ನವದೆಹಲಿ: ಇಡಿ ಕಸ್ಟಡಿಯಲ್ಲಿದ್ದ ಮಾಜಿ ಸಚಿವ ಡಿಕೆ ಶಿವಕುಮಾರ್ ಹಾಗೂ ಪಕ್ಷದ ಹೈಕಮಾಂಡ್ ಭೇಟಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಇಂದು ದೆಹಲಿಯಿಂದ ವಾಪಸ್ ಹೊರಟ್ಟಿದ್ದಾರೆ.
ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರ ಭೇಟಿಗೆ ಶನಿವಾರ ಸಮಯ ನಿಗದಿಯಾಗಿದ್ದರು ಕೂಡ ಕೆಪಿಸಿಸಿ ಪೂರ್ವ ನಿಗದಿಯಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಅವರು ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾರೆ. ಸಿದ್ದರಾಮಯ್ಯ ಅವರು ಶನಿವಾರ ಪಕ್ಷದ ಜಿಲ್ಲಾವಾರು ಮುಖಂಡರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಪರಿಣಾಮ ಇನ್ನೊಮ್ಮೆ ಸೋನಿಯಾರನ್ನು ಭೇಟಿ ಮಾಡುವುದಾಗಿ ಸಿದ್ದರಾಮಯ್ಯ ಅವರು ಮನವಿ ಮಾಡಿ ವಾಪಸ್ ಆಗುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಎ.ಕೆ.ಆ್ಯಂಟನಿರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದ್ದರು.
Advertisement
ದೆಹಲಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಎ.ಕೆ.ಆ್ಯಂಟನಿ ಅವರನ್ನು ಭೇಟಿಯಾಗಿ, ಮಾತುಕತೆ ನಡೆಸಿದೆ. pic.twitter.com/nTVAuPciNP
— Siddaramaiah (@siddaramaiah) September 13, 2019
Advertisement
ಕಳೆದ ಆರು ವರ್ಷದಿಂದ ಹೈಕಮಾಂಡ್ ಮಟ್ಟದಲ್ಲಿ ರಾಜ ಮರ್ಯಾದೆ ಪಡೆಯುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಈಗ ಸೋನಿಯಾ ಗಾಂಧಿ ಭೇಟಿ ಮಾಡುವುದು ಸಹ ಕಷ್ಟವಾಗಿದೆ. ನಿನ್ನೆ ನಡೆದ ಪಕ್ಷದ ಸಭೆ ವೇಳೆ ನೆಪ ಮಾತ್ರಕ್ಕೆ ಸಿದ್ದರಾಮಯ್ಯ ಜೊತೆ ಮಾತನಾಡಿದ್ದ ಸೋನಿಯಾ ಗಾಂಧಿ, ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಚರ್ಚಿಸಲು ಅವಕಾಶವನ್ನೇ ಕೊಟ್ಟಿಲ್ಲ ಎನ್ನಲಾಗಿದೆ. ನಿನ್ನೆ ಸಂಜೆ ಅಹ್ಮದ್ ಪಟೇಲ್ ಭೇಟಿ ಮಾಡಿದ್ದ ಸಿದ್ದರಾಮಯ್ಯ, ಸೋನಿಯಾ ಭೇಟಿಗೆ ಅವಕಾಶ ಕೋರಿದ್ದರು. ಆದರೆ ಅವರಿಗೆ ಸೋನಿಯಾ ಗಾಂಧಿ ಭೇಟಿ ಮಾಡಲು ಅವಕಾಶ ಸಿಕ್ಕಿರಲಿಲ್ಲ. ಇದನ್ನು ಓದಿ: ಡಿಕೆಶಿ ಭೇಟಿಗೆ ತೆರಳಿದ್ದ ಸಿದ್ದರಾಮಯ್ಯಗೆ ಕೊನೆ ಕ್ಷಣದಲ್ಲಿ ಇಡಿಯಿಂದ ಅನುಮತಿ ನಿರಾಕರಣೆ
Advertisement
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಅಹಮದ್ ಪಟೇಲ್ ಅವರನ್ನು ದೆಹಲಿಯಲ್ಲಿ ಇಂದು ಭೇಟಿಯಾಗಿ ಮಾತುಕತೆ ನಡೆಸಿದೆ. pic.twitter.com/z5yER7Fjo9
— Siddaramaiah (@siddaramaiah) September 12, 2019