ಕೊಪ್ಪಳ: ರಾಜ್ಯದಲ್ಲಿ ಅತಿಹೆಚ್ಚು ಭ್ರಷ್ಟಾಚಾರ ಮಾಡಿದ ಮುಖ್ಯಮಂತ್ರಿಗಳು ಅಂದರೆ ಸಿದ್ದರಾಮಯ್ಯನವರು, ಭ್ರಷ್ಟಾಚಾರದಿಂದ ಸಾಕಷ್ಟು ಬೇನಾಮಿ ಆಸ್ತಿಯನ್ನು ಮಾಡಿಕೊಂಡಿದ್ದಾರೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ (G. Janardhana Reddy) ಲೇವಡಿ ಮಾಡಿದ್ದಾರೆ.
ಕೊಪ್ಪಳದ ಗಂಗಾವತಿ ನಗರದ ನಗರಸಭೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ (CM Siddaramaiah) ಹಿಂದುಳಿದ ನಾಯಕ ಎಂದು ಹೇಳಿಕೊಂಡು ಅಧಿಕಾರ ಪಡೆದು ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ರಾಜ್ಯದಲ್ಲಿನ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಸಿದ್ದರಾಮಯ್ಯನವರು ಅತಿಹೆಚ್ಚು ಭ್ರಷ್ಟಾಚಾರ ಮಾಡಿದ ಸಿಎಂ ಆಗಿದ್ದಾರೆ. ರಾಜ್ಯದಲ್ಲಿ ಮುಡಾ ಹಗರಣದಲ್ಲಿ ಕೇವಲ 140 ಸೈಟ್‌ಗಳು ಮಾತ್ರವಲ್ಲದೆ ಸಾವಿರಕ್ಕೂ ಅಧಿಕ ಸೈಟ್‌ಗಳನ್ನು ಬೇನಾಮಿ ಆಸ್ತಿಯಾಗಿ ಮಾಡಿಕೊಂಡಿದ್ದಾರೆ. ಮುಡಾದಲ್ಲಿ ಸೈಟ್ ಖರೀದಿ ಮಾಡಿರುವವರನ್ನು ವಿಚಾರಣೆ ಮಾಡಿದರೆ ಸತ್ಯಾಂಶ ಹೊರಬರಲಿದೆ. ಜನರಲ್ಲಿ ಹಿಂದುಳಿದ ನಾಯಕ ಎಂದು ನಂಬಿಕೆಯನ್ನು ಹುಟ್ಟಿಸಿಕೊಂಡು ಮಾಡಿರುವ ಭ್ರಷ್ಟಾಚಾರ ಮುಡಾ ಹಗರಣದಿಂದ ಹೊರ ಬಂದಿದೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಬೀದರ್‌ನಲ್ಲಿ ಎಟಿಎಂ ಹಣ ದರೋಡೆ ಕೇಸ್ – ಖದೀಮರ ಸುಳಿವು ಪತ್ತೆ
Advertisement
Advertisement
ಮುಡಾ ಹಗರಣ ರಾಜ್ಯದಲ್ಲಿಯೇ ಇದೊಂದು ದೊಡ್ಡ ಸ್ಕ್ಯಾಮ್ ಆಗಿದೆ. ಇದಷ್ಟೇ ಅಲ್ಲದೆ ಮೈಸೂರಿನ ಸಾಕಷ್ಟು ಲೇಔಟ್‌ಗಳ ತನಿಖೆಯನ್ನು ನಡೆಸಬೇಕು. ಇದು ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೆ ಇದ್ದರೂ ಕೂಡ ಕ್ರಮಕ್ಕೆ ಮುಂದಾಗದೆ ಸುಮ್ಮನೆ ಇದ್ದಾರೆ. ಹೈಕಮಾಂಡ್ ಯಾಕೆ ಕ್ರಮಕ್ಕೆ ಮುಂದಾಗದೆ ಸುಮ್ಮನಿದೆ ಎನ್ನುವುದು ಗೊತ್ತಿಲ್ಲ. ಆದರೆ ರಾಜ್ಯದ ಜನರಿಗೆ ಸಿದ್ದರಾಮಯ್ಯ ಮಾಡಿರುವ ಮುಡಾ ಹಗರಣದಲ್ಲಿನ ಸತ್ಯಾಂಶ ದಿನ ದಿನೇ ಗೊತ್ತಾಗುತ್ತಿದೆ. ಇಡಿಯವರು ತನಿಖೆಯನ್ನು ನಡೆಸುತ್ತಿದ್ದು, ತನಿಖೆಯಿಂದ ಸತ್ಯಾಂಶ ಹೊರ ಬೀಳಲಿದೆ. ಅದಕ್ಕೂ ಮೊದಲೇ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟರೆ ಚೆನ್ನಾಗಿರುತ್ತದೆ. ತನಿಖೆಯಲ್ಲಿ ಹಗರಣ ಸಾಬೀತಾದರೆ ರಾಜೀನಾಮೆ ನೀಡಿದರೆ ದೊಡ್ಡ ಅವಮಾನವಾಗುತ್ತದೆ ಎಂದರು.
Advertisement
ದೇಶದಲ್ಲಿ ಕಾಂಗ್ರೆಸ್‌ಗೆ ನೆಲೆ ಇಲ್ಲ. ಕಳೆದ 10 ವರ್ಷಗಳ ಹಿಂದೆಯೇ ದೇಶದಲ್ಲಿ ಕಾಂಗ್ರೆಸ್ ಪಕ್ಷದ ಸಂಪೂರ್ಣ ವೀಕ್ ಆಗಿದೆ. ದೇಶದ ಎರಡು ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುವುದು ಬಿಟ್ಟರೆ ಸಾಕಷ್ಟು ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವವನ್ನು ಕಳೆದುಕೊಂಡಿದೆ. ಸಿಎಂ ಅಧಿಕಾರಕ್ಕಾಗಿ ಡಿಕೆಶಿ ಸಾಕಷ್ಟು ಫೈಟ್ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಅವರಿಂದ ಸಿಎಂ ಅಧಿಕಾರ ಉಳಿಸಿಕೊಳ್ಳಲು ಸಾಧ್ಯವಿಲ್ಲ. ಡಿಕೆಶಿ ಸಿಎಂ ಆಗುವುದು ಖಚಿತವಾಗಿದೆ. ಸಿಎಂ ಅಧಿಕಾರಕ್ಕೆ ಮುಸುಕಿನ ಗುದ್ದಾಟ ನಡೆಸಿದ್ದರಿಂದ ರಾಜ್ಯದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ನಿರಂತರ ಜನ ಸಮಾವೇಶಗಳನ್ನು ಹಮ್ಮಿಕೊಳ್ಳುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ. ಅಧಿವೃದ್ಧಿಯು ಮರೀಚಿಕೆಯಾಗಿದೆ ಎಂದು ಹೇಳಿದರು.ಇದನ್ನೂ ಓದಿ: ಮಂಗಳೂರು ಬ್ಯಾಂಕ್ ಲೂಟಿ – ಕೇರಳದಿಂದ ಬೋಟ್‌ನಲ್ಲಿ ತಮಿಳುನಾಡಿಗೆ ತೆರಳಿದ್ರಾ ಖದೀಮರು?