ಬೆಂಗಳೂರು: ಸಂವಿಧಾನ (Constitution of India) ಬದಲಾವಣೆ ಮಾಡಿದರೆ ದೇಶದಲ್ಲಿ ರಕ್ತಪಾತವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ಅನಂತ್ ಕುಮಾರ್ ಹೆಗಡೆಯವರ (Anantkumar Hegde) ಸಂವಿಧಾನ ತಿದ್ದುಪಡಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಹೇಳಿಕೆ ಮೊದಲ ಬಾರಿಯಲ್ಲ. ಈ ಹಿಂದೆ ಮಂತ್ರಿಯಾಗಿದ್ದಾಗಲೂ ಇದನ್ನೇ ಹೇಳಿದ್ದರು. ಮೋದಿ ಪ್ರಧಾನಿಯಾಗಿದ್ದಾಗಲೇ ಅವರು ಹೇಳಿದ್ದರು. ಮೋದಿಯವರು ಅವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲಿಲ್ಲ. ಇದು ಬಿಜೆಪಿಯವರ ಹಿಡನ್ ಅಜೆಂಡಾ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: SBIಗೆ ಹಿನ್ನಡೆ- ನಾಳೆಯೊಳಗೆ ಚುನಾವಣಾ ಬಾಂಡ್ ಮಾಹಿತಿ ನೀಡಲು ಸುಪ್ರೀಂ ಸೂಚನೆ
ಸಂವಿಧಾನ ಬದಲಾವಣೆ ಮಾಡಬೇಕು ಎನ್ನುವುದು ಬಿಜೆಪಿಗರ ಹಿಡನ್ ಅಜೆಂಡಾ. ಸಂವಿಧಾನಕ್ಕೆ ಅನಗತ್ಯ ವಿಚಾರಗಳನ್ನ ಸೇರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಸಂವಿಧಾನ ಬದಲಾವಣೆ ಮಾಡಬೇಕು, ಇದಕ್ಕಾಗಿ 2/3 ಬಹುಮತ ಬೇಕು ಎಂದಿದ್ದಾರೆ. ದೇಶ ಉದ್ದಾರಕ್ಕೆ, ಬಡವರ ಉದ್ದಾರಕ್ಕೆ ಅಲ್ಲ. ಸಂವಿಧಾನ ಬದಲಾವಣೆಗಾಗಿ 2/3 ಬಹುಮತ ಕೇಳುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.
ಮನುವಾದವನ್ನು ಸಮರ್ಥನೆ ಮಾಡಿಕೊಳ್ಳೋದು, ಮನುಸ್ಮೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಎನ್ನುವುದು ಇವರ ಹಿಡನ್ ಅಜೆಂಡಾ. ಅದಕ್ಕೆ ಇಡೀ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರು ಎಲ್ಲರೂ ಇದನ್ನ ವಿರೋಧ ಮಾಡ್ತಾರೆ. ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ಹೆಗಡೆ ಮೂಲಕ ಇದನ್ನು ಹೇಳಿಸುತ್ತಿದ್ದಾರೆ. ಒಂದು ವೇಳೆ ಸಂವಿಧಾನ ಬದಲಾವಣೆಯ ಕೆಲಸವಾದರೆ ದೇಶದಲ್ಲಿ ರಕ್ತಪಾತವಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ಅನಂತ್ ಕುಮಾರ್ ಹೆಗಡೆ ಹೇಳಿಕೆ ವೈಯಕ್ತಿಕ ಎಂಬ ಬಿಜೆಪಿ ನಿಲುವಿನ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮಂತ್ರಿ ಮಂಡಲದಲ್ಲಿದ್ದುಕೊಂಡು ಅದು ವೈಯಕ್ತಿಕ ಹೇಳಿಕೆ ಆಗುತ್ತಾ? ಸರ್ಕಾರ ಎಂದರೆ ಅದು ಪಕ್ಷದ ಹೇಳಿಕೆ. ಈಗ ಸಿಟ್ಟಿಂಗ್ ಎಂಪಿ, ಅವರು ಸ್ಟೇಟ್ಮೆಂಟ್ ಕೊಡ್ತಾರೆ ಅಂದ್ರೆ ಏನು? ಅವರು ಸಿನೀಯರ್ ಸಂಸದರು. ನಮ್ಗೂ ಅದಕ್ಕೂ ಸಂಬಂಧವಿಲ್ಲ ಅಂದ್ರೆ ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.
ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ಸರ್ವಾಧಿಕಾರದಲ್ಲಿ ನಂಬಿಕೆ ಇದೆ. ಸರ್ವಾಧಿಕಾರಿ ವ್ಯವಸ್ಥೆ ತರಬೇಕು ಎನ್ನುವುದು ಅವರ ಉದ್ದೇಶ. ಸಂವಿಧಾನ ಸಮಸಮಾಜವನ್ನು ಬಯಸುತ್ತದೆ. ಅವಕಾಶ ವಂಚಿತರಿಗೆ ನ್ಯಾಯ ಒದಗಿಸುತ್ತೆ. ನಮ್ಮ ಸಂವಿಧಾನಲ್ಲಿ ಸಮಾನತೆ, ಸ್ವಾತಂತ್ರ್ಯ, ಭ್ರ್ರಾತೃತ್ವ ಇದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: 28ಕ್ಕೆ 28 ಗೆಲ್ಲುವ ಗುರಿ ಇದ್ದು 28ಕ್ಕೆ 25 ಗೆದ್ದೇ ಗೆಲ್ತೀವಿ: ಬಿಎಸ್‍ವೈ