– ಬಿಜೆಪಿಯ DNA ಯಲ್ಲಿಯೇ ಮೀಸಲಾತಿ ವಿರೋಧ ಇದೆ
ಬೆಂಗಳೂರು: ರಾಹುಲ್ ಗಾಂಧಿಯವರನ್ನು (Rahul Gandhi) ಬಚ್ಚಾ ಎಂದು ಹೇಳುವ ಬಿಎಸ್‍ವೈ ಅವರೇ (B.S Yediyurappa), ನಿಮ್ಮ ನರೇಂದ್ರ ಮೋದಿ (Narendra Modi) ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂದು ಸರಣಿ ಟ್ವೀಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಸವಾಲೆಸೆದಿದ್ದಾರೆ.
Advertisement
ಟ್ವೀಟ್‍ನಲ್ಲಿ ಏನಿದೆ:
ಜನಸಂಕಲ್ಪ ಯಾತ್ರೆಗೆ (Jana Sankalp Yatra) ಹೊರಟಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಹಾಲಿ ಮುಖ್ಯಮಂತ್ರಿ ಬೊಮ್ಮಾಯಿ (Basavaraj Bommai) ಅವರಿಗೆ ನನ್ನ ಎರಡೇ ಎರಡು ಸವಾಲು. ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ. ಎಡವದೆ ನಡೆದುಕೊಂಡು ಹೋಗಿ. ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ. ಇದನ್ನೂ ಓದಿ: ನಷ್ಟ ಸರಿದೂಗಿಸಲು ತೈಲ ಕಂಪನಿಗಳಿಗೆ 22 ಸಾವಿರ ಕೋಟಿ ರೂ. ಅನುದಾನ
Advertisement
Advertisement
ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ ಬಿಎಸ್‍ವೈ ಅವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ ಬಿಎಸ್‍ವೈ ಅವರು ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು. ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ ಬೊಮ್ಮಾಯಿ ಅವರೊಬ್ಬ ‘ಎರಡುವರೆ ಸಾವಿರ ಕೋಟಿ ರೂಪಾಯಿಯ ಪೇಸಿಎಂ ಹೈಕಮಾಂಡ್‍ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ’. ತಪ್ಪಿದರೆ ಮನೆಗೆ.
Advertisement
ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ ಬಿಎಸ್‍ವೈ ಅವರೇ, ನಿಮ್ಮ ನರೇಂದ್ರ ಮೋದಿ ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ. ಇದನ್ನೂ ಓದಿ: ನಿದ್ರೆ ಮಾಡುತ್ತಾ ಜನರನ್ನು ಸಾಲದ ಶೂಲಕ್ಕೇರಿಸಿದ್ದು ಸಿದ್ದರಾಮಯ್ಯ – BJP ತಿರುಗೇಟು
ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ @BSYBJP ಅವರೇ, ನಿಮ್ಮ @narendramodi ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ. 5/7#ಬಡಾಯಿಬೊಮ್ಮಾಯಿ
— Siddaramaiah (@siddaramaiah) October 12, 2022
ಪಾಪ, ಬಿಎಸ್‍ವೈ ಅವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು. ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ ಬಿಜೆಪಿಯ ಡಿ.ಎನ್.ಎ (DNA) ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ ಎಂದು ಟ್ವೀಟ್ ಮೂಲಕ ಟೀಕಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]