ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಪಾದರಾಯನಪುರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿಎಸ್‍ವೈ ಅವರನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಮಾಜಿ ಸಿಎಂ, ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದು ಬರೆದು ಬಿಎಸ್‍ವೈ ಅವರಿಗೆ ಟ್ಯಾಗ್ ಮಾಡಿದ್ದಾರೆ.
Advertisement
ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ.
ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು @CMofKarnataka ಅವರನ್ನು ಒತ್ತಾಯಿಸುತ್ತೇನೆ.#coronavirusinindia
1/2
— Siddaramaiah (@siddaramaiah) April 20, 2020
Advertisement
ಮತ್ತೊಂದು ಟ್ವೀಟ್ ನಲ್ಲಿ ಕೊರೊನಾ ಸೋಂಕಿನಿಂದ ನಮ್ಮನ್ನು ರಕ್ಷಿಸಲು ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಆರೋಗ್ಯವನ್ನು ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ. ಅವರಿಗೆ ಸಹಕರಿಸುವುದು ನಮ್ಮ ಕರ್ತವ್ಯ. ಗಾಳಿ ಸುದ್ದಿಯಿಂದ ಪ್ರಚೋದನೆಗೊಳಗಾಗದೆ ಜನ ಸಂಯಮದಿಂದ ವರ್ತಿಸಬೇಕೆಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.
Advertisement
ನಡೆದಿದ್ದನು..?
ಕೊರೊನಾ ಸೋಂಕಿತರು ಹೆಚ್ಚು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾದರಾಯನಪುರವನ್ನು ಸಂಪೂರ್ಣವಾಗಿ ಸೀಲ್‍ಡೌನ್ ಮಾಡಲಾಗಿತ್ತು. ಪಾದರಾಯನಪುರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ಮಾರ್ಗಗಳನ್ನು ಬಂದ್ ಮಾಡಿ, ಪ್ರಮುಖ ರಸ್ತೆಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಭಾನುವಾರ ಕೊರೊನಾ ಶಂಕಿತ 58 ಮಂದಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿ ಮುಂದಾಗಿದ್ದರು.
Advertisement
ಕೊರೊನಾ ಸೋಂಕಿನಿಂದ ನಮ್ಮನ್ನು ರಕ್ಷಿಸಲು ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಆರೋಗ್ಯವನ್ನು ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ.
ಅವರಿಗೆ ಸಹಕರಿಸುವುದು ನಮ್ಮ ಕರ್ತವ್ಯ.
ಗಾಳಿ ಸುದ್ದಿಯಿಂದ ಪ್ರಚೋದನೆಗೊಳಗಾಗದೆ ಜನ ಸಂಯಮದಿಂದ ವರ್ತಿಸಬೇಕೆಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ.
2/2#coronavirusinindia
— Siddaramaiah (@siddaramaiah) April 20, 2020
ಈ ವೇಳೆ ಪುಂಟರು ಗುಂಪು ಗುಂಪಾಗಿ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದರು. ಅಲ್ಲದೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮತ್ತು ಚೆಕ್‍ಪೋಸ್ಟ್ ಧ್ವಂಸಗೊಳಿಸಿದ್ದರು. ಸ್ಥಳದಲ್ಲಿ ಕೆಲ ಪೊಲೀಸರು ಇದ್ದಿದ್ದರಿಂದ ಪುಂಡರು ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೆ ಮುಂದಾಗಿದ್ದರು. ಘಟನೆ ವಿಕೋಪ ತಿರುಗುತ್ತಿದ್ದಂತೆ ಪಾದರಾಯನಪುರಕ್ಕೆ ಪೊಲೀಸರ ನಿಯೋಗವೇ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಘಟನೆಗೆ ಸಂಬಂಧಿಸಿದಂತೆ ಸದ್ಯ 60 ಮಂದಿಯನ್ನು ಬಂಧಿಸಲಾಗಿದೆ.