ಬೆಂಗಳೂರು: ಕೆಟ್ಟವರ ಸಂಹಾರ ಆಗಬೇಕು ನಿಜ. ಆದರೆ ಸರ್ಕಾರ ಚಾಮುಂಡೇಶ್ವರಿ ಚಿತ್ರ ಬಳಕೆ ಮಾಡಿ ಜಾಹೀರಾತು ಕೊಟ್ಟಿದ್ದು ತಪ್ಪು. ದುಷ್ಟ ಶಕ್ತಿಗಳು ರಾಜ್ಯಕ್ಕೆ ಯಾರು ಅಂದರೆ ಅದು ಸಿದ್ದರಾಮಯ್ಯ (Siddaramaiah). ಅವರಿಂದಲೇ ದುಷ್ಟ ಶಕ್ತಿಗಳ ಸಂಹಾರ ಶುರು ಆಗಲಿ ಎಂದು ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ (Hubballi) ಪೊಲೀಸ್ ಠಾಣೆ ಮೇಲೆ ದಾಳಿ, ಗಲಭೆ ಮಾಡಿದವರು ಹಾಗೂ ಕ್ರಿಮಿನಲ್‌ಗಳ ಮೇಲೆ ಸರ್ಕಾರ ಕೇಸ್ ದಾಖಲು ಮಾಡಿತ್ತು. ಈಗ ಒಂದು ಸಮುದಾಯವನ್ನು ಓಲೈಕೆ ಮಾಡಲು ಎಲ್ಲಾ ಕೇಸ್ ವಾಪಸ್ ಪಡೆದಿದ್ದಾರೆ. ಇದು ಸರ್ಕಾರ ಮಾಡಿರುವ ಅಕ್ಷಮ್ಯ ಅಪರಾಧ. ಸಂಘಟಿತ ಅಪರಾಧ ಮಾಡಿರೋ ಕೇಸ್ ವಾಪಸ್ ಪಡೆದಿರೋದು ಕೂಡ ಸರ್ಕಾರದ ಸಂಘಟಿತ ಅಪರಾಧವೇ ಆಗಿದೆ. ಹೀಗಾಗಿ ಇದನ್ನು ನಾವು ಸುಮ್ಮನೆ ಬಿಡುವುದಿಲ್ಲ. ಇದರ ಬಗ್ಗೆ ಜನರಿಗೆ ತಿಳಿಸಲು ಹೋರಾಟ ಮಾಡುತ್ತೇವೆ. ನಾವು ಕೋರ್ಟ್ನಲ್ಲಿ ಆಕ್ಷೇಪಣೆ ಅರ್ಜಿ ಹಾಕುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಮೈಸೂರು ದಸರಾ ಜಂಬೂಸವಾರಿಗೆ ವಿಜೃಂಭಣೆಯ ಚಾಲನೆ
Advertisement
Advertisement
ಉಡುಪಿ, ಮಂಗಳೂರು, ಶಿವಮೊಗ್ಗದಲ್ಲಿನ ಹಿಂದೂ ಕಾರ್ಯಕರ್ತರ ಮೇಲೆ ಯಾಕೇ ಕೇಸ್ ವಾಪಸ್ ತಗೊಂಡಿಲ್ಲ? ಅವರು ಕ್ರಿಮಿನಲ್‌ಗಳು, ಇವರು ಕ್ರಿಮಿನಲ್‌ಗಳು ಅಲ್ವಾ? ಜನರನ್ನು ಕೆರಳಿಸುವ ಕೆಲಸ ಮಾಡಿ ಮುಡಾ, ವಾಲ್ಮೀಕಿ ಹಗರಣ ತಪ್ಪಿಸಿದ್ದೀರಿ. ಈ ಸರ್ಕಾರದ ವಿರುದ್ಧ ಕ್ರಮ ಜರುಗಿಸಬೇಕು ಎಂದು ನಾನು ಇವತ್ತು ಕೇಂದ್ರದ ಕಾನೂನು ಸಚಿವರಿಗೂ ಪತ್ರ ಬರೆಯುತ್ತಿದ್ದೇನೆ. ಕೇಂದ್ರ ಸರ್ಕಾರ ತಕ್ಷಣ ಗಂಭೀರವಾಗಿ ಪರಿಗಣಿಸಿ, ತಕ್ಷಣ ಕ್ರಮ ತಗೆದುಕೊಳ್ಳಬೇಕು. ಪ್ರಧಾನ ಮಂತ್ರಿಗಳು, ಕೇಂದ್ರ ಗೃಹ ಸಚಿವರು ಹಾಗೂ ರಾಷ್ಟ್ರಪತಿ ಗಳಿಗೂ ಗಮನ ಸೆಳೆಯಲು ಪತ್ರ ಬರೆಯುತ್ತೇನೆ ಎಂದರು. ಇದನ್ನೂ ಓದಿ: ಇವತ್ತಿಲ್ಲಾ ನಾಳೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು: ಜಗದೀಶ್ ಶೆಟ್ಟರ್
Advertisement