Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಾವು ಅಧಿಕಾರಕ್ಕೆ ಬರಬೇಕು ಎನ್ನುವ ಕಾರಣಕ್ಕೆ ಗೆಲ್ಲುವುದು ಬೇಡ ರಾಜ್ಯದ ಜನರನ್ನು ಉಳಿಸಲು ಗೆಲ್ಲೋಣ: ಸಿದ್ದರಾಮಯ್ಯ

Public TV
Last updated: June 2, 2022 3:11 pm
Public TV
Share
6 Min Read
SIDDRAMAIHA
SHARE

– ಸಂವಿಧಾನದ ಆಶಯಗಳಲ್ಲಿ ನಂಬಿಕೆ, ಬದ್ಧತೆ ಇಲ್ಲದವರು ದೇಶದ್ರೋಹಿಗಳು

ಬೆಂಗಳೂರು: 2023ರ ಏಪ್ರಿಲ್- ಮೇಗೆ ವಿಧಾನಸಭಾ ಚುನಾವಣೆ ಬರುತ್ತದೆ, ಈ ಚುನಾವಣೆಯನ್ನು ನಾವು ಗೆಲ್ಲಲೇಬೇಕು. ಇದು ನಮ್ಮ ಮುಂದಿರುವ ಸವಾಲು. ನಾವು ಅಧಿಕಾರಕ್ಕೆ ಬರಬೇಕು ಎನ್ನುವ ಕಾರಣಕ್ಕೆ ಚುನಾವಣೆ ಗೆಲ್ಲುವುದಲ್ಲ, ರಾಜ್ಯ ಮತ್ತು ಇಲ್ಲಿನ ಜನ ಉಳಿಯಬೇಕು ಎಂಬ ಕಾರಣಕ್ಕೆ ನಾವು ಗೆಲ್ಲಬೇಕಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

CONGRESS 1

ಕಾಂಗ್ರೆಸ್ ಪಕ್ಷದ ಚಿಂತನಾ ಶಿಬಿರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ವಾಮ ಮಾರ್ಗದಿಂದ ಅಧಿಕಾರಕ್ಕೆ ಬಂದು ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ. ನಮ್ಮ ಪಕ್ಷ 6 ಕಮಿಟಿಗಳನ್ನು ಮಾಡಿದೆ, ಇವುಗಳು ಸುದೀರ್ಘ ಚರ್ಚೆ ನಡೆಸಿ ತನ್ನ ನಿರ್ಣಯಗಳನ್ನು ಮಾಡಿ, ಪಕ್ಷದ ನಿಲುವನ್ನು ಸ್ಪಷ್ಟಪಡಿಸಬೇಕಾಗುತ್ತದೆ. 2024ಕ್ಕೆ ಲೋಕಸಭಾ ಚುನಾವಣೆ ಇದೆ, ಕರ್ನಾಟಕದಲ್ಲಿ 2023ರಲ್ಲಿ ರಾಜ್ಯ ವಿಧಾನಸಭೆಗೆ ಚುನಾವಣೆ ನಡಯಲಿದೆ. ಇವುಗಳ ಜೊತೆಗೆ ಜಿಲ್ಲಾ ಮತ್ತು ತಾಲೂಕು ಪಂಚಾಯತ್‍ಗಳಿಗೆ, ಮಹಾನಗರ ಪಾಲಿಕೆ ಚುನಾವಣೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ನವ ಸಂಕಲ್ಪ ಚಿಂತನಾ ಶಿಬಿರ ಆಯೋಜಿಸಲಾಗಿದೆ. ಪಕ್ಷ ಬೂತ್ ಮಟ್ಟದಿಂದ ಕೆಪಿಸಿಸಿ ಮಟ್ಟದ ವರೆಗೆ ಸಂಘಟಿತಗೊಂಡರೆ ಚುನಾವಣೆಗಳ ಗೆಲುವು ಕಷ್ಟದ ಕೆಲಸವಲ್ಲ. ಇಂತಹ ಹಲವು ಚುನಾವಣೆಗಳನ್ನು ಯಶಸ್ವಿಯಾಗಿ ಪಕ್ಷ ಈಗಾಗಲೇ ಎದುರಿಸಿದೆ ಎಂದರು. ಇದನ್ನೂ ಓದಿ: ಸುಪ್ರೀಂ ಆದೇಶ ಪಾಲಿಸದವರ ಮೇಲೆ ಗುಂಡು ಹೊಡಿತೀವಿ: ಮುತಾಲಿಕ್

