ, ಅಕ್ರಮದ ರೂವಾರಿಗಳಾದ ಬಿಜೆಪಿ ಸಂಸದರು ಮತ್ತು ಬಿಜೆಪಿ ಶಾಸಕರ ಜೇಬು ಭರ್ತಿ. ಇದು ವಿಕಾಸನೋ? ವಿನಾಶನೋ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.