ಬೆಂಗಳೂರು: ವಿಧಾನಸಭಾ ವಿರೋಧ ಪಕ್ಷದ ನಾಯಕರಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಹೈಕಮಾಂಡ್ ಅವರಿಗೆ ದೆಹಲಿಗೆ ಆಗಮಿಸುವಂತೆ ಬುಲಾವ್ ನೀಡಿದೆ.
ವಿಪಕ್ಷ ನಾಯಕರಾದ ಬಳಿಕ ಸ್ವತಃ ಸೋನಿಯಾ ಗಾಂಧಿ ಅವರೇ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಅಕ್ಟೋಬರ್ 17 ರಂದು ಸಿದ್ದರಾಮಯ್ಯ ಅವರು ದೆಹಲಿಗೆ ತೆರಳುತ್ತಿದ್ದು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಿದ್ದಾರೆ. ತಮನ್ನು ವಿಪಕ್ಷ ನಾಯಕರಾಗಿ ಆಯ್ಕೆ ಮಾಡಿದ್ದಕ್ಕೆ ಇದೇ ವೇಳೆ ಸಿದ್ದರಾಮಯ್ಯ ಅವರು ಕೃತಜ್ಞತೆ ಅರ್ಪಿಸಲಿದ್ದಾರೆ.
Advertisement
Advertisement
ಭೇಟಿಯ ಸಂದರ್ಭದಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ನಿವಾಸ, ಸಂಸ್ಥೆಗಳ ಮೇಲೆ ಐಟಿ ದಾಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಾಗುತ್ತಿರುವ ವಿದ್ಯಮಾನಗಳ ಕುರಿತು ವರಿಷ್ಠರಿಗೆ ಸಿದ್ದರಾಮಯ್ಯ ವರದಿ ಕೊಡಲಿದ್ದಾರೆ ಎನ್ನಲಾಗಿದೆ. ಅಲ್ಲದೇ 15 ಕ್ಷೇತ್ರಗಳ ಉಪಚುನಾವಣೆ ತಯಾರಿ, ಅಭ್ಯರ್ಥಿಗಳ ಆಯ್ಕೆ, ಬಿಜೆಪಿಯಿಂದ ಬರುವವರ ಕುರಿತು ಸಹ ಚರ್ಚಿಸಲಿದ್ದಾರೆ ಎನ್ನಲಾಗಿದೆ.
Advertisement
ಕಳೆದ ತಿಂಗಳು ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದ್ದರು. ಈ ವೇಳೆ ಸೋನಿಯಾ ಗಾಂಧಿ ಅವರು ಸಿದ್ದರಾಮಯ್ಯ ಅವರ ಭೇಟಿಗೆ ಸಮಯಾವಕಾಶ ನೀಡದೇ ವಾಪಸ್ ಕಳಿಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಮಾಜಿ ಡಿಸಿಎಂ ಪರಮೇಶ್ವರ್ ಮೇಲಿನ ಐಟಿ ದಾಳಿ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಸೋನಿಯಾ ಗಾಂಧಿ ಅವರ ಭೇಟಿ ಭಾರೀ ಕುತೂಹಲ ಮೂಡಿಸಿದೆ.