ಪಕ್ಷವನ್ನು ಬಲಪಡಿಸಲು ಅನೇಕ ಕ್ರಮಗಳನ್ನು ಎಐಸಿಸಿ ಹಾಗೂ ಕೆಪಿಸಿಸಿ ತೆಗೆದುಕೊಳ್ಳಲು ಆರಂಭ ಮಾಡಿದೆ. ಅದರ ಭಾಗವಾಗಿ ಈ ಸಭೆಯೂ ನಡೆಯುತ್ತಿದೆ. ತಾಲೂಕು ಹಾಗೂ ಜಿಲ್ಲಾ ಪಂಚಾಯತ್‍ಗಳಿಗೆ ಚುನಾವಣೆ ನಡೆಸಬೇಕು ಎಂಬ ಆದೇಶವಾಗಿದೆ. ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಸರ್ಕಾರದ ಮೀಸಲಾತಿ ಬಗ್ಗೆ ಒಂದು ತೀರ್ಪನ್ನು ನೀಡಿದೆ. ತೀರ್ಪಿನ ಪ್ರಕಾರ ಹಿಂದುಳಿದ ಜಾತಿಗಳಿಗೆ ಮೀಸಲಾತಿ ನೀಡುವಾಗ ಒಂದು ನಂಬಿಕಾರ್ಹ ಮಾಹಿತಿ ಇರಬೇಕು ಮತ್ತು ಮೀಸಲಾತಿ ಪ್ರಮಾಣ 50% ಮೀರಬಾರದು ಎಂದು ಹೇಳಿದೆ. ಇದು 2021 ಏಪ್ರಿಲ್‍ನಲ್ಲಿ ನೀಡಿದ ತೀರ್ಪಾಗಿದೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಈ ತೀರ್ಪು ಬಂದ ಮೇಲೆ ಯಾವ ಕ್ರಮ ಕೈಗೊಂಡಿಲ್ಲ, ಇತ್ತೀಚೆಗೆ ಭಕ್ತವತ್ಸಲಂ ಅವರ ಸಮಿತಿ ರಚನೆ ಮಾಡಿದೆ, ಆ ಸಮಿತಿ ಇನ್ನು ವರದಿ ನೀಡಿಲ್ಲ. ಹತ್ತು ವಾರದಲ್ಲಿ ಚುನಾವಣೆ ನಡೆಸಬೇಕು ಎಂದು ಕೋರ್ಟ್ ಹೇಳಿದೆ. ನಮ್ಮ ಪಕ್ಷವು ಸರ್ವ ಪಕ್ಷ ಸಭೆಯಲ್ಲಿ ಬಹಳ ಸ್ಪಷ್ಟವಾಗಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಇಲ್ಲದೆ ಚುನಾವಣೆ ನಡೆಸಬಾರದು ಎಂದು ಹೇಳಿದೆ. ಹಿಂದುಳಿದ ಜಾತಿಗಳಿಗೆ, ಮಹಿಳೆಯರಿಗೆ ಮೀಸಲಾತಿ ನೀಡಿದ್ದು ರಾಜೀವ್ ಗಾಂಧಿ ಅವರು ಸಂವಿಧಾನಕ್ಕೆ 73 ಹಾಗೂ 74ನೇ ತಿದ್ದುಪಡಿ ಮಾಡಿದ ನಂತರ. ಮಹಿಳೆಯರಿಗೆ 50%, ಹಿಂದುಳಿದ ಜಾತಿಗಳಿಗೆ 33% ಮೀಸಲಾತಿ ನೀಡಿದ್ದು. ಇದರಲ್ಲಿ ಅಲ್ಪಸಂಖ್ಯಾತರು ಹಾಗೂ ಇನ್ನಿತರೆ ಜಾತಿಗಳು ಸೇರುತ್ತವೆ. ಕಾಂಗ್ರೆಸ್ ಪಕ್ಷ ರಾಜಕೀಯ ಮೀಸಲಾತಿ ನೀಡಿದ್ದು ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ನುಡಿದರು.

