– ಬೆಂಬಲಿಗರ ಘೋಷಣೆಗೆ ಫುಲ್ ಖುಷ್ ಆದ ಸಿದ್ದರಾಮಯ್ಯ
– ಅಲ್ಪಸಂಖ್ಯಾತರ ಮತಗಳನ್ನು ವಿಂಗಡಿಸುವುದೇ ಜೆಡಿಎಸ್ ಉದ್ದೇಶ
ಮೈಸೂರು: ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಆಪ್ತರೇ ಐಟಿ ದಾಳಿಗೆ ಟಾರ್ಗೆಟ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಐಟಿ ದಾಳಿ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.
ಮುಂದಿನ ಮುಖ್ಯಮಂತ್ರಿ ಕೂಗು ಮೈಸೂರಿನಲ್ಲಿ ಮತ್ತೆ ಮೊಳಗಿದೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸಿದ್ದರಾಮಯ್ಯ ಬೆಂಬಲಿಗರು, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜೈ ಎಂದು ಘೋಷಣೆ ಕೂಗಿದ್ದು, ಇದಕ್ಕೆ ಸಿದ್ದರಾಮಯ್ಯ ಅವರು ಫುಲ್ ಖುಷಿಯಿಂದ ಕೈ ಎತ್ತಿ ಬೀಸಿದರು. ಇದನ್ನೂ ಓದಿ: ಬಾಯಿಗೆ ಬಂದಂತೆ ಮಾತನಾಡಲು ಜನರು ನಮ್ಮನ್ನು ಆಯ್ಕೆ ಮಾಡಿಲ್ಲ: ಹಾಲಪ್ಪ
Advertisement
Advertisement
ಈ ವೇಳೆ ಸಿದ್ದರಾಮಯ್ಯ ಅವರು ಉಪಚುನಾವಣೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಎರಡೂ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಉಪಚುನಾವಣೆ ಫಲಿತಾಂಶ ಭವಿಷ್ಯದ ಚುನಾವಣೆ ದಿಕ್ಸೂಚಿ ಅಂತ ಹೇಳುವುದಿಲ್ಲ. ಹಾಗೇ ಹೇಳುವುದಕ್ಕೂ ಸಾಧ್ಯವಿಲ್ಲ. ಆದರೆ ಈ ಫಲಿತಾಂಶದಿಂದ ಸರ್ಕಾರದ ಮೇಲೆ ಜನರ ಅಭಿಪ್ರಾಯ ಏನು ಎಂಬುದು ಗೊತ್ತಾಗುತ್ತೆ. ಜನ ಕೇಂದ್ರ ಹಾಗೂ ರಾಜ್ಯ ಎರಡೂ ಸರ್ಕಾರಗಳಿಂದ ಬೇಸತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಅನ್ನು ಎರಡೂ ಕ್ಷೇತ್ರಗಳಲ್ಲಿ ಗೆಲ್ಲಿಸುತ್ತಾರೆ. ಜೆಡಿಎಸ್ ಅವರು ಒಳ್ಳೆಯ ಉದ್ದೇಶದಿಂದಂತೂ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಟ್ಟಿಲ್ಲ. ಅಲ್ಪಸಂಖ್ಯಾತರ ಮತಗಳನ್ನು ವಿಂಗಡಿಸುವುದೇ ಅವರ ಉದ್ದೇಶ. ಆದರೆ ಜನ ಬುದ್ಧಿವಂತರಿದ್ದಾರೆ. ಇಂತಹ ತಂತ್ರಗಳು ಜನರಿಗೆ ಅರ್ಥವಾಗುತ್ತವೆ ಎಂದು ಜೆಡಿಎಸ್ ನನ್ನು ಟೀಕಿಸಿದರು.
Advertisement
Advertisement
ಐಟಿ ದಾಳಿಯಲ್ಲಿ ರಾಜಕೀಯ ಇದೆ ಎಂಬುದು ನನ್ನ ಅನುಮಾನ. ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಆಪ್ತರನ್ನೇ ಆಯ್ಕೆ ಮಾಡಿಕೊಂಡು ದಾಳಿ ಮಾಡಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ನನಗಂತು ಇದರಲ್ಲಿ ರಾಜಕೀಯ ವಾಸನೆ ಬರುತ್ತಿದೆ ಎಂದು ಅನುಮಾನಿಸಿದರು. ಇದನ್ನೂ ಓದಿ: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ವಿರುದ್ಧ ಪ್ರಕರಣ ದಾಖಲು
ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದು ಊಹಾಪೋಹ. ಸೋನಿಯಾಗಾಂಧಿ ಅವರು ನನ್ನನ್ನು ಕರೆದಿಲ್ಲ. ಆ ಬಗ್ಗೆ ಚರ್ಚೆಯೂ ಆಗಿಲ್ಲ. ಸುಮ್ಮನೆ ಊಹಾಪೋಹದ ಚರ್ಚೆಗಳು ಬೇಡ. ನಾನು ಎಂದೂ ಆ ಯೋಚನೆ ಮಾಡಿಯೂ ಇಲ್ಲ. ಆ ಬಗ್ಗೆ ಚರ್ಚೆ ಬೇಡ, ನಾನು ರಾಜ್ಯ ರಾಜಕಾರಣದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.