ನವದೆಹಲಿ: ರಾಜ್ಯದಲ್ಲಿನ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚಿಸಲು ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಸೋಮವಾರ (ನ.17) ಪ್ರಧಾನಿ ಮೋದಿಯವರನ್ನು (PM Modi) ಭೇಟಿ ಮಾಡಲಿದ್ದಾರೆ.
ಸೋಮವಾರ ಸಂಜೆ 5ಗಂಟೆಗೆ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಮೋದಿಯವರನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಲಿದ್ದಾರೆ. ಈ ವೇಳೆ ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಯಲ್ಲಿ ಮಧ್ಯ ಪ್ರವೇಶ ಮಾಡುವಂತೆ ಮತ್ತು ಬೆಂಬಲ ಬೆಲೆ ನೀಡುವಂತೆ ಮನವಿ ಮಾಡಲಿದ್ದಾರೆ. ಇದಲ್ಲದೇ ಬೆಳೆ ಹಾನಿಗೆ ಪರಿಹಾರವಾಗಿ 1,450 ಕೋಟಿ ರೂ. ನೀಡುವಂತೆ ಕೇಳಲಿದ್ದಾರೆ. ಇದೇ ವೇಳೆ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ನೀಡುವಂತೆ ಮನವಿ ಮಾಡಲಿದ್ದಾರೆ. ಇದನ್ನೂ ಓದಿ: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ-ಸಿದ್ದರಾಮಯ್ಯ ದೆಹಲಿ ಭೇಟಿ; ಸಂಪುಟ ಪುನಾರಚನೆ ಪ್ರಸ್ತಾಪ?
ಇನ್ನೂ ಶನಿವಾರ (ನ.15) ರಂದು ಸಿಎಂ ಸಿದ್ದರಾಮಯ್ಯ ಅವರು ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ರಾಹುಲ್ ಗಾಂಧಿ (Rahul Gandhi) ಅವರನ್ನು ಭೇಟಿಯಾಗಿದ್ದು, ಕೂತುಹಲ ಮೂಡಿಸಿದೆ. ಈ ವೇಳೆ ಬಿಹಾರದ ಫಲಿತಾಂಶ ಹಾಗೂ ಕರ್ನಾಟಕದ ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ನಾಯಕರು ಚರ್ಚಿಸಿದ್ದಾರೆ. ಸಂಪುಟ ಪುನಾರಚನೆ ಪ್ರಸ್ತಾಪವನ್ನು ಸಿಎಂ ಇಟ್ಟಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ಅವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎನ್ನಲಾಗಿದೆ.