CONGRESS 1 1

ಈಗ ತರಾತುರಿಯಲ್ಲಿ ಸರ್ಕಾರ ಚುನಾವಣೆ ನಡೆಸಬಹುದು. ಯಾಕೆಂದರೆ ಮಧ್ಯಪ್ರದೇಶದಲ್ಲಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಆದ್ದರಿಂದ ನಮ್ಮ ಕಾರ್ಯಕರ್ತರು ತಯಾರಾಗಬೇಕು. ನನಗಿರುವ ಮಾಹಿತಿ ಪ್ರಕಾರ ರಾಜ್ಯ ಸರ್ಕಾರಕ್ಕೆ ಈ ಚುನಾವಣೆಯನ್ನು ನಡೆಸಲಾಗಲೀ ಅಥವಾ ಮಹಿಳೆಯರಿಗೆ, ಹಿಂದುಳಿದವರಿಗೆ ಮೀಸಲಾತಿ ನೀಡಲು ಒಲವಿಲ್ಲ. ಕಾಂಗ್ರೆಸ್ ಗೆ ಮಾತ್ರ ಈ ಬದ್ಧತೆ ಇರುವುದು. ಬಿಜೆಪಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಇಂದು ರಾಜ್ಯ ಮತ್ತು ದೇಶ ಸಾಲದ ಸುಳಿಯಲ್ಲಿ ಸಿಕ್ಕಿಕೊಂಡಿದೆ. 2014-15ರಲ್ಲಿ ಈ ದೇಶದ ಮೇಲಿದ್ದ ಒಟ್ಟು ಸಾಲ 53 ಲಕ್ಷ ಕೋಟಿ ರೂಪಾಯಿ. ಇಂದು ಈ ಸಾಲ 155 ಲಕ್ಷ ಕೋಟಿ ರೂಪಾಯಿ ಆಗಿದೆ. ನಿನ್ನೆಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 8 ವರ್ಷಗಳು ಆಯಿತು, ಅವರ ತಮ್ಮ 8 ವರ್ಷಗಳ ಆಡಳಿತದಲ್ಲಿ 100 ಲಕ್ಷ ಕೋಟಿಗೂ ಅಧಿಕ ಸಾಲವನ್ನು ಮಾಡಿದ್ದಾರೆ. ದೇಶದ ಪ್ರತಿಯೊಬ್ಬನ ಮೇಲೆ 1.70 ಲಕ್ಷ ರೂಪಾಯಿ ಇದೆ. ಮಾರ್ಚ್ 2018ರಲ್ಲಿ ಕರ್ನಾಟಕದ ಸಾಲ 2.42 ಲಕ್ಷ ಕೋಟಿ ರೂಪಾಯಿ ಇತ್ತು. 2023 ಮಾರ್ಚ್‍ಗೆ 5.40 ಲಕ್ಷ ಕೋಟಿ ಸಾಲ ಆಗುತ್ತದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ

