ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ಹಾಗೂ ವಿಪಕ್ಷ ನಾಯಕನ ಸ್ಥಾನದಲ್ಲಿ ಮುಂದುವರಿಯುವ ವಿಚಾರವಾಗಿ ಹೈಕಮಾಂಡ್ ಜೊತೆ ಮಾತುಕತೆಗೆ ತೆರಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ ಉಲ್ಟಾ ಆಗಿದೆ. ಮಂಗಳವಾರ ಸೋನಿಯ ಗಾಂಧಿ ಜೊತೆಗಿನ ಸಭೆ ವಿಫಲವಾದ ಬೆನ್ನಲೇ ಇಂದು ರಾಹುಲ್ ಗಾಂಧಿ ಭೇಟಿಗೆ ಮುಂದಾಗಿರುವ ಸಿದ್ದರಾಮಯ್ಯ ಕಡೆಯ ದಾಳ ಉರುಳಿಸಲು ಮುಂದಾಗಿದ್ದಾರೆ.
ಹೈಕಮಾಂಡ್ ಬುಲಾವ್ ಮೆರೆಗೆ ದೆಹಲಿಗೆ ತೆರಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳವಾರ ಎಐಸಿಸಿ ಅಧ್ಯಕ್ಷೆ ಸೋನಿಯ ಗಾಂಧಿ ಭೇಟಿಯಾಗಿದ್ದರು. ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ನಾಯಕನ ಸ್ಥಾನ ಸಂಬಂಧ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಈ ಚರ್ಚೆ ವೇಳೆ ಡಿ.ಕೆ ಶಿವಕುಮಾರ್ ಯಾವುದೇ ಕಾರಣಕ್ಕೂ ಕೆಪಿಸಿಸಿ ಪಟ್ಟ ಕಟ್ಟಬಾರದು ಇದರಿಂದ ಪಕ್ಷಕ್ಕೆ ಡ್ಯಾಮೇಜ್ ಆಗಲಿದೆ ಎಂದಿರುವ ಅವರು ತಮ್ಮ ಟೀಂನಾ ಉತ್ತರ ಕರ್ನಾಟಕ ಲಿಂಗಾಯತ ಸಮುದಾಯದ ನಾಯಕ ಎಂ.ಬಿ ಪಾಟೀಲ್ ಅಥವಾ ಒಕ್ಕಲಿಗ ಸಮುದಾಯದ ಪೈಕಿ ಕೃಷ್ಣ ಬೈರೇಗೌಡ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
Advertisement
Advertisement
ಆದರೆ ಹೈಕಮಾಂಡ್ ಸಿದ್ದರಾಮಯ್ಯ ಮಾತಿಗೆ ಸೊಪ್ಪು ಹಾಕಿಲ್ಲ. ಡಿ.ಕೆ ಶಿವಕುಮಾರ್ ಗೆ ಯಾಕೆ ಅವಕಾಶ ನೀಡಬಾರದು ಎಂದು ಮರು ಪ್ರಶ್ನಿಸಿದೆ. ಅಲ್ಲದೇ ಬೇರೆ ಬೇರೆ ಸಂದರ್ಭದಲ್ಲಿ ಡಿಕೆಶಿ ಪಕ್ಷಕ್ಕೆ ನೆರವಾಗಿದ್ದು ಒಂದು ಅವಕಾಶ ಕೊಟ್ಟು ನೋಡೋಣ, ನೀವೂ ವಿಪಕ್ಷ ಸ್ಥಾನದಲ್ಲಿ ಮುಂದುವರಿಬಹುದಲ್ಲ ಎಂದಿದ್ದಾರೆ ಎಂದು ಹೇಳಲಾಗುತ್ತಿದೆ. ಇದರಿಂದ ಬೇಸರಿಗೊಂಡಿರುವ ಸಿದ್ದರಾಮಯ್ಯ ಏನನ್ನು ಉತ್ತರಿಸದೇ ವಾಪಸ್ ಬಂದಿದ್ದಾರೆ ಎನ್ನಲಾಗಿದೆ
Advertisement
ಸೋನಿಯ ಗಾಂಧಿ ಪ್ರತಿಕ್ರಿಯೆಯಿಂದ ಶಾಕ್‍ಗೆ ಒಳಗಾದ ಸಿದ್ದರಾಮಯ್ಯ ಇಂದು ರಾಹುಲ್ ಗಾಂಧಿ ಭೇಟಿಗೆ ಮುಂದಾಗಿದ್ದಾರೆ. ರಾಹುಲ್ ಗಾಂಧಿ ಭೇಟಿ ಮಾಡುವ ಮೂಲಕ ಕಡೆಯ ದಾಳ ಉರುಳಿಸಲು ಮುಂದಾಗಿದ್ದಾರೆ. ಮತ್ತು ರಾಹುಲ್ ಗಾಂಧಿ ಮೂಲಕ ಸೋನಿಯ ಗಾಂಧಿ ಅವರನ್ನು ಒಪ್ಪಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಮಂಗಳವಾರ ಸಂಜೆಯೇ ರಾಹುಲ್ ಗಾಂಧಿ ಭೇಟಿಗೆ ಪ್ರಯತ್ನಿಸಿದ್ದರು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆ ಇಂದು ಬೆಳಗ್ಗೆ ದೆಹಲಿಯ ತುಘಲಕ್ ಲೇನ್ ನಲ್ಲಿರುವ ನಿವಾಸದಲ್ಲಿ ಸಿದ್ದು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಲಿದ್ದಾರೆ.