ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
Advertisement
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜ್‌ಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ-ಅಭಿಮಾನ ದೊಡ್ಡದು. ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಿಂದಗಿ ಉಪ ಚುನಾವಣೆ: 4,031 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ
Advertisement
ಯಾವ ಪ್ರಶಸ್ತಿ ಗೌರವಗಳಿಗಿಂತಲೂ
ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ
ಪ್ರೀತಿ-ಅಭಿಮಾನ ದೊಡ್ಡದು.
ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು
ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಮನವಿ ಮಾಡುತ್ತೇನೆ.@PMOIndia pic.twitter.com/Zll2NtpRPs
— Siddaramaiah (@siddaramaiah) November 1, 2021
Advertisement
ನಟ ಪುನೀತ್ ರಾಜ್‌ಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂಬ ಒತ್ತಾಯವೂ ಕೇಳಿಬಂದಿದೆ. ಅವರಿಗೆ ಸರ್ಕಾರದಿಂದ ಯಾವ ಪ್ರಶಸ್ತಿ ನೀಡಬೇಕು ಎಂಬ ಬಗ್ಗೆ ಉಪ ಚುನಾವಣೆ ಫಲಿತಾಂಶದ ನಂತರ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದರು. ಇದನ್ನೂ ಓದಿ: ಮಗ ಮನೆಗೆ ಹಿಂದಿರುಗುತ್ತಿದ್ದಂತೆ ಶಾರೂಖ್ ನಿವಾಸದಲ್ಲಿ ಕಳೆಕಟ್ಟಿದ ದೀಪಾವಳಿ ಹಬ್ಬದ ಸಂಭ್ರಮ
Advertisement
ನಟ ಪುನೀತ್ ರಾಜ್‌ಕುಮಾರ್ ಅವರು ಹೃದಯ ಸ್ತಂಭನದಿಂದ ಶುಕ್ರವಾರ ನಿಧನರಾದರು. ಅವರ ನಟನೆ, ಸಾಮಾಜಿಕ ಸೇವೆಯನ್ನು ಪರಿಗಣಿಸಿ ಮರಣೋತ್ತರ ಗೌರವ ಸಲ್ಲಿಸಬೇಕು ಎಂದು ಸಾರ್ವಜನಿಕರ ಒತ್ತಾಯವಾಗಿದೆ.