ಸದನದಲ್ಲಿ ಉತ್ತರಿಸುವಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಆರ್ಥಿಕತೆ ಉತ್ತಮ ಆಗುತ್ತಿದೆ ಎಂದು ಹೇಳಿದ್ದರು. ನಾವು ಈ ಬಾರಿ 71 ಸಾವಿರ ಕೋಟಿ ರೂಪಾಯಿ ಸಾಲ ಮಾಡಬೇಕಾಗಿತ್ತು, ಅದನ್ನು 63 ಸಾವಿರ ಕೋಟಿ ರೂಪಾಯಿಗೆ ಇಳಿಸಿದ್ದೀವಿ ಎಂದು ಅವರು ಹೇಳಿದರು. ಇದರರ್ಥ ನಾವು ಸಾಲ ಕಡಿಮೆ ಮಾಡುತ್ತಿದ್ದೇವೆ ಎಂದರು. ಸರ್ಕಾರ ನನಗೆ ನೀಡಿರುವ ಪ್ರಕಾರ ಈ ಸಾಲಿನಲ್ಲಿ 80 ಸಾವಿರ ಕೋಟಿ ರೂಪಾಯಿ ಸಾಲ ಮಾಡಿದ್ದಾರೆ. ಮುಖ್ಯಮಂತ್ರಿಗಳು ಸದನಕ್ಕೆ ಸುಳ್ಳು ಹೇಳಿದ್ದಾರೆ. ರಾಜ್ಯದ ಜಿಡಿಪಿ ಬೆಳವಣಿಗೆ ಕಡಿಮೆಯಾಗಿದೆ, ಬೆಲೆಯೇರಿಕೆಯಿಂದ ಜನರ ಕೈಯಲ್ಲಿ ಹಣವಿಲ್ಲ, 30% ಇಂದ 22%ಗೆ ಕಾಪೋರೇಟ್ ತೆರಿಗೆ ಇಳಿಸಿದ್ದಾರೆ, ಪರೋಕ್ಷ ತೆರಿಗೆ ಹೆಚ್ಚಿಸಿ ಕೆಳ ಮತ್ತು ಮಧ್ಯಮ ವರ್ಗದ ಜನರಿಂದ ಹಣ ಕಿತ್ತುಕೊಳ್ಳಲಾಗುತ್ತಿದೆ. ಯಾವಾಗ ಸಾಮಾನ್ಯ ಮತ್ತು ಕೆಳ ವರ್ಗದ ಜನರ ಕೈಯಲ್ಲಿ ದುಡ್ಡಿರಲ್ಲ ಆಗ ಜಿಡಿಪಿ ಬೆಳವಣಿಗೆ ಆಗಲು ಸಾಧ್ಯವಿಲ್ಲ.

bjp

ನಾವು ಅಧಿಕಾರಕ್ಕೆ ಬರುವಾಗ ರಾಜ್ಯದ ಜಿಡಿಪಿ 6 ಲಕ್ಷ ಕೋಟಿ ರೂಪಾಯಿಗೆ ಇತ್ತು, ನಾವು ಅಧಿಕಾರದಿಂದ ಇಳಿಯುವಾಗ 14 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿತ್ತು. 2020-21ರಲ್ಲಿ -5% ಬೆಳವಣಿಗೆ ಕಂಡಿದೆ. ಇದು ರಾಜ್ಯವನ್ನು ಸಾಲದ ಸುಳಿಗೆ ಸಿಕ್ಕಿಸಿ, ಆರ್ಥಿಕವಾಗಿ ದಿವಾಳಿ ಮಾಡಲಾಗುತ್ತಿದೆ ಎಂಬುದನ್ನು ತೋರಿಸುತ್ತದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಗೊಬ್ಬರ, ಸಿಮೆಂಟ್ ಹೀಗೆ ಎಲ್ಲದರ ಬೆಲೆ ಗಗನಕ್ಕೇರಿದೆ. ಇದಕ್ಕೆ ಕಾರಣ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ತಪ್ಪು ಆರ್ಥಿಕ ನೀತಿ ಮತ್ತು ಅದನ್ನು ರಾಜ್ಯ ಸರ್ಕಾರ ಅನುಸರಿಸುತ್ತಿರುವುದು ಎಂದು ಕಿಡಿಕಾರಿದರು. ಇದನ್ನೂ ಓದಿ: ನಾನು ಒಬ್ಬ ಸಣ್ಣ ಸೈನಿಕ: ಕಮಲ ಹಿಡಿದ ಹಾರ್ದಿಕ್ ಪಟೇಲ್

ಜಿಎಸ್‍ಟಿ, ನೋಟು ರದ್ದತಿ, ಕೊರೊನಾ ಬಂದ ನಂತರ ದೇಶದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಹೋಗಿದೆ. ಇದರಿಂದ ರಾಜ್ಯದ ತೆರಿಗೆ ಪಾಲು ಕಡಿಮೆಯಾಗುತ್ತಿದೆ. 15ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ ರಾಜ್ಯಕ್ಕೆ 5,495 ಕೋಟಿ ರೂಪಾಯಿ ವಿಶೇಷ ಅನುದಾನ ಶಿಫಾರಸ್ಸು ಮಾಡಿತ್ತು, ಆದರೆ ಅಂತಿಮ ವರದಿಯಲ್ಲಿ ಅದನ್ನು ಕೈಬಿಡಲಾಯಿತು, ಇದರ ಹಿಂದೆ ರಾಜ್ಯದಿಂದ ರಾಜ್ಯಸಭೆಗೆ ಸ್ಪರ್ಧಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರ ಕೈವಾಡವಿದೆ. ಇದರಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯವಾಗಿದೆ. ಜಿಎಸ್‍ಟಿ ಬರುವ ಮುಂಚೆ ರಾಜ್ಯದ ತೆರಿಗೆ ಬೆಳವಣಿಗೆ 14-15% ಇತ್ತು, ಜಿಎಸ್‍ಟಿ ಬಂದ ಮೇಲೆ 6%ಗೆ ಬಂದು ನಿಂತಿದೆ. ಜುಲೈ 1 ರಿಂದ ಜಿಎಸ್‍ಟಿ ಪರಿಹಾರ ನಿಲ್ಲಿಸುತ್ತಾರೆ, ಇದರಿಂದ ಪ್ರತಿ ವರ್ಷ ರಾಜ್ಯಕ್ಕೆ 19 ಸಾವಿರ ಕೋಟಿ ರೂಪಾಯಿ ಬರುವುದು ನಿಂತುಹೋಗುತ್ತದೆ. ಇವರಿಂದ ರಾಜ್ಯ ಉಳಿಯುತ್ತಾ ಎಂದು ಪ್ರಶ್ನಿಸಿದರು.

ಕರ್ನಾಟಕ ಒಂದರಿಂದಲೇ ಆದಾಯ ತೆರಿಗೆ, ಕಾಪೋರೇಟ್ ತೆರಿಗೆ, ಪೆಟ್ರೋಲ್-ಡೀಸೆಲ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ, ಅಬಕಾರಿ ಸುಂಕ, ಜಿಎಸ್‍ಟಿ ಹೀಗೆ ವಿವಿಧ ತೆರಿಗೆ ರೂಪದಲ್ಲಿ 3 ಲಕ್ಷ ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗಿದೆ, ಆದರೆ ನಮಗೆ ವಾಪಾಸ್ ಬರುವುದು 44 ಸಾವಿರ ಕೋಟಿ ರೂಪಾಯಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತದಿಂದ ಯುವಕರು, ಮಕ್ಕಳು, ರೈತರು ಸಮಸ್ಯೆಯಲ್ಲಿದ್ದಾರೆ. ಇವುಗಳನ್ನು ಮುಚ್ಚಿಡಲು ಧಾರ್ಮಿಕ ವಿಚಾರಗಳನ್ನು ಮುನ್ನೆಲೆಗೆ ತಂದಿದ್ದಾರೆ. ಇಂದು ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು ಆತಂಕದಲ್ಲಿ ಬದುಕುವಂತಾಗಿದೆ. ಚರ್ಚ್, ಮಸೀದಿಗಳ ಮೇಲೆ ದಾಳಿ, ಹಿಂದೂಗಳನ್ನು ಅಲ್ಪಸಂಖ್ಯಾತರ ವಿರುದ್ಧ ಎತ್ತಿಕಟ್ಟುವ ಕೆಲಸ ದೇಶದ ಉದ್ದಗಲಕ್ಕೂ ನಡೀತಿದೆ. ಹೀಗಾಗಿ ಭಾರತೀಯ ಜನತಾ ಪಕ್ಷವನ್ನು ಅಧಿಕಾರದಿಂದ ತೆಗೆಯಬೇಕಾಗಿದೆ. ಸಂವಿಧಾನದ ಆಶಯಗಳಲ್ಲಿ ನಂಬಿಕೆ, ಬದ್ಧತೆ ಇಲ್ಲದವರು ದೇಶದ್ರೋಹಿಗಳು ಎಂದು ವಾಗ್ದಾಳಿ ನಡೆಸಿದರು.

ಅನಗತ್ಯವಾಗಿ ಪಠ್ಯ ಪರಿಷ್ಕರಣೆಗೊಳಪಡಿಸಿ ಪಠ್ಯವನ್ನು ಕೇಸರೀಕರಣ ಮಾಡಲಾಗುತ್ತಿದೆ. ಯಾರೋ ರೋಹಿತ್ ಚಕ್ರತೀರ್ಥ ಎಂಬ ಆರ್.ಎಸ್.ಎಸ್ ಮೂಲದವನನ್ನು ಸಮಿತಿಗೆ ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ಪಠ್ಯದಲ್ಲಿ ಭಗತ್ ಸಿಂಗ್, ನಾರಾಯಣ ಗುರು, ಕುವೆಂಪು ಇಂಥವರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ 10 ಮಂದಿ ಸಾಹಿತಿಗಳು ಪಠ್ಯ ಕ್ರಮದಿಂದ ತಮ್ಮ ಸಾಹಿತ್ಯಗಳನ್ನು ತೆಗೆದುಹಾಕಿ ಎಂದು ಹೇಳಿದ್ದಾರೆ. ಜನರ ಈ ಸಮಸ್ಯೆಗಳನ್ನು ಗಮನದಲ್ಲಿ ಇಟ್ಟುಕೊಂಡು ಹೋರಾಟಗಳನ್ನು ರೂಪಿಸಬೇಕಾಗುತ್ತದೆ. ಇದಕ್ಕೆ ಪಕ್ಷ ಮಾಡಿರುವ ಆರು ಕಮಿಟಿಗಳ ಸದಸ್ಯರು ತಮ್ಮ ಸಲಹೆ ನೀಡಬೇಕು. ನಾವೆಲ್ಲರೂ ಒಂದು ಗೂಡಿ ಈ ದಿಸೆಯಲ್ಲಿ ಹೋರಾಟ ನಡೆಸೋಣ. ತಾವೆಲ್ಲರೂ ಈ ಶಿಬಿರದಲ್ಲಿ ಸಕ್ರಿಯವಾಗಿ ಭಾಗವಹಿಸಿ ಎಂದು ಮನವಿ ಮಾಡುತ್ತಾ, ಶಿಬಿರ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ ಎಂದರು.

TAGGED:Basavaraj Bommaibjpcongresssiddaramaiahಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Man seriously injured after falling into fire during Muharram celebrations in Raichur
Crime

ಮೊಹರಂ ಆಚರಣೆ ವೇಳೆ ದುರಂತ – ಬೆಂಕಿಗೆ ಬಿದ್ದು ವ್ಯಕ್ತಿಗೆ ಗಂಭೀರ ಗಾಯ

Public TV
By Public TV
23 minutes ago
CRIME
Crime

ಪುತ್ತೂರು | ವಿಹರಿಸುತ್ತಿದ್ದ ಜೋಡಿಗೆ ಕಿರುಕುಳ – ನಿಂದಿಸಿ ವಿಡಿಯೋ ಹರಿಬಿಟ್ಟ ಪುಂಡರು

Public TV
By Public TV
56 minutes ago
kiccha sudeep 47th film
Cinema

ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಕಿಚ್ಚ – ಸುದೀಪ್‌ 47ನೇ ಸಿನಿಮಾ ಅನೌನ್ಸ್

Public TV
By Public TV
1 hour ago
Bhavana Ramanna Sandalwood Rashmika Mandanna
Cinema

ರಶ್ಮಿಕಾ ಕನ್ನಡದವಳಲ್ಲ ಅಂದ್ರು ಅವಳನ್ನ ನಾವ್ ಬಿಡೋಲ್ಲ: ಭಾವನಾ ರಾಮಣ್ಣ

Public TV
By Public TV
1 hour ago
dalai lama succession
Latest

ದಲೈಲಾಮಾ ಉತ್ತರಾಧಿಕಾರಿ ಸಂಘರ್ಷ- ದಲೈಲಾಮಾ ಜೊತೆ ಭಾರತದ ಸಂಬಂಧ ಹೇಗಿತ್ತು; ಚೀನಾ ಎಚ್ಚರಿಕೆ ಏನು?

Public TV
By Public TV
2 hours ago
Akash Deep
Cricket

536 ರನ್‌ಗಳ ಭರ್ಜರಿ ಮುನ್ನಡೆ – ಭಾರತದ ಬಿಗಿ ಹಿಡಿತದಲ್ಲಿ ಆಂಗ್ಲರ ಒದ್ದಾಟ